ಸಾರಾಂಶ
ಕನ್ನಡಪ್ರಭ ವಾರ್ತೆ ಮಂಡ್ಯ
ಮಾನವ ದಿನಗಳು ಕಡಿಮೆ ಇರುವ ಗ್ರಾಮ ಪಂಚಾಯ್ತಿಯಲ್ಲಿ ವಿಶೇಷ ಚಟುವಟಿಕೆಗಳನ್ನು ಆಯೋಜಿಸಿ ನರೇಗಾ ಯೋಜನೆಯಲ್ಲಿ ಪ್ರಗತಿ ಸಾಧಿಸಲು ಅಧಿಕಾರಿಗಳು ಕ್ರಮ ವಹಿಸಬೇಕು ಗ್ರಾಮ ಪಂಚಾಯ್ತಿಗಳಿಗೆ ನಿಗದಿಪಡಿಸಿರುವ ಗುರಿಗೆ ಅನುಗುಣವಾಗಿ ಮಾನವ ದಿನ ಸೃಜಿಸಿ ಎಂದು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಆರ್.ನಂದಿನಿ ತಿಳಿಸಿದರು.ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ನರೇಗಾ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪ್ರತಿ ಗ್ರಾಮ ಪಂಚಾಯ್ತಿಯಲ್ಲಿ ಸಕ್ರಿಯವಾಗಿ ಕೂಲಿಕಾರರು ಕೆಲಸದಲ್ಲಿ ತೊಡಗಿರುವಂತೆ ಉದ್ಯೋಗ ನೀಡಬೇಕು. ಎನ್‌ಎನ್‌ಎಂಎಸ್ ಪರಿಶೀಲನೆಯನ್ನು ಕಡ್ಡಾಯವಾಗಿ ನಡೆಸಬೇಕು. ಈ ಹಿಂದಿನ ಸಾಲಿನಲ್ಲಿ ಪ್ರಗತಿಯಲ್ಲಿರುವ ಕೂಲಿ ಆಧಾರಿತ ಕಾಮಗಾರಿಗಳನ್ನು ಬಾಕಿ ಇರುವ ಮಾನವ ದಿನ ಸೃಜಿಸಿ ಮೇ ಅಂತ್ಯಕ್ಕೆ ಮುಕ್ತಾಯಗೊಳ್ಳಿಸುವಂತೆ ಸೂಚಿಸಿದರು.
ಹಳೆಯ ವರ್ಷದಲ್ಲಿ ಬಾಕಿ ಇರುವ ಕಾಮಗಾರಿಗಳನ್ನು ಮುಕ್ತಾಯಗೊಳಿಸಲು ಕ್ರಮ ವಹಿಸುವುದು. ಜಿಲ್ಲೆಗೆ ನಿಗದಿಪಡಿಸಿರುವ ಗುರಿಗೆ ಅನುಗುಣವಾಗಿ ಬೂದು ನೀರು ನಿರ್ವಹಣೆ ಸಂಬಂಧಿಸಿದ ಟೆಂಡರ್ ಪ್ರಕ್ರಿಯೆ ಸ್ಥಳ ಪರಿಶೀಲನೆ ನಡೆಸಿ ನಿಯಮಾನುಸಾರ ಕಾಮಗಾರಿ ನಡೆಸಬೇಕು ಎಂದರು.ಕಾಲಕಾಲಕ್ಕೆ ಸಾಮಾಜಿಕ ಲೆಕ್ಕ ಪರಿಶೋಧನೆ ಸಭೆ ನಡೆಸಿ ಆಕ್ಷೇಪ ಪ್ರಕರಣದ ಕಾಮಗಾರಿಗಳನ್ನು ತೀರುವಳಿಗೊಳಿಸಿ ಮುಕ್ತಾಯಗೊಳಿಸಲು ಮತ್ತು ಪ್ರಗತಿ ಹಂತದಲ್ಲಿರುವ ಸಂಜೀವಿನಿ ಶೆಡ್‌ಗಳನ್ನು ಪೂರ್ಣಗೊಳಿಸಲು ಕ್ರಮವಹಿಸಬೇಕು. ನರೇಗಾ ಯೋಜನೆಯಡಿ ರಸ್ತೆ ಬದಿ ನೆಡುತೋಪುಗಳಲ್ಲಿ ಗಿಡಗಳನ್ನು ನೆಡುವುದಕ್ಕೆ ಜಾಗಕ್ಕೆ ಅನುಗುಣವಾಗಿ ನರ್ಸರಿ ಗಿಡಗಳನ್ನು ನಿರ್ವಹಣೆ ಮಾಡಲು ನರೇಗಾ ಕೂಲಿಕಾರರು ಕೆಲಸ ನಿರ್ವಹಿಸಬೇಕು. ಕೃಷಿ ಇಲಾಖೆಯಡಿ ನರೇಗಾ ಯೋಜನೆಯ ಬದು ನಿರ್ಮಾಣ ಕಾಮಗಾರಿಗಳ ಪ್ರಗತಿ ಸಾಧಿಸಲು ಸೂಚಿಸಿದರು.
ಇದೇ ವೇಳೆ ಉಪಕಾರ್ಯದರ್ಶಿ (ಅಭಿವೃದ್ಧಿ) ಲಕ್ಷ್ಮೀ, ಸಹಾಯಕ ಕಾರ್ಯದರ್ಶಿ (ಅಭಿವೃದ್ಧಿ) ಚಂದ್ರ, ಕಾರ್ಯನಿರ್ವಾಹಕ ಅಧಿಕಾರಿಗಳು, ತಾಲೂಕು ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳು ಮತ್ತು ನರೇಗಾ ಯೋಜನೆ ಸಿಬ್ಬಂದಿ ಹಾಜರಿದ್ದರು.