ಸಾರಾಂಶ
ಬಾಗಲಕೋಟೆ : ಗುಳೇದಗುಡ್ಡ ತಾಲೂಕಿನ ಕೆಲವಡಿ ಮತ್ತು ಹಂಗರಗಿ ಗ್ರಾಮ ಪಂಚಾಯತಿಗಳಿಗೆ ಭೇಟಿ ನೀಡಿ ಉದ್ಯೋಗ ಖಾತ್ರಿಯಡಿ ಕೆರೆ ಹೂಳೆತ್ತುವ ಕಾಮಗಾರಿ ಸ್ಥಳಕ್ಕೆ ಜಿಪಂ ಸಿಇಒ ಶಶಿಧರ ಕುರೇರ ಭೇಟಿ ನೀಡಿ ಪರಿಶೀಲಿಸಿದರು.
ಕನ್ನಡಪ್ರಭ ವಾರ್ತೆ ಬಾಗಲಕೋಟೆ
ಜಿಲ್ಲೆಯ ಗುಳೇದಗುಡ್ಡ ತಾಲೂಕಿನ ಕೆಲವಡಿ ಮತ್ತು ಹಂಗರಗಿ ಗ್ರಾಮ ಪಂಚಾಯತಿಗಳಿಗೆ ಭೇಟಿ ನೀಡಿ ಉದ್ಯೋಗ ಖಾತ್ರಿ ಯೋಜನೆಯಡಿ ಕೆರೆ ಹೂಳೆತ್ತುವ ಕಾಮಗಾರಿ ಸ್ಥಳಕ್ಕೆ ಜಿಲ್ಲಾ ಪಂಚಾಯತಿ ಸಿಇಒ ಶಶಿಧರ ಕುರೇರ ಭೇಟಿ ನೀಡಿ ಪರಿಶೀಲಿಸಿದರು.ಗುರುವಾರ ಜಿಲ್ಲಾ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ವಿವಿಧ ಕಾಮಗಾರಿ ಪರಿಶೀಲನೆ ಸಮಯದಲ್ಲಿ ಕೆರೆ ಹೂಳೆತ್ತುವ ಸ್ಥಳಕ್ಕೆ ಭೇಟಿ ನೀಡಿ ಕೂಲಿಕಾರ್ಮಿಕರ ಜೊತೆ ಮಾತನಾಡಿ ಕೂಲಿ ಸಮಯಕ್ಕೆ ಸರಿಯಾಗಿ ಬರುತ್ತಿರುವ ಬಗ್ಗೆ ಮಾಹಿತಿ ಪಡೆದುಕೊಂಡರು. ಅಲ್ಲದೆ ಕೂಲಿ ಕಾರ್ಮಿಕರ ಹಾಜರಾಗಿ ಸಹ ಪರಿಶೀಲಿಸಿದರು. ಅರಣ್ಯ ಇಲಾಖೆಯಿಂದ ಉದ್ಯೋಗ ಖಾತ್ರಿ ಯೋಜನೆಯಡಿ ಸಸಿ ನೆಡುವ ಕಾಮಗಾರಿಯನ್ನು ಸಹ ವೀಕ್ಷಿಸಿದರು.ಗುಳೇದಗುಡ್ಡ ತಾಲೂಕಿನ ಕೆಲವಡಿ, ಲಿಂಗಾಪೂರ, ಹಂಗರಗಿಯಲ್ಲಿ ಬ್ಲಾಕ್ ಪ್ಲಾಂಟೇಶನ್ ಕಾಮಗಾರಿ ಹಾಗೂ ಬಾದಾಮಿ ತಾಲೂಕಿನ ಕೆಂದೂರ, ಮಹಾಕೂಟ ಮೊರಮ್ ರಸ್ತೆ ಕಾಮಗಾರಿ, ಬನಶಂಕರಿಯಲ್ಲಿ ಸಾಮಾಜಿಕ ಅರಣ್ಯ ವಿಭಾಗದಿಂದ ಸರ್ನರಿ ಕಾಮಗಾರಿಗಳನ್ನು ಪರಿಶೀಲನೆ ಮಾಡಿದರು. ಈ ಸಂದರ್ಭದಲ್ಲಿ ತಾಪಂ ಸಹಾಯಕ ನಿರ್ದೇಶಕರು, ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಇದ್ದರು.