ಸಾರಾಂಶ
ಕುಷ್ಟಗಿ: ಬಿಜೆಪಿ ಸರ್ಕಾರವು ಜನಪರ ಸರ್ಕಾರವಾಗಿದೆ. ಮೊತ್ತೊಮ್ಮೆ ನರೇಂದ್ರ ಮೋದಿ ಅವರನ್ನು ಮತ್ತೆ ಪ್ರಧಾನಿ ಮಾಡಲು ಪಣ ತೊಡಬೇಕು. ಇದೇ ತಿಂಗಳ ಕೊನೆಯ ವಾರದಲ್ಲಿ ಗ್ರಾಮ ಚಲೋ ಕಾರ್ಯಕ್ರಮ ನಡೆಯಲಿದೆ ಎಂದು ಶಾಸಕ ದೊಡ್ಡನಗೌಡ ಪಾಟೀಲ ಹೇಳಿದರು.ಪಟ್ಟಣದ ಬಿಜೆಪಿ ಕಾರ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಗ್ರಾಮ ಚಲೋ ಅಭಿಯಾನ ಕಾರ್ಯಾಗಾರಕ್ಕೆ ಜ್ಯೋತಿ ಬೆಳಗಿಸುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು. ಪಕ್ಷವನ್ನು ಇನ್ನಷ್ಟು ಗಟ್ಟಿಗೊಳಿಸಬೇಕು. ಗ್ರಾಮ ಮಟ್ಟದಲ್ಲಿ ಶಕ್ತಿ ತುಂಬುವ ಮೂಲಕ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿ ಮಾಡೋಣ ಎಂದರು.ಬಿಜೆಪಿ ರಾಜ್ಯ ಕಾರ್ಯದರ್ಶಿ ಶರಣು ತಳ್ಳಿಕೇರಿ, ಕುಷ್ಟಗಿ ಮಂಡಲ ಅಧ್ಯಕ್ಷ ಬಸವರಾಜ ಹಳ್ಳೂರ, ಬಳ್ಳಾರಿ ವಿಭಾಗದ ಪ್ರಭಾರ ವೆಂಕಪ್ಪಯ್ಯ ದೇಸಾಯಿ, ಚಂದ್ರಶೇಖರಗೌಡ ಹಲಗೇರಿ, ಜಿಲ್ಲಾ ಉಪಾಧ್ಯಕ್ಷ ಕೆ.ಮಹೇಶ, ತಾಲೂಕು ಯುವ ಮೋರ್ಚಾ ಅಧ್ಯಕ್ಷ ಉಮೇಶ್ ಯಾದವ ಮಾತನಾಡಿದರು.ಈ ಸಂದರ್ಭದಲ್ಲಿ ಮುಖಂಡರಾದ ಚಂದ್ರಕಾಂತ ವಡಿಗೇರಿ, ಬಿಜೆಪಿ ಮಂಡಲ ತಾಲೂಕು ಪ್ರಧಾನ ಕಾರ್ಯದರ್ಶಿ ಮಂಜುನಾಥ ಜೂಲಕುಂಟಿ, ಪರಶುರಾಮ, ಶುಕಮುನಿ ಗುರುವಿನ್, ವಿವಿಧ ಪದಾಧಿಕಾರಿಗಳು, ಮುಖಂಡರು, ಕಾರ್ಯಕರ್ತರು ಇದ್ದರು.