ಅಂಕಗಳಿಕೆ ನಮ್ಮ ಕಲಿಕೆಯ ಒಂದು ಭಾಗವೇ ಹೊರತು ಅದೇ ಶಿಕ್ಷಣದ ಮೂಲ ಗುರಿಯಲ್ಲ. ಜವಾಬ್ದಾರಿಯುತ ನಾಗರಿಕರನ್ನು ರೂಪಿಸುವುದು ಶಿಕ್ಷಣ ಮೂಲ ಅಶಯ. ಕಲಿತವರೆಲ್ಲರಿಗೂ ನಮ್ಮ ಸರ್ಕಾರಗಳು ಉದ್ಯೋಗ ಕೊಡಲು ಸಾಧ್ಯವಿಲ್ಲ. ವಿದ್ಯಾರ್ಥಿಗಳು ತಮ್ಮಲ್ಲಿ ಅಡಗಿರುವ ಸುಪ್ತ ಪ್ರತಿಭೆ ಅನಾವರಣ ಮಾಡಬೇಕು.
ಕನ್ನಡಪ್ರಭ ವಾರ್ತೆ ಕೆ.ಆರ್.ಪೇಟೆ
ವಿದ್ಯಾರ್ಥಿಗಳಲ್ಲಿ ತಮ್ಮಲ್ಲಿರುವ ಅಡಗಿರುವ ಸೂಪ್ತ ಪ್ರತಿಭೆ, ಕೌಶಲ್ಯ ಮತ್ತು ವ್ಯಕ್ತಿತ್ವ ವಿಕಸನಕ್ಕೆ ಶಾಲಾ ಕಾಲೇಜುಗಳಲ್ಲಿನ ವೇದಿಕೆಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಶಾಸಕ ಎಚ್.ಟಿ.ಮಂಜು ಕರೆ ನೀಡಿದರು.ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸ್ನಾತಕ ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಸಾಂಸ್ಕೃತಿಕ, ಕ್ರೀಡಾ, ಎನ್ಎಸ್ಎಸ್., ರೆಡ್‌ಕ್ರಾಸ್, ಭಾರತ್ ಸೌಟ್ಸ್ ಮತ್ತು ಗೈಡ್ಸ್ ಹಾಗೂ ರೆಡ್ ರಿಬ್ಬನ್ ಚಟುವಟಿಕೆಗಳ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ಅಂಕಗಳಿಕೆ ನಮ್ಮ ಕಲಿಕೆಯ ಒಂದು ಭಾಗವೇ ಹೊರತು ಅದೇ ಶಿಕ್ಷಣದ ಮೂಲ ಗುರಿಯಲ್ಲ. ಜವಾಬ್ದಾರಿಯುತ ನಾಗರಿಕರನ್ನು ರೂಪಿಸುವುದು ಶಿಕ್ಷಣ ಮೂಲ ಅಶಯ. ಕಲಿತವರೆಲ್ಲರಿಗೂ ನಮ್ಮ ಸರ್ಕಾರಗಳು ಉದ್ಯೋಗ ಕೊಡಲು ಸಾಧ್ಯವಿಲ್ಲ. ವಿದ್ಯಾರ್ಥಿಗಳು ತಮ್ಮಲ್ಲಿ ಅಡಗಿರುವ ಸುಪ್ತ ಪ್ರತಿಭೆ ಅನಾವರಣ ಮಾಡಿಕೊಂಡು ಸಮಾಜದ ವಿವಿಧ ಕ್ಷೇತ್ರಗಳಲ್ಲಿ ತಮ್ಮ ಛಾಪು ಮೂಡಿಸಬೇಕು ಎಂದರು.ವೃತ್ತಿ ಕೌಶಲ್ಯವನ್ನು ಪಡೆದುಕೊಂಡು ಸ್ವಯಂ ಉದ್ಯೋಗಿಗಳಾಗಿ ರೂಪುಗೊಳ್ಳಬೇಕು. ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಯ ಜೊತೆಗೆ ಅವರಲ್ಲಿ ಕ್ರೀಡಾ ಮನೋಭಾವ, ನಾಯಕತ್ವ ಗುಣ, ಸಾಮಾಜಿಕ ಜವಾಬ್ದಾರಿ, ಸೇವಾ ಮನೋಭಾವ ಹಾಗೂ ಸಾಂಸ್ಕೃತಿಕ ಅರಿವು ಬೆಳೆಸುವಲ್ಲಿ ಕಾಲೇಜು ಹಂತದ ಸಾಂಸ್ಕೃತಿಕ ಮತ್ತು ಕ್ರೀಡಾ ಚಟುವಟಿಕೆಗಳು ಮಹತ್ವದ ಪಾತ್ರ ವಹಿಸುತ್ತವೆ ಎಂದರು.
ಕಾಲೇಜಿನ ಪ್ರಾಂಶುಪಾಲ ಡಾ.ವಿ.ವಿ.ಜಗದೀಶ್ ಅಧ್ಯಕ್ಷತೆ ವಹಿಸಿದ್ದರು. ಕಾಮಿಡಿ ಕಿಲಾಡಿ ಖ್ಯಾತಿಯ ಹಾಸ್ಯನಟ ಮನೋಹರಗೌಡ ಹಾಸ್ಯರಂಜನೆ ನೀಡಿದರು.ಕಾಲೇಜಿನ ಹಿರಿಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಸಿ.ಬಿ.ಚೇತನ್‌ಕುಮಾರ್, ಕಾಲೇಜಿನ ಪ್ರಾಧ್ಯಾಪಕರಾದ ಡಾ.ಸಿ.ರಮೇಶ್, ಡಾ.ಜಿ.ಸವಿತ, ಪತ್ರಾಂಕಿತ ವ್ಯವಸ್ಥಾಪಕಿ ಜೆ.ಭುವನೇಶ್ವರಿ, ಆಂತರಿಕ ಗುಣಮಟ್ಟ ಭರವಸಾ ಕೋಶದ ಸಂಚಾಲಕ ಬಿ.ಎಂ.ಉಮೇಶ್, ಸಾಂಸ್ಕೃತಿಕ ವೇದಿಕೆ ಸಂಚಾಲಕಿ ಡಾ.ಎಂ.ರೂಪ, ಕ್ರೀಡಾ ಸಮಿತಿ ಸಂಚಾಲಕ ಡಿ.ಎನ್.ಕುಮಾರಸ್ವಾಮಿ, ಭಾರತ್ ಸೌಟ್ಸ್ ಮತ್ತು ಗೈಡ್ಸ್ ಸಮಿತಿ ಸಂಚಾಲಕರಾದ ಎಂ.ಎ.ಬೋರೇಗೌಡ, ಡಾ.ಎಂ.ಎಸ್.ಶಿಲ್ಪ, ಎನ್.ಎಸ್.ಎಸ್ ಘಕಟದ ಸಂಚಾಲಕ ಆನಂದ, ರೆಡ್ ಕ್ರಾಸ್ ಘಟಕದ ಸಂಚಾಲಕ ಡಾ.ಜಯಕೀರ್ತಿ, ಉದ್ಯೋಗ ಮಾಹಿತಿ ಕೋಶದ ಸಂಚಾಲಕರಾದ ಡಿ.ಎಸ್.ಮಂಜುನಾಥ್, ಡಾ. ಎ.ಐ.ರಿಯಾಜ್ ಅಹಮದ್, ಹಿರಿಯ ವಿದ್ಯಾರ್ಥಿಗಳ ಸಂಘದ ಸಂಚಾಲಕ ಎಂ.ಎ.ಬೋರೇಗೌಡ ಇದ್ದರು.