ವಿದ್ಯಾರ್ಥಿಗಳಿಗೆ ಆತ್ಮವಿಶ್ವಾಸ ತುಂಬಿದ ಗ್ರಾಪಂ ಅಧ್ಯಕ್ಷೆ

| Published : Mar 22 2025, 02:02 AM IST

ಸಾರಾಂಶ

ಬಾಣಾವರ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ನಡೆಯುತ್ತಿರುವ ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರಕ್ಕೆ ಗ್ರಾಮ ಪಂಚಾಯಿತಿ ಅಧ್ಯಕ್ಷ ವೀಣಾ ವಿಶ್ವನಾಥ್ ಅವರು ಭೇಟಿ ನೀಡಿ ಪರೀಕ್ಷೆ ಬರೆಯುತ್ತಿರುವಂತಹ ವಿದ್ಯಾರ್ಥಿಗಳಿಗೆ ಆತ್ಮವಿಶ್ವಾಸವನ್ನು ತುಂಬುವುದರ ಜೊತೆಗೆ ಶುಭಹಾರೈಸಿದರು. ಎಸ್ ಎಸ್ ಎಲ್ ಸಿ ಎಂಬುದು ವಿದ್ಯಾರ್ಥಿ ಜೀವನದಲ್ಲಿ ಒಂದು ತಿರುವಿನ ಘಟ್ಟವಾಗಿದ್ದು ಇದು ವಿದ್ಯಾರ್ಥಿ ಜೀವನದ ಮುಂದಿನ ಭವಿಷ್ಯಕ್ಕೆ ಭದ್ರಾ ಬುನಾದಿಯಾಗಿದೆ ಎಸ್ಸೆಸ್ಸೆಲ್ಸಿಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ವಿದ್ಯಾರ್ಥಿಗಳು ಮುಂದಿನ ವ್ಯಾಸಂಗಕ್ಕೆ ಉತ್ತಮವಾದ ಆಯ್ಕೆಯನ್ನು ಮಾಡಿಕೊಳ್ಳಲು ಅನುಕೂಲವಾಗುತ್ತದೆ ಎಂದರು.

ಕನ್ನಡಪ್ರಭ ವಾರ್ತೆ ಅರಸೀಕೆರೆ

ತಾಲೂಕಿನ ಬಾಣಾವರ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ನಡೆಯುತ್ತಿರುವ ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರಕ್ಕೆ ಗ್ರಾಮ ಪಂಚಾಯಿತಿ ಅಧ್ಯಕ್ಷ ವೀಣಾ ವಿಶ್ವನಾಥ್ ಅವರು ಭೇಟಿ ನೀಡಿ ಪರೀಕ್ಷೆ ಬರೆಯುತ್ತಿರುವಂತಹ ವಿದ್ಯಾರ್ಥಿಗಳಿಗೆ ಆತ್ಮವಿಶ್ವಾಸವನ್ನು ತುಂಬುವುದರ ಜೊತೆಗೆ ಶುಭಹಾರೈಸಿದರು.

ಈ ಸಂದರ್ಭದಲ್ಲಿ ಪತ್ರಕರ್ತರೊಡನೆ ಪರೀಕ್ಷಾ ಕೇಂದ್ರದ ಹೊರಭಾಗದಲ್ಲಿ ಮಾತನಾಡಿದ ಅವರು, ಎಸ್ ಎಸ್ ಎಲ್ ಸಿ ಎಂಬುದು ವಿದ್ಯಾರ್ಥಿ ಜೀವನದಲ್ಲಿ ಒಂದು ತಿರುವಿನ ಘಟ್ಟವಾಗಿದ್ದು ಇದು ವಿದ್ಯಾರ್ಥಿ ಜೀವನದ ಮುಂದಿನ ಭವಿಷ್ಯಕ್ಕೆ ಭದ್ರಾ ಬುನಾದಿಯಾಗಿದೆ ಎಸ್ಸೆಸ್ಸೆಲ್ಸಿಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ವಿದ್ಯಾರ್ಥಿಗಳು ಮುಂದಿನ ವ್ಯಾಸಂಗಕ್ಕೆ ಉತ್ತಮವಾದ ಆಯ್ಕೆಯನ್ನು ಮಾಡಿಕೊಳ್ಳಲು ಅನುಕೂಲವಾಗುತ್ತದೆ. ಆದ್ದರಿಂದ ಇಂದು ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯುತ್ತಿರುವ ಎಲ್ಲಾ ವಿದ್ಯಾರ್ಥಿಗಳಿಗೆ ಒಳ್ಳೆಯದಾಗಲಿ ಮತ್ತು ಅವರ ಭವಿಷ್ಯ ಉತ್ತಮವಾಗಲಿ ಎಂದು ಶುಭ ಹಾರೈಸುತ್ತೇನೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಉಪ ಪ್ರಾಂಶುಪಾಲ ವಾಸುದೇವ್ ಹಾಗೂ ಬಾಣವರ ಠಾಣೆಯ ಪಿಎಸ್ಐ ಸುರೇಶ್ ಬಾಣವರ ಗ್ರಾಪಂ ಸದಸ್ಯ ಸೈಯದ್ ಆಸಿಫ್ ಉಪಸ್ಥಿತರಿದ್ದು ಪರೀಕ್ಷಾರ್ಥಿಗಳಿಗೆ ಶುಭಹಾರೈಸಿದರು.