ಎಕ್ಸಲೆಂಟ್ ಸಿ.ಬಿ.ಎಸ್.ಇ ಶಾಲೆಯಲ್ಲಿ ಪದವಿ ಪ್ರದಾನ ಸಮಾರಂಭ

| Published : Mar 31 2024, 02:07 AM IST

ಎಕ್ಸಲೆಂಟ್ ಸಿ.ಬಿ.ಎಸ್.ಇ ಶಾಲೆಯಲ್ಲಿ ಪದವಿ ಪ್ರದಾನ ಸಮಾರಂಭ
Share this Article
  • FB
  • TW
  • Linkdin
  • Email

ಸಾರಾಂಶ

ಎಕ್ಸಲೆಂಟ್ ಸಿ.ಬಿ.ಎಸ್.ಇ. ಶಾಲೆಯಲ್ಲಿ ನಡೆದ ಪದವಿ ಪ್ರದಾನ ಸಮಾರಂಭ

ಕನ್ನಡಪ್ರಭ ವಾರ್ತೆ ಮೂಡುಬಿದಿರೆ

ಮಕ್ಕಳು ತಿನ್ನುವುದಿಲ್ಲ ಎಂದು ಒತ್ತಾಯ ಮಾಡದೇ ಮಕ್ಕಳಿಗೆ ಹಸಿವು ಬರುವಂತೆ ಮಾಡಿ, ತಿನ್ನಲು ಕೊಡಿ. ಹಾಗೆಯೇ ಓದುವುದಿಲ್ಲವೆಂಬ ಕಲ್ಪನೆ ಬಿಟ್ಟು ಓದಿನ ಹಸಿವನ್ನು ಸೃಷ್ಟಿಸಿ ಎಂದು ಮೂಡುಬಿದಿರೆಯ ಖ್ಯಾತ ಮಕ್ಕಳ ತಜ್ಞ ಡಾ. ಮುರಳಿಕೃಷ್ಣ ಹೇಳಿದರು.

ಅವರು ಎಕ್ಸಲೆಂಟ್ ಸಿ.ಬಿ.ಎಸ್.ಇ. ಶಾಲೆಯಲ್ಲಿ ನಡೆದ ಪದವಿ ಪ್ರದಾನ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದರು.

ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ .ಯುವರಾಜ್ ಜೈನ್‌ ಮಾತನಾಡಿ ಒಬ್ಬ ವ್ಯಕ್ತಿಯ ಸಾಮರ್ಥ್ಯ, ಕೌಶಲ್ಯ, ಸಮಾಜದಲ್ಲಿ ಗುರುತಿಸುವಂತೆ ಮಾಡುತ್ತದೆ. ಆ ಗುಣ ಬಾಲ್ಯದಿಂದಲೇ ಬೆಳೆಯಬೇಕು ಎಂದರು. ವಿದ್ಯಾರ್ಥಿಯ ಸರ್ವತೋಮುಖ ಪ್ರಗತಿಯಲ್ಲಿ ಶಿಕ್ಷಕರ ಪಾತ್ರ ಹಿರಿದಾದುದು. ಅದು ಪ್ರಾಥಮಿಕ ಶಿಕ್ಷಣದಿಂದಲೇ ಪ್ರಾರಂಭವಾಗಬೇಕು ಎಂದು ಸಂಸ್ಥೆಯ ಕಾರ್ಯದರ್ಶಿ ರಶ್ಮಿತಾ ಜೈನ್‌ ತಿಳಿಸಿದರು.

ಶಾಲಾ ಆಡಳಿತ ನಿರ್ದೇಶಕ ಡಾ.ಬಿ.ಪಿ. ಸಂಪತ್‌ಕುಮಾರ್, ಶೈಕ್ಷಣಿಕ ನಿರ್ದೇಶಕ ಪುಷ್ಪರಾಜ್, ಪ್ರಾಂಶುಪಾಲೆ ದಿವ್ಯಾ ಎಸ್. ನಾಯಕ್, ಉಪ ಪ್ರಾಂಶುಪಾಲೆ ವಿಮಲಾ ಶೆಟ್ಟಿ ಅಧ್ಯಾಪಕ ವೃಂದ, ಸಿಬ್ಬಂದಿ ಉಪಸ್ಥಿತರಿದ್ದರು.