ಕಾಂಗ್ರೆಸ್ ನಾಯಕರಿಂದಲೇ ವಕ್ಫ್ ಭೂಮಿ ಕಬಳಿಕೆ: ಉದಯ್ ಕುಮಾರ್ ಶೆಟ್ಟಿ ಆರೋಪ

| Published : Nov 06 2024, 12:34 AM IST

ಕಾಂಗ್ರೆಸ್ ನಾಯಕರಿಂದಲೇ ವಕ್ಫ್ ಭೂಮಿ ಕಬಳಿಕೆ: ಉದಯ್ ಕುಮಾರ್ ಶೆಟ್ಟಿ ಆರೋಪ
Share this Article
  • FB
  • TW
  • Linkdin
  • Email

ಸಾರಾಂಶ

ಕಾರ್ಕಳ ಬಂಡಿಮಠ ಬಸ್ ನಿಲ್ದಾಣದಲ್ಲಿ ಕಾರ್ಕಳ ಬಿಜೆಪಿ ಮಂಡಲ ವತಿಯಿಂದ ವಕ್ಫ್‌ನಿಂದ ಆಸ್ತಿ ಕಬಳಿಕೆ ವಿರುದ್ಧ ಪ್ರತಿಭಟನೆ ನಡೆಯಿತು.

ಕನ್ನಡಪ್ರಭ ವಾರ್ತೆ ಕಾರ್ಕಳ

ಕಾಂಗ್ರೆಸ್ ನಾಯಕರೇ 29000 ಎಕ್ರೆ ವಕ್ಫ್ ಭೂಮಿಯನ್ನು ಕಬಳಿಸಿದ್ದಾರೆ ಎಂದು ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕಿದಿಯೂರು ಉದಯ್ ಕುಮಾರ್ ಶೆಟ್ಟಿ ಆರೋಪಿಸಿದರು.

ಅವರು ಕಾರ್ಕಳ ಬಂಡಿಮಠ ಬಸ್ ನಿಲ್ದಾಣದಲ್ಲಿ ಕಾರ್ಕಳ ಬಿಜೆಪಿ ಮಂಡಲ ವತಿಯಿಂದ ವಕ್ಫ್‌ನಿಂದ ಆಸ್ತಿ ಕಬಳಿಕೆ ವಿರುದ್ಧ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದರು.

ಕಾರ್ಕಳ ಬಿಜೆಪಿ ಮಂಡಲ ಅಧ್ಯಕ್ಷ ನವೀನ್ ನಾಯಕ್ ಮಾತನಾಡಿ, ರಾಜ್ಯದಲ್ಲಿ ಲ್ಯಾಂಡ್ ಜಿಹಾದ್‌ಗೆ ರಾಜ್ಯ ಸರ್ಕಾರ ಪ್ರೇರಣೆ ನೀಡುತ್ತಿದೆ‌‌. ಪಹಣಿ ಪತ್ರದಲ್ಲಿ ವಕ್ಫ್ ಆಸ್ತಿ ಎಂದು ನಮೂದಿಸುವ ಮೂಲಕ ಅಲ್ಪಸಂಖ್ಯಾತರ ಓಲೈಕೆ ಮಾಡಿದಂತಿದೆ. ಸಚಿವ ಜಮೀರ್ ಅಹಮ್ಮದ್ ಅವಲರನ್ನು ಕೂಡಲೇ ಸಚಿವ ಸ್ಥಾನದಿಂದ ಕೆಳಗಿಳಿಸಿ, ಸಿದ್ದರಾಮಯ್ಯ ಜನರ ಕ್ಷಮೆ ಕೇಳಬೇಕು ಎಂದರು.

ಇದೇ ಸಂದರ್ಭದಲ್ಲಿ ಹಿಂದೂ ಮುಖಂಡ ಸುನೀಲ್ ಕೆ.ಆರ್., ಬಿಜೆಪಿ ಹಿರಿಯ ಮುಖಂಡ ಮಣಿರಾಜ ಶೆಟ್ಟಿ, ರೇಶ್ಮಾ ಶೆಟ್ಟಿ ಮೊದಲಾದವರು ಮಾತನಾಡಿದರು.

ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಮಹಾವೀರ ಹೆಗ್ಡೆ ಸೇರಿದಂತೆ ಬಿಜೆಪಿ ಪಕ್ಷದ ಮುಖಂಡರು ಉಪಸ್ಥಿತರಿದ್ದರು.ಬಂಡಿಮಠ ಬಸ್ ನಿಲ್ದಾಣದಿಂದ ಹೊರಟ ಬಿಜೆಪಿ ಪ್ರತಿಭಟನಾ ಮೆರವಣಿಗೆ ತಾಲೂಕು ಕಚೇರಿ ಬಳಿ ತೆರಳಿ ತಹಸೀಲ್ದಾರ್‌ಗೆ ಮನವಿ ಸಲ್ಲಿಸಲಾಯಿತು.