ಅರಣ್ಯವಾಸಿಗಳ ಜಿಪಿಎಸ್‌ ಸರ್ವೆ ನಕಾಶೆಗೆ ಮಾನ್ಯತೆ ಇಲ್ಲ: ರವೀಂದ್ರ ನಾಯ್ಕ

| Published : Dec 24 2024, 12:49 AM IST

ಅರಣ್ಯವಾಸಿಗಳ ಜಿಪಿಎಸ್‌ ಸರ್ವೆ ನಕಾಶೆಗೆ ಮಾನ್ಯತೆ ಇಲ್ಲ: ರವೀಂದ್ರ ನಾಯ್ಕ
Share this Article
  • FB
  • TW
  • Linkdin
  • Email

ಸಾರಾಂಶ

ವಲಯ ಅರಣ್ಯ ಅಧಿಕಾರಿ, ಕಂದಾಯ ಅಧಿಕಾರಿ, ಅರಣ್ಯ ಹಕ್ಕು ಸಮಿತಿ ದೃಢೀಕರಣವಿಲ್ಲದ ಜಿಪಿಎಸ್ ನಕಾಶೆಗೆ ಕಾನೂನು ಮಾನ್ಯತೆ ಇರುವುದಿಲ್ಲ ಎಂದು ರಾಜ್ಯ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಅಧ್ಯಕ್ಷ ರವೀಂದ್ರ ನಾಯ್ಕ ತಿಳಿಸಿದರು.

ಶಿರಸಿ: ಅರಣ್ಯ ಹಕ್ಕು ಕಾಯಿದೆ ಅಡಿಯಲ್ಲಿ ಅರಣ್ಯವಾಸಿಗಳ ಸಾಗುವಳಿಗೆ ಸಂಬಂಧಿಸಿದ ಜಿಪಿಎಸ್ ಸರ್ವೆಯ ನಕಾಶೆಗೆ ಯಾವುದೇ ಕಾನೂನು ಮಾನ್ಯತೆ ಇಲ್ಲ. ಜಿಲ್ಲಾದ್ಯಂತ ಅರಣ್ಯವಾಸಿಯ ಸುಮಾರು ೫೦೦೦೦ಕ್ಕೂ ಮಿಕ್ಕಿ ಜಿಪಿಎಸ್ ದಾಖಲೆಗಳು ಅತಂತ್ರವಾಗಲಿದೆ ಎಂಬ ಆತಂಕದ ಅಂಶ ಬೆಳಕಿಗೆ ಬಂದಿದೆ ಎಂದು ರಾಜ್ಯ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಅಧ್ಯಕ್ಷ ರವೀಂದ್ರ ನಾಯ್ಕ ತಿಳಿಸಿದರು.ಸೋಮವಾರ ನಗರದ ಅರಣ್ಯಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಕಾರ್ಯಾಲಯದಲ್ಲಿ ಅರಣ್ಯ ಇಲಾಖೆಯವರು ಕಾನೂನು ಮಾನ್ಯತೆ ಇಲ್ಲದ ಸಾವಿರಾರು ಜಿಪಿಎಸ್ ನಕಾಶೆಯನ್ನು ಪ್ರದರ್ಶಿಸಿ ಮಾತನಾಡಿದರು.ಅರಣ್ಯ ಹಕ್ಕು ಕಾಯಿದೆ, ಕೇಂದ್ರ ಮತ್ತು ರಾಜ್ಯ ಸರ್ಕಾರದ ಆದೇಶ, ಸುತ್ತೋಲೆ ಮತ್ತು ಕಾನೂನಿನ ಮಾನದಂಡದ ಹೊರತಾಗಿ ಜಿಪಿಎಸ್ ನಕಾಶೆ ತಯಾರಿಸಿ ಅರಣ್ಯವಾಸಿಯ ಪ್ರಕರಣದ ಕಡತದಲ್ಲಿ ಸೇರಿಸಲಾಗಿದೆ. ವಲಯ ಅರಣ್ಯ ಅಧಿಕಾರಿ, ಕಂದಾಯ ಅಧಿಕಾರಿ, ಅರಣ್ಯ ಹಕ್ಕು ಸಮಿತಿ ದೃಢೀಕರಣವಿಲ್ಲದ ಜಿಪಿಎಸ್ ನಕಾಶೆಗೆ ಕಾನೂನು ಮಾನ್ಯತೆ ಇರುವುದಿಲ್ಲ ಎಂದರು.ಜಿಲ್ಲಾ ಸಂಚಾಲಕ ಇಬ್ರಾಹಿಂ ಗೌಡಳ್ಳಿ, ಪ್ರಮುಖರಾದ ರಮೇಶ ಮರಾಠಿ, ಗಂಗೂಬಾಯಿ ರಜಪೂತ್, ನಾಗರಾಜ ದೇವಸ್ಥಲ್, ರಾಘವೇಂದ್ರ ಶೆಟ್ಟಿ, ನವೀನ್ ಜೈನ್, ಶಿವು ಮರಾಠಿ, ಗಣಪ ಗೌಡ, ಯಶೋದ, ಕಲ್ಪನಾ ಪಾವಸ್ಕರ, ಅಬ್ದುಲ್ ರಪೀಕ್ ಗಫಾರ್ ಮುಂತಾದವರು ಉಪಸ್ಥಿತರಿದ್ದರು.ಬೆಳಗಾವಿ ಅಧಿವೇಶನ: ವಿವೇಕ ಹೆಬ್ಬಾರ ಸಭೆ

ಮುಂಡಗೋಡ: ಡಿಸೆಂಬರ ೨೭ರಂದು ಬೆಳಗಾವಿಯಲ್ಲಿ ನಡೆಯಲಿರುವ ಅಖಿಲ ಭಾರತ ಕಾಂಗ್ರೆಸ್ ೧೦೦ನೇ ವರ್ಷದ ಐತಿಹಾಸಿಕ ಅಧಿವೇಶನದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸ್ವಯಂಪ್ರೇರಿತರಾಗಿ ಪಾಲ್ಗೊಂಡು ಕಾಂಗ್ರೆಸ್ ಚರಿತ್ರೆಯನ್ನು ತಿಳಿದುಕೊಳ್ಳಬೇಕು ಎಂದು ಕೆಪಿಸಿಸಿ ಸದಸ್ಯ ವಿವೇಕ ಹೆಬ್ಬಾರ ತಿಳಿಸಿದರು.ಇತ್ತೀಚೆಗೆ ಕಾರ್ಯಕರ್ತರ ಸಭೆ ನಡೆಸಿದ ಅವರು, ೧೯೨೪ರಂದು ಮಹಾತ್ಮ ಗಾಂಧಿ ಅವರ ಅಧ್ಯಕ್ಷತೆಯಲ್ಲಿ ಸ್ವಾತಂತ್ರ್ಯ ಹೋರಾಟಕ್ಕಾಗಿ ಐತಿಹಾಸಿಕ ಅಧಿವೇಶನ ನಡೆದಿತ್ತು. ಅಂದಿನ ೧೦೦ ವರ್ಷದ ಸವಿನೆನಪಿಗಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಧ್ಯಕ್ಷತೆಯಲ್ಲಿ ನಡೆಯುತ್ತಿದ್ದು, ರಾಜ್ಯಾಧ್ಯಕ್ಷರ ಆದೇಶದಂತೆ ನಮ್ಮ ಯಲ್ಲಾಪುರ- ಮುಂಡಗೋಡ- ಬನವಾಸಿ ವಿಧಾನಸಭಾ ಕ್ಷೇತ್ರದಿಂದ ದೊಡ್ಡ ಪ್ರಮಾಣದಲ್ಲಿ ಕಾರ್ಯಕರ್ತರ ಪಡೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದು, ಈ ಅವಕಾಶವನ್ನು ಯಾರೂ ತಪ್ಪಿಸಿಕೊಳ್ಳಬಾರದು ಎಂದು ಹೇಳಿದರು.

ಈ ಸಂದರ್ಭದಲ್ಲಿ ಮಾಜಿ ಶಾಸಕ ವಿ.ಎಸ್. ಪಾಟೀಲ ಮುಂಡಗೋಡ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣ ಹಿರೇಹಳ್ಳಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕ್ಷೇತ್ರದ ಉಸ್ತುವಾರಿ ರಾಬರ್ಟ್, ಯಲ್ಲಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎನ್.ಕೆ. ಭಟ್, ಬನವಾಸಿ ಬ್ಲಾಕ್ ಕಾಂಗ್ರೆಸ್‌ನ ಸಿ.ಎಫ್. ನಾಯ್ಕ, ಜಿಲ್ಲಾ ಕಾಂಗ್ರೆಸ್ ಎಸ್.ಸಿ., ಎಸ್.ಟಿ. ಅಧ್ಯಕ್ಷ ಬಸವರಾಜ ದೊಡ್ಡಮನಿ ಮುಂತಾದವರು ಉಪಸ್ಥಿತರಿದ್ದರು.