ಗ್ರಾಪಂ ಸದಸ್ಯನ ಪೊಲೀಸರ ಹಲ್ಲೆ: ಆರೋಪ

| Published : May 22 2025, 12:48 AM IST

ಸಾರಾಂಶ

ಬಾದಾಮಿ ತಾಲೂಕು ಬೆಳ್ಳಿಖಂಡಿ ಗ್ರಾಮದ ಗ್ರಾಮ ಪಂಚಾಯತಿ ಸದಸ್ಯನ ಮೇಲೆ ಹಲ್ಲೆ ನಡೆಸಿರುವ ಕೆರೂರ ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಬಿಎಸ್ಪಿ ಆಲ್ ಇಂಡಿಯಾ ರಾಜ್ಯ ಉಪಾಧ್ಯಕ್ಷ ವೈ.ಸಿ. ಕಾಂಬಳೆ ಆಗ್ರಹಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಬಾಗಲಕೋಟೆ

ಬಾದಾಮಿ ತಾಲೂಕು ಬೆಳ್ಳಿಖಂಡಿ ಗ್ರಾಮದ ಗ್ರಾಮ ಪಂಚಾಯತಿ ಸದಸ್ಯನ ಮೇಲೆ ಹಲ್ಲೆ ನಡೆಸಿರುವ ಕೆರೂರ ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಬಿಎಸ್ಪಿ ಆಲ್ ಇಂಡಿಯಾ ರಾಜ್ಯ ಉಪಾಧ್ಯಕ್ಷ ವೈ.ಸಿ. ಕಾಂಬಳೆ ಆಗ್ರಹಿಸಿದ್ದಾರೆ.

ಬುಧವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳ್ಳಿಖಂಡಿ ಗ್ರಾಮದಲ್ಲಿ ವಿವಾದಿತ ಜಾಗೆಯ ಸಮಸ್ಯೆ ಬಗೆಹರಿಸಲು ರಾಜಿ ಸಂಧಾನಕ್ಕಾಗಿ ಭೀಮಪ್ಪ ತಿಪ್ಪಣ್ಣ ಮೇಟಿ ಅವರನ್ನು ಪೊಲೀಸರು ಠಾಣೆಗೆ ಕರೆಸಿಕೊಂಡಿದ್ದರು. ಈ ವೇಳೆ ಅನಗತ್ಯವಾಗಿ ಮೇಟಿ ಅವರ ಮೇಲೆ ಪೊಲೀಸರು ಹಲ್ಲೆ ನಡೆಸಿದ್ದು, ಈ ಕುರಿತು ಕೂಡಲೇ ದೂರು ದಾಖಲಿಸಬೇಕು ಎಂದವರು ಆಗ್ರಹಿಸಿದರು.

ಘಟನೆಗೆ ಸಂಬಂಧಿಸಿದಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ವಿವರಣೆ ನೀಡಲಾಗಿದ್ದು, ಇದುವರೆಗೂ ದೂರು ದಾಖಲಾಗಿಲ್ಲ. ಕೂಡಲೇ ದೂರು ದಾಖಲಿಸಿಕೊಂಡು ನ್ಯಾಯ ಒದಗಿಸಬೇಕು ಎಂದವರು ಒತ್ತಾಯಿಸಿದರು.

ಪೊಲೀಸ್‌ ಇಲಾಖೆ ಘಟನೆಗೆ ಸಂಬಂಧಿಸಿದಿಂತೆ ಯಾವುದೇ ಕ್ರಮ ಕೈಗೊಳ್ಳದೇ ಹೋದಲ್ಲಿ ಮುಂದಿನ ದಿನಗಳಲ್ಲಿ ಪ್ರತಿಭಟನೆ ಕೈಗೊಳ್ಳಲಾಗುವುದು ಎಂದರು. ಈ ವೇಳೆ ಹಲ್ಲೆಗೊಳಗಾದ ಭೀಮಪ್ಪ ಮೇಟಿ ಕೂಡ ಘಟನೆ ಕುರಿತು ವಿವರಿಸಿ ಕ್ರಮಕ್ಕೆ ಆಗ್ರಹಿಸಿದರು.ಸುದ್ದಿಗೋಷ್ಠಿಯಲ್ಲಿ ಅಶೋಕ ರಾಜಾಪೂರ, ಗುರುಶಾಂತಪ್ಪ ಮದಿನಕರ, ದುಸಂಗಪ್ಪ ಮುರನಾಳ, ಶಂಕರ ಚಂದಾವರಿ ಮತ್ತಿತರರು ಇದ್ದರು.