ನಗರದೆಲ್ಲೆಡೆ ರಾರಾಜಿಸಿದ ಕನ್ನಡದ ಬಾವುಟ, ನಾಡು, ನುಡಿ, ಸಂಸ್ಕೃತಿಯನ್ನು ಬಿಂಬಿಸುವ ವೈವಿಧ್ಯಮಯ ಕಾರ್ಯಕ್ರಮ, ಕನ್ನಡದ ಹಿರಿಮೆಯನ್ನು ತಿಳಿಸುವ ಹಾಡುಗಳ ಅಬ್ಬರ ಸೇರಿದಂತೆ ವಿವಿಧ ಸಮಾರಂಭಗಳನ್ನು ಏರ್ಪಡಿಸುವ ಮೂಲಕ ವಿವಿಧ ರಾಜಕೀಯ ಪಕ್ಷಗಳು, ಸಂಘ-ಸಂಸ್ಥೆಗಳು, ಶಾಲಾ-ಕಾಲೇಜುಗಳು, ಕಾರ್ಖಾನೆಗಳು, ಸರ್ಕಾರಿ ಮತ್ತು ಖಾಸಗಿ ಕಚೇರಿಗಳು 71ನೇ ಕರ್ನಾಟಕ ರಾಜ್ಯೋತ್ಸವವನ್ನು ಸಂಭ್ರಮ ಸಡಗರದಿಂದ ಆಚರಿಸಿದವು.
-ಬಸ್, ಆಟೋಗಳಲ್ಲಿ ರಾರಾಜಿಸಿದ ಕನ್ನಡದ ಬಾವುಟ । ದಿನವಿಡೀ ಕನ್ನಡಪರ ಹಿರಿಮೆ-ಗರಿಮೆ ತಿಳಿಸುವ ಕಾರ್ಯಕ್ರಮಗಳ ಆಯೋಜನೆ
ಕಂಠೀರವ ಕ್ರೀಡಾಂಗಣದಲ್ಲಿ ವಿವಿಧ ಶಾಲಾ ಮಕ್ಕಳಿಂದ ಆಕರ್ಷಕ ಕವಾಯತು, ಯಕ್ಷಗಾನ, ನೃತ್ಯ ಸೇರಿ ಸಾಂಸ್ಕೃತಿಕ ಕಲೆ ಪ್ರದರ್ಶನ ಕನ್ನಡಪ್ರಭ ವಾರ್ತೆ ಬೆಂಗಳೂರುನಗರದೆಲ್ಲೆಡೆ ರಾರಾಜಿಸಿದ ಕನ್ನಡದ ಬಾವುಟ, ನಾಡು, ನುಡಿ, ಸಂಸ್ಕೃತಿಯನ್ನು ಬಿಂಬಿಸುವ ವೈವಿಧ್ಯಮಯ ಕಾರ್ಯಕ್ರಮ, ಕನ್ನಡದ ಹಿರಿಮೆಯನ್ನು ತಿಳಿಸುವ ಹಾಡುಗಳ ಅಬ್ಬರ ಸೇರಿದಂತೆ ವಿವಿಧ ಸಮಾರಂಭಗಳನ್ನು ಏರ್ಪಡಿಸುವ ಮೂಲಕ ವಿವಿಧ ರಾಜಕೀಯ ಪಕ್ಷಗಳು, ಸಂಘ-ಸಂಸ್ಥೆಗಳು, ಶಾಲಾ-ಕಾಲೇಜುಗಳು, ಕಾರ್ಖಾನೆಗಳು, ಸರ್ಕಾರಿ ಮತ್ತು ಖಾಸಗಿ ಕಚೇರಿಗಳು 71ನೇ ಕರ್ನಾಟಕ ರಾಜ್ಯೋತ್ಸವವನ್ನು ಸಂಭ್ರಮ ಸಡಗರದಿಂದ ಆಚರಿಸಿದವು.
ಕನ್ನಡ ಬಾವುಟವನ್ನು ಹಾರಿಸಿ ಸಿಹಿ ಹಂಚಿ ಸಾರ್ವಜನಿಕರು ಪರಸ್ಪರ ರಾಜ್ಯೋತ್ಸವದ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡರು. ಬಹಳಷ್ಟು ಆಟೋ, ಬಸ್ಗಳಿಗೆ ಕನ್ನಡ ಬಾವುಟ ಕಟ್ಟಿ ನಾಡ ಪ್ರೇಮವನ್ನು ವ್ಯಕ್ತಪಡಿಸಲಾಯಿತು. ಶೈಕ್ಷಣಿಕ ಸಂಸ್ಥೆಗಳಲ್ಲಿ ಮಕ್ಕಳು ಹಲವು ಆಕರ್ಷಕ ಕವಾಯತು, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟು ತಾಯಿ ಭುವನೇಶ್ವರಿಗೆ ನಮಿಸಿದರು.ಕಾಂಗ್ರೆಸ್, ಬಿಜೆಪಿ, ಜೆಡಿಎಸ್, ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ ಸೇರಿದಂತೆ ಹಲವು ರಾಜಕೀಯ ಪಕ್ಷಗಳ ಕಚೇರಿಯಲ್ಲಿ ಮುಖಂಡರು, ಕಾರ್ಯಕರ್ತರು ನಾಡ ಧ್ವಜಾರೋಹಣ ಸಮಾರಂಭದಲ್ಲಿ ಪಾಲ್ಗೊಂಡಿದ್ದರು. ಬಳಿಕ ಸಿಹಿ ವಿತರಿಸಿ ಪರಸ್ಪರ ಕರ್ನಾಟಕ ರಾಜ್ಯೋತ್ಸವದ ಶುಭಾಶಯ ಕೋರಲಾಯಿತು.
ನಗರದ ಹಲವು ಶಾಲೆಗಳ ಮಕ್ಕಳು ಆಕರ್ಷಕ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು. ಚಾಮರಾಜಪೇಟೆಯಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಜಾನಪದ ಕಲಾ ತಂಡಗಳು ಪಾಲ್ಗೊಂಡಿದ್ದು ಆಕರ್ಷಕ ಮೆರವಣಿಗೆ ನಡೆಸಲಾಯಿತು.ಕರ್ನಾಟಕ ರಕ್ಷಣಾ ವೇದಿಕೆಯಿಂದ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ವೇದಿಕೆ ಅಧ್ಯಕ್ಷ ಟಿ.ಎ.ನಾರಾಯಣ ಗೌಡ ಮತ್ತಿತರರು ಪಾಲ್ಗೊಂಡಿದ್ದರು. ಕನ್ನಡ ಜನಶಕ್ತಿ ಕೇಂದ್ರದಿಂದ ಸ್ವಾತಂತ್ರ್ಯ ಉದ್ಯಾನವನದಲ್ಲಿ ನಾಡ ಧ್ವಜಾರೋಹಣ ನೆರವೇರಿಸಲಾಯಿತು. ಕನ್ನಡ ರಾಜ್ಯೋತ್ಸವ ಸಮಿತಿಯಿಂದ ಮೈಸೂರು ಬ್ಯಾಂಕ್ ವೃತ್ತದಲ್ಲಿ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಅವರನ್ನು ಗೌರವಿಸಲಾಯಿತು. ಕನ್ನಡ ಸೇನೆಯಿಂದ ರಾಜಾಜಿನಗರದಲ್ಲಿ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಶಾಸಕ ಗೋಪಾಲಯ್ಯ ಮತ್ತಿತರರು ಪಾಲ್ಗೊಂಡಿದ್ದರು.
ಕನ್ನಡ ಗೆಳೆಯರ ಬಳಗದಿಂದ ರಾಜ್ಯೋತ್ಸವದ ಹಿನ್ನೆಲೆಯಲ್ಲಿ ಚಿಂತನಾ ಸಭೆ ಹಮ್ಮಿಕೊಳ್ಳಲಾಗಿತ್ತು. ಕೆಪಿಟಿಸಿಎಲ್ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ರಾಮ್ ಪ್ರಸಾತ್ ಮನೋಹರ ಮತ್ತಿತರರು ಆಗಮಿಸಿದ್ದರು.