ಸಾರಾಂಶ
ದಾವಣಗೆರೆ ನಗರದ ಹೊಸ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ಸಮೀಪ ಪದವೀಧರರ ಕ್ಷೇತ್ರ ಮತದಾರರ ನೋಂದಣಿ ಸಹಾಯ ಕಚೇರಿಯನ್ನು ಶನಿವಾರ ಉದ್ಘಾಟಿಸಲಾಯಿತು.
- ಎನ್.ಬಿ.ಪ್ರದೀಪ್ ಕುಮಾರ್ ಪದವೀಧರರ ಸಂಪರ್ಕ ಕೇಂದ್ರ ಉದ್ಘಾಟನೆ
- - -ಕನ್ನಡಪ್ರಭ ವಾರ್ತೆ ದಾವಣಗೆರೆ
ನಗರದ ಹೊಸ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ಸಮೀಪ ಪದವೀಧರರ ಕ್ಷೇತ್ರ ಮತದಾರರ ನೋಂದಣಿ ಸಹಾಯ ಕಚೇರಿಯನ್ನು ಶನಿವಾರ ಉದ್ಘಾಟಿಸಲಾಯಿತು.ಈ ಸಂದರ್ಭ ಪದವೀಧರ ಕ್ಷೇತ್ರದ ಬಿಜೆಪಿ ಆಕಾಂಕ್ಷಿ, ತುಮಕೂರಿನ ವಿದ್ಯಾವಾಹಿನಿ ಸಮೂಹ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಎನ್.ಬಿ.ಪ್ರದೀಪ್ ಕುಮಾರ ಮಾತನಾಡಿ, ಪದವೀಧರರು ಈ ದೇಶದ ಆಸ್ತಿ. ಪದವೀಧರ ಧ್ವನಿ ಜನತಂತ್ರದ ಪ್ರತಿಧ್ವನಿಯಾಗಿ ಮೊಳಗಬೇಕು. ಈ ನಿಟ್ಟಿನಲ್ಲಿ ಪದವೀಧರ ನೋಂದಣಿ ಹೆಚ್ಚಿನ ಸಂಖ್ಯೆಯಲ್ಲಿ ಆಗಬೇಕಾಗಿದೆ. ಸದೃಢ ದೇಶ ನಿರ್ಮಾಣದಲ್ಲಿ ಪದವೀಧರರು ಸಕ್ರಿಯವಾಗಿ ಕೈ ಜೋಡಿಸಬೇಕು. ಅದು ನಿಮ್ಮ ಕರ್ತವ್ಯವಾಗಿದೆ ಎಂದರು.
ಮುಂಬರುವ 2026ರಲ್ಲಿ ರಾಜ್ಯ ವಿಧಾನ ಪರಿಷತ್ತು ಆಗ್ನೇಯ ಪದವೀಧರ ಕ್ಷೇತ್ರಕ್ಕೆ ಚುನಾವಣೆ ನಡೆಯಲಿದೆ. ನಿಮ್ಮೆಲ್ಲರ ಮತದಾನ ಅತ್ಯಂತ ಅಮೂಲ್ಯವಾಗಿದೆ. ತಾವೆಲ್ಲರೂ ಚುನಾವಣೆಯಲ್ಲಿ ಮತದಾನ ಮಾಡಲು ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕಿದೆ. ಆದ್ದರಿಂದ ಈ ಕೂಡಲೇ ನಮೂನೆ 18ರಲ್ಲಿ ಅರ್ಜಿ ಭರ್ತಿ ಮಾಡಿ ಸೂಕ್ತ ದಾಖಲಾತಿಗಳೊಂದಿಗೆ ಸಂಬಂಧಿತ ಚುನಾವಣಾ ಅಧಿಕಾರಿಗಳಿಗೆ ಸಲ್ಲಿಸಿ, ಮತದಾರ ಪಟ್ಟಿಯಲ್ಲಿ ತಮ್ಮ ಹೆಸರನ್ನು ದಾಖಲಿಸುವುದು ಅತ್ಯಂತ ಪ್ರಮುಖ ಕರ್ತವ್ಯವಾಗಿದೆ. ಪದವೀಧರರು ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಲು ಈ ಕಚೇರಿ ತಮಗೆ ಸಹಕರಿಸುವ ಉದ್ದೇಶ ಒಳಗೊಂಡಿದೆ. ಆದ್ದರಿಂದ ಎಲ್ಲ ಪದವೀಧರರು ಸಂಪರ್ಕಿಸಬಹುದು ಎಂದು ತಿಳಿಸಿದರು.ಪದವೀಧರರು ಹೆಸರು ನೋಂದಾಯಿಸಿಕೊಳ್ಳುವ ಕಾಲಾವಕಾಶವನ್ನು ಡಿ.10ರವರೆಗೂ ವಿಸ್ತರಿಸಲಾಗಿದೆ. ಎಲ್ಲ ಪದವೀಧರರು ತಮ್ಮ ಹೆಸರನ್ನು ನೋಂದಾಯಿಸಿಕೊಂಡು ತಮ್ಮ ಅಮೂಲ್ಯ ಮತವನ್ನು ಚಲಾಯಿಸಬೇಕು. ಹೆಚ್ಚಿನ ಮಾಹಿತಿಗಾಗಿ ಮೊ. 6366916892 / 9742921381 ಇಲ್ಲಿಗೆ ಸಂಪರ್ಕಿಸಲು ತಿಳಿಸಿದರು.
- - --9ಕೆಡಿವಿಜಿ35:
ದಾವಣಗೆರೆಯಲ್ಲಿ ಎನ್.ಬಿ.ಪ್ರದೀಪ್ ಕುಮಾರ್ ಪದವೀಧರರ ಸಂಪರ್ಕ ಕೇಂದ್ರ ಉದ್ಘಾಟಿಸಲಾಯಿತು.;Resize=(128,128))
;Resize=(128,128))
;Resize=(128,128))
;Resize=(128,128))