ಸಾರಾಂಶ
ರಾಯಚೂರು ಜಿಪಂ ಕಚೇರಿ ಆವರಣದಲ್ಲಿರುವ ಜಲನಿರ್ಮಲ ಸಭಾಂಗಣದಲ್ಲಿ ಪಂಚಾಯತ್ ರಾಜ್ ಸಂಸ್ಥೆ ಮತ್ತು ಸಮುದಾಯ ಆಧಾರಿತ ಸಂಸ್ಥೆಗಳ ಒಗ್ಗೂಡಿಸುವಿಕೆ ಕಾರ್ಯಕ್ರಮದ ತರಬೇತಿ ಕಾರ್ಯಾಗಾರ ನಡೆಯಿತು.
ಕನ್ನಡಪ್ರಭವಾರ್ತೆ ರಾಯಚೂರು
ಗ್ರಾಮೀಣ ಪ್ರದೇಶದ ಸ್ವಸಹಾಯ ಗುಂಪುಗಳಿಗೆ ಗ್ರಾಮ ಪಂಚಾಯತಿ ಸೌಲಭ್ಯ ಸಮರ್ಪಕವಾಗಿ ತಲುಪಿಸಲು ಸಮುದಾಯ ಸಂಪನ್ಮೂಲ ವ್ಯಕ್ತಿಗಳು ಮುಂದಾಗಬೇಕು ಎಂದು ಜಿಪಂ ಯೋಜನಾ ಅಂದಾಜು ಮೌಲ್ಯ ಮಾಪನ ಅಧಿಕಾರಿ ಹುಲಿಗೆಪ್ಪ ಹೇಳಿದರು.ಸ್ಥಳೀಯ ಜಿಪಂ ಕಚೇರಿ ಆವರಣದಲ್ಲಿರುವ ಜಲನಿರ್ಮಲ ಸಭಾಂಗಣದಲ್ಲಿ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಸಂಜೀವಿನಿ-ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸವಂರ್ಧನ ಸಂಸ್ಥೆ, ಜಿಪಂ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಪಂಚಾಯತ್ ರಾಜ್ ಸಂಸ್ಥೆ ಮತ್ತು ಸಮುದಾಯ ಆಧಾರಿತ ಸಂಸ್ಥೆಗಳ ಒಗ್ಗೂಡಿಸುವಿಕೆ ಕಾರ್ಯಕ್ರಮದ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಗ್ರಾಮೀಣ ಸರ್ವತೋಮುಖ ಅಭಿವೃದ್ಧಿ ಸಾಧಿಸಲು ಹಲವಾರು ಕಾರ್ಯಕ್ರಮ, ಜನೆಗಳನ್ನು ರೂಪಿಸಿ ಅನುಷ್ಠಾನಗೊಳಿಸುತ್ತಿದೆ. ಗ್ರಾಮಗಳಲ್ಲಿ ವಿವಿಧ ಇಲಾಖೆಗಳಿಂದ ಮತ್ತು ಸ್ವಯಂ ಸೇವಾ ಸಂಸ್ಥೆಗಳಿಂದ ರಚಿಸಲ್ಪಟ್ಟಿರುವ ಸ್ವ ಸಹಾಯ ಸಂಘಗಳು ಕುಟುಂಬದ, ಸಮುದಾಯದ ಮತ್ತು ಗ್ರಾಮದ ಅಭಿವೃದ್ಧಿಯಲ್ಲಿ ತಮ್ಮದೇ ಆದ ಕೊಡುಗೆ ನೀಡುತ್ತಿವೆ ಎಂದರು.ಜಿಲ್ಲಾ ಪಂಚಾಯತಿ ಎನ್ಆರ್‌ಎಲ್ಎಮ್ ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕ ಶ್ರೀನಾಥ ಹಾಗೂ ಜಿಲ್ಲಾ ವ್ಯವಸ್ಥಾಪಕ ವಿಜಯ ಕುಮಾರ ಮಾತನಾಡಿದರು.
ಜಿಲ್ಲಾ ವ್ಯವಸ್ಥಾಪಕ ಶ್ರೀಕಾಂತ ಬನ್ನಿಗೋಳ, ತರಬೇತಿ ಸಂಪನ್ಮೂಲ ವ್ಯಕ್ತಿಗಳಾದ ಧನೇಶ್ವರ ನಾಯಕ, ಅಜೀಷಾ ಸೇರಿ ವಿವಿಧ ತಾಲೂಕಿನ ಕಾರ್ಯಕ್ರಮ ವ್ಯವಸ್ಥಾಪಕರು, ವಲಯ ಮೇಲ್ವಿಚಾರಕರು, ಯುವ ವೃತ್ತಿಪರರು, ಬ್ಲಾಕ್ ಮ್ಯಾನೇಜರ್, ಡಾಟಾ ಎಂಟ್ರಿ ಅಪರೇಟರ್ ಹಾಜರಿದ್ದರು.