ಸಾರಾಂಶ
ಯಾದಗಿರಿ ನಗರದ ವಿದ್ಯಾಮಂಗಲ ಕಾರ್ಯಾಲಯದಲ್ಲಿ ನಡೆಯಲಿರುವ ಚಾಡಯ್ಯ ಜಯಂತಿ. ಅಪರ ಜಿಲ್ಲಾಧಿಕಾರಿ ಶರಣಬಸಪ್ಪ ಕೋಟೆಪ್ಪಗೊಳ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಯಿತು.
ಕನ್ನಡಪ್ರಭ ವಾರ್ತೆ ಯಾದಗಿರಿ
ಜಿಲ್ಲಾಡಳಿತದಿಂದ ನಿಜಶರಣ ಅಂಬಿಗರ ಚೌಡಯ್ಯ ಜಯಂತಿ ಜಿಲ್ಲಾದ್ಯಂತ ಜ.21ರಂದು ಅದ್ಧೂರಿಯಾಗಿ ಆಚರಿಸಲು ನಿರ್ಧರಿಸಲಾಗಿದೆ.ಅಪರ ಜಿಲ್ಲಾಧಿಕಾರಿ ಶರಣಬಸಪ್ಪ ಕೋಟೆಪ್ಪಗೊಳ ಅಧ್ಯಕ್ಷತೆಯಲ್ಲಿ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ನಿಜಶರಣ ಅಂಬಿಗರ ಚೌಡಯ್ಯ ಜಯಂತಿ ಆಚರಣೆ ಪೂರ್ವಭಾವಿ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಯಿತು.
ಯಾದಗಿರಿ ನಗರದ ವಿದ್ಯಾಮಂಗಲ ಕಾರ್ಯಾಲಯದಲ್ಲಿ ನಡೆಯುವ ಜಿಲ್ಲಾಮಟ್ಟದ ನಿಜಶರಣ ಅಂಬಿಗರ ಚೌಡಯ್ಯ ಜಯಂತಿ ಆಚರಣೆಗೆ ಸಂಬಂಧಿಸಿದಂತೆ ಅಧಿಕಾರಿಗಳಿಗೆ ವಹಿಸಲಾದ ಕೆಲಸ ಅಚ್ಚುಕಟ್ಟಾಗಿ ನಿರ್ವಹಿಸಲು ಸೂಚಿಸಿದರು.ಜಯಂತಿಗೆ ಜಿಲ್ಲಾಮಟ್ಟದ ಎಲ್ಲಾ ಅಧಿಕಾರಿಗಳು ಕಡ್ಡಾಯವಾಗಿ ಹಾಜರಾಗಬೇಕು ಮತ್ತು ಎಲ್ಲಾ ತಾಲೂಕು ಮಟ್ಟದಲ್ಲಿ ಹಾಗೂ ಗ್ರಾಮ ಪಂಚಾಯ್ತಿ ಮಟ್ಟದ ಶಾಲಾ-ಕಾಲೇಜು, ವಿವಿಧ ಕಚೇರಿಗಳಲ್ಲಿ ಜಯಂತಿ ಅರ್ಥಪೂರ್ಣವಾಗಿ ಆಚರಿಸಿ ವರದಿಯನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಸಲ್ಲಿಸಬೇಕು ಎಂದು ತಿಳಿಸಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಉತ್ತರಾದೇವಿ ಮಠಪತಿ, ಕರ್ನಾಟಕ ಪ್ರದೇಶ ಕೋಲಿ ಸಮಾಜದ ರಾಜ್ಯ ಸಂಘಟನಾ ಕಾರ್ಯದರ್ಶಿ ಉಮೇಶ ಮುದ್ನಾಳ, ಸಮಾಜದ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಗೋಸಿ, ಯುವ ಘಟಕದ ಅಧ್ಯಕ್ಷ ಮಲ್ಲು ಪೂಜಾರಿ, ನಗರದ ಅಧ್ಯಕ್ಷ ಮಹಾದೇವಪ್ಪ ಗಣಪುರ, ಎಪಿಎಂಸಿ ಅಧ್ಯಕ್ಷ ಅಯ್ಯಪ್ಪ ಹಾಲಗೇರಾ, ಸಿ.ಎಂ. ಪಟ್ಟೇದಾರ, ಲಿಂಗಪ್ಪ ಜಾಲಗಾರ, ಸುರೇಶ ಕೋಟಿಮನಿ, ಭೀಮರೆಡ್ಡಿ ಯರಗೋಳ, ಚಂದ್ರಶೇಖರ ಕಾವಲಿ ಬಾಡಿಯಾಳ, ಅಯ್ಯಣ್ಣ ನಾಯ್ಕೋಡಿ ಹಾಲಗೇರಾ, ಭೀಮರಾಯ ಹಿರೇನೂರ, ಸಾಬಣ್ಣ ಬಾಡಿಯಾಲ, ಶಿವರಾಜ ಬಳಿಚಕ್ರ, ನಿಂಗಪ್ಪ ತಿಂಥಣಿ, ಸಂತೋಷ ಕಾಡಂಗೇರ, ಮಲ್ಲು ಮ್ಯಾಳಗೇರಿ ಇತರರಿದ್ದರು.