ಸಾರಾಂಶ
ಹೊಳೆಹೊನ್ನೂರು: ಸಮೀಪದ ಮೂಡಲವಿಠಲಾಪುರ ಗ್ರಾಮದಲ್ಲಿ ಶ್ರೀದೇವಿ ಭೂದೇವಿ ಸಹಿತ ಶ್ರೀ ಆಂಜನೇಯಸ್ವಾಮಿಯ ಬ್ರಹ್ಮರಥೋತ್ಸವವು ಅದ್ಧೂರಿಯಾಗಿ ನೆರವೇರಿತು.
ಹೊಳೆಹೊನ್ನೂರು: ಸಮೀಪದ ಮೂಡಲವಿಠಲಾಪುರ ಗ್ರಾಮದಲ್ಲಿ ಶ್ರೀದೇವಿ ಭೂದೇವಿ ಸಹಿತ ಶ್ರೀ ಆಂಜನೇಯಸ್ವಾಮಿಯ ಬ್ರಹ್ಮರಥೋತ್ಸವವು ಅದ್ಧೂರಿಯಾಗಿ ನೆರವೇರಿತು.
ರಥೋತ್ಸವ ಹಿನ್ನೆಲೆಯಲ್ಲಿ ಮುಂಜಾನೆ ಶ್ರೀ ರಂಗನಾಥಸ್ವಾಮಿಗೆ ಅಭಿಷೇಕ, ಅಲಂಕಾರ, ಕಂಕಣ ಧಾರಣೆ, ಮಹಾ ಮಂಗಳಾರತಿ, ಗರುಡೋತ್ಸವ ಸೇರಿದಂತೆ ವಿವಿಧ ಪೂಜೆ ವಿಧಿ-ವಿಧಾನಗಳು ನಡೆಸಲಾಯಿತು.ವಾಧ್ಯದೊಂದಿಗೆ ಶ್ರೀ ಸ್ವಾಮಿಯ ರಾಜಬೀದಿ ಉತ್ಸವ ನಡೆಸಲಾಯಿತು. ಬಳಿಕ ಶ್ರೀಸ್ವಾಮಿ ದರ್ಶನ ಮಾಡಿದ ಭಕ್ತರು ಹಣ್ಣು, ಕಾಯಿ ಪೂಜೆ ಮಾಡಿಸಿ ರಥ ಎಳೆದು ಭಕ್ತಿ ಸಮರ್ಪಿಸಿದರು.
ಅನೇಕೆ ಭಕ್ತರು ತಮ್ಮ ಇಷ್ಠಾರ್ಥ ಸಿದ್ಧಿಗಾಗಿ ರಥದ ಕಳಸಕ್ಕೆ ಬಾಳೆಹಣ್ಣು ಎಸೆದರು. ಸುತ್ತಮುತ್ತಲಿನ ಗ್ರಾಮಸ್ಥರು ನೆರೆದ ಭಕ್ತರಿಗೆ, ಬಾಳೆಹಣ್ಣಿನ ಪ್ರಸಾದ, ಪಾನಕ ಹಂಚಿದರು. ಬಳಿಕ ನೆರೆದಿದ್ದ ಎಲ್ಲಾ ಭಕ್ತರಿಗೆ ಅನ್ನ ಪ್ರಸಾದ ವಿನಿಯೋಗ ಮಾಡಲಾಯಿತು. ರಥೋತ್ಸವ ಹಿನ್ನೆಲೆಯಲ್ಲಿ ಗ್ರಾಮದ ಪ್ರಮುಖ ಬೀದಿ, ದೇವಸ್ಥಾನ ಆವರಣ ಹಾಗೂ ದೇವಸ್ಥಾನಕ್ಕೆ ಆಕರ್ಷಕ ವಿದ್ಯುತ್ ದೀಪಾಲಂಕಾರ ಮಾಡಲಾಗಿತ್ತು.