ಸಾರಾಂಶ
ಕೂಡಿಗೆ ಉದ್ಭವ ಸುಬ್ರಹ್ಮಣ್ಯ ದೇವಾಲಯದಲ್ಲಿ ಅದ್ಧೂರಿ ರಥೋತ್ಸವ ನಡೆಯಿತು. ವಿಶೇಷ ಪೂಜಾ ವಿಧಿ ವಿಧಾನಗಳು ಜರುಗಿತು.
ಕನ್ನಡಪ್ರಭ ವಾರ್ತೆ ಕುಶಾಲನಗರ
ಷಷ್ಠಿ ಅಂಗವಾಗಿ ಕೂಡಿಗೆ ಉದ್ಭವ ಸುಬ್ರಹ್ಮಣ್ಯ ದೇವಾಲಯದಲ್ಲಿ ಅದ್ಧೂರಿ ರಥೋತ್ಸವ ನಡೆಯಿತು.ದೇವಾಲಯದಲ್ಲಿ ಬೆಳಗ್ಗಿನಿಂದ ಅರ್ಚಕರಾದ ನವೀನ್ ಭಟ್ ಅವರ ನೇತೃತ್ವದಲ್ಲಿ ವಿಶೇಷ ಪೂಜಾ ವಿಧಿ ವಿಧಾನಗಳು ಜರುಗಿತು.
ದೇವಾಲಯದಿಂದ ಮುಖ್ಯ ರಸ್ತೆಗಳಲ್ಲಿ ರಥವನ್ನು ಭಕ್ತಾದಿಗಳು ಏಳೆದು ಸಂಭ್ರಮಿಸಿದರು.ಮೆರವಣಿಗೆಯಲ್ಲಿ ಚಂಡೆ ವಾದ್ಯ ಮೇಳ ಏರ್ಪಡಿಸಲಾಗಿತ್ತು. ಸುತ್ತಮುತ್ತಲಿನ ಸಾವಿರಾರು ಸಂಖ್ಯೆಯ ಭಕ್ತಾದಿಗಳು ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ದೇವಾಲಯ ಆಡಳಿತ ಮಂಡಳಿಯಿಂದ ಅನ್ನಸಂತರ್ಪಣೆ ಕಾರ್ಯ ನಡೆಯಿತು.ಈ ಸಂದರ್ಭ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಡಿ ವೈ ಎಸ್ ಪಿ. ಆರ್ ವಿ ಗಂಗಾಧರಪ್ಪ ಮತ್ತು ಪೊಲೀಸ್ ವೃತ್ತ ನಿರೀಕ್ಷಕ ರಾಜೇಶ್ ಕೋಟ್ಯಾನ್ ನೇತೃತ್ವದಲ್ಲಿ ದೇವಾಲಯ ಆವರಣದಲ್ಲಿ ತಾತ್ಕಾಲಿಕ ಪೊಲೀಸ್ ಉಪ ಠಾಣೆ ನಿರ್ಮಿಸುವುದರೊಂದಿಗೆ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿ ನಿಯೋಜಿಸಿ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಲಾಗಿತ್ತು.