ಸಾರಾಂಶ
ಮಾನವಕುಲದ ಒಳಿತೇ ಪ್ರಮುಖ ಗುರಿಯಾಗಬೇಕು. ಧನಾತ್ಮಕ ಚಿಂತನೆ ಬೆಳೆಸಿಕೊಳ್ಳಬೇಕು.
ಕನ್ನಡಪ್ರಭ ವಾರ್ತೆ ಮೈಸೂರುಪದವಿ ಭವಿಷ್ಯದ ಬದುಕಿಗೆ ಅಡಿಪಾಯವನ್ನಾಗಿ ಮಾಡಿಕೊಂಡು, ಲಭ್ಯ ಇರುವ ಅವಕಾಶ ಬಳಸಿಕೊಳ್ಳಬೇಕು ಎಂದು ಕೊಡಗು ವಿಶ್ವವಿದ್ಯಾಲಯದ ಕುಲಪತಿ ಡಾ. ಅಶೋಕ್ ಎಸ್. ಆಲೂರ್ ಕಿವಿಮಾತು ಹೇಳಿದರು. ಕೃಷ್ಣಮೂರ್ತಿಪುರಂನ ಶಾರದಾ ವಿಲಾಸ ಫಾರ್ಮಸಿ ಕಾಲೇಜಿನ 32ನೇ ವಾರ್ಷಿಕೋತ್ಸವ ಹಾಗೂ ಪದವಿ ಪ್ರದಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಮಾನವಕುಲದ ಒಳಿತೇ ಪ್ರಮುಖ ಗುರಿಯಾಗಬೇಕು. ಧನಾತ್ಮಕ ಚಿಂತನೆ ಬೆಳೆಸಿಕೊಳ್ಳಬೇಕು. ತಂತ್ರಜ್ಞಾನಗಳು ಕ್ಷಿಪ್ರಗತಿಯಲ್ಲಿ ಬೆಳೆಯುತ್ತಿರುವ ಈಗಿನ ಕಾಲಘಟ್ಟದಲ್ಲಿ ನಾವು ನಿತ್ಯವೂ ಅಪ್ ಡೇಟ್ ಆಗುತ್ತಿರಬೇಕು. ಇದಕ್ಕಾಗಿ ಹೊಸ ಸಂಗತಿ ಓದಿಕೊಳ್ಳಬೇಕು. ತಿಳಿದುಕೊಂಡಿದ್ದನ್ನು ಇತರರೊಂದಿಗೆ ಹಂಚಿಕೊಳ್ಳಬೇಕು ಎಂದು ಅವರು ಹೇಳಿದರು.ಕಾಲೇಜಿನ ಪ್ರಾಂಶುಪಾಲ ಡಾ. ಹನುಮಂತಾಚಾರ್ ಜೋಶಿ ಅಧ್ಯಕ್ಷತೆ ವಹಿಸಿದ್ದರು. ಶಾರದಾವಿಲಾಸ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಬಿ.ಎಂ. ಸುಬ್ರಾಯ, ಗೌರವ ಕಾರ್ಯದರ್ಶಿ ಆರ್. ದಿನೇಶ್, ನಗರದ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ವೈದ್ಯಕೀಯ ಅಧೀಕ್ಷಕ ಡಾ.ಕೆ.ಎಸ್. ಸದಾನಂದ, ಪ್ರೊ.ಟಿ.ಕೆ. ಉಮೇಶ್ ಪಾಲ್ಗೊಂಡಿದ್ದರು.