ಪದವೀಧರ ಮತದಾರರು ತಪ್ಪದೆ ಮತದಾನ ಮಾಡಿ: ಕೃಷ್ಣ ಬಾಜಪೇಯಿ

| Published : May 30 2024, 12:52 AM IST

ಸಾರಾಂಶ

ಮತದಾನ ದಿನದಂದು ಮತದಾನ ಕೇಂದ್ರದಲ್ಲಿ ಎಲ್ಲಾ ರೀತಿಯ ವ್ಯವಸ್ಥೆ ಮಾಡಲಾಗಿದ್ದು ಮತದಾನ ಪ್ರಕ್ರಿಯೆ ಸುಸೂತ್ರವಾಗಿ ನಡೆಸಬೇಕು

ಕನ್ನಡಪ್ರಭ ವಾರ್ತೆ ಕಲಬುರಗಿ

ಬರುವ ಜೂ.3ರಂದು ಈಶಾನ್ಯ ಪದವೀಧರ ಚುನಾವಣೆ ಇರುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಪದವೀಧರರು ಮತದಾನ ಚಲಾಯಿಸಬೇಕೆಂದು ಪ್ರಾದೇಶಿಕ ಆಯುಕ್ತರಾದ ಕಲಬುರಗಿ ವಿಭಾಗದ ಕೃಷ್ಣಬಾಜಪೇಯಿ ಹೇಳಿದರು.

ಬುಧುವಾರದಂದು ಡಾ. ಎಸ್.ಎಂ. ಪಂಡಿತ ರಂಗಮಂದಿರದಲ್ಲಿ ಭಾರತದ ಚುನಾವಣಾ ಆಯೋಗ ಪ್ರಾದೇಶಿಕ ಆಯುಕ್ತರು ಕಲಬುರಗಿ ವಿಭಾಗ ಕಲಬುರಗಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಮತ್ತು ಜಿಲ್ಲಾ ಸ್ವೀಪ್ ಸಮಿತಿ ಕಲಬುರಗಿ ವತಿಯಿಂದ ಕರ್ನಾಟಕ ಈಶಾನ್ಯ ಪದವೀಧರ ಮತದಾರರಿಗೆ ಮತದಾನ ಕುರಿತು ಜಾಗೃತಿ ಕಾರ್ಯಕ್ರಮದಲ್ಲಿ ಸಸಿಗೆ ನೀರೆರೆಯುವುದರ ಮೂಲಕ ಉದ್ಫಾಟಿಸಿ ಮಾತನಾಡಿದರು.

ಅಂದು ನಡೆಯುವ ಮತದಾನ ದಿನದಂದು ಮತದಾನ ಕೇಂದ್ರದಲ್ಲಿ ಎಲ್ಲಾ ರೀತಿಯ ವ್ಯವಸ್ಥೆ ಮಾಡಲಾಗಿದ್ದು ಮತದಾನ ಪ್ರಕ್ರಿಯೆ ಸುಸೂತ್ರವಾಗಿ ನಡೆಸಬೇಕು ಎಂದರು

ಈಶಾನ್ಯ ಪದವೀಧರ ಮತಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಮಾತನಾಡಿ, ವೋಟಿಂಗ್ ಪ್ರಕ್ರಿಯೆ ಮತಪತ್ರ ಮುಖಾಂತರ ನಡೆಯುತ್ತೆ. ಮತ ತಿರಸ್ಕತವಾಗದಂತೆ ನೋಡಿಕೊಳ್ಳಬೇಕೆಂದರು.

ಮಹಾನಗರ ಪಾಲಿಕೆ ಆಯುಕ್ತರಾದ ಭುವನೇಶ ದೇವಿದಾಸ ಪಾಟೀಲ್, ತರಬೇತುದಾರ ಶಶಿಶೇಖರ ರೆಡ್ಡಿ ತರಬೇತಿ ನೀಡಿದರು.

ಕಲಬುರಗಿ ವೃತ್ತದ ಉಪಸಂರಕ್ಷಣಾಧಿಕಾರಿ ಸುಮಿತಕುಮಾರ ಪಾಟೀಲ, ಜಿಪಂ ಉಪಕಾರ್ಯದರ್ಶಿ ಅಬ್ದುಲ್ ಅಜೀಮ್, ಯೋಜನಾ ಅಂದಾಜು ಮತ್ತು ಮೌಲ್ಯಮಾಪನಾಧಿಕಾರಿ ಮಧುಮತಿ , ಪಪೂ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಶಿವಶರಣಪ್ಪ ಮೂಳೆಗಾಂವ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಸಕ್ರೆಪ್ಪ ಗೌಡ ಸೇರಿದಂತೆ ಅಧಿಕಾರಿಗಳು ಹಾಗೂ ಶಾಲಾ ಕಾಲೇಜಿನ ಮುಖ್ಯಸ್ಥರು ನೊಂದಾಯಿತ ಪದವೀಧರರು ಹಾಜರಿದ್ದರು.