ವಿಶ್ವಹಿಂದೂ ಪರಿಷದ್, ಬಜರಂಗದಳ ತರೀಕೆರೆ ವತಿಯಿಂದ ಸೋಮವಾರ ಪಟ್ಟಣದಲ್ಲಿ 9ನೇ ವರ್ಷದ ಶ್ರೀ ಹಿಂದೂ ಮಹಾಗಣಪತಿ ವಿಸರ್ಜನಾ ಕಾರ್ಯಕ್ರಮ, ಅದ್ಧೂರಿ ಮೆರವಣಿಗೆ ಮತ್ತು ಶೋಭಾಯಾತ್ರೆಯನ್ನು ಏರ್ಪಡಿಸಲಾಗಿತ್ತು.

ಕನ್ನಡಪ್ರಭ ವಾರ್ತೆ ತರೀಕೆರೆ

ವಿಶ್ವಹಿಂದೂ ಪರಿಷದ್, ಬಜರಂಗದಳ ತರೀಕೆರೆ ವತಿಯಿಂದ ಸೋಮವಾರ ಪಟ್ಟಣದಲ್ಲಿ 9ನೇ ವರ್ಷದ ಶ್ರೀ ಹಿಂದೂ ಮಹಾಗಣಪತಿ ವಿಸರ್ಜನಾ ಕಾರ್ಯಕ್ರಮ, ಅದ್ಧೂರಿ ಮೆರವಣಿಗೆ ಮತ್ತು ಶೋಭಾಯಾತ್ರೆಯನ್ನು ಏರ್ಪಡಿಸಲಾಗಿತ್ತು.

ಸೆ.14 ರಂದು ಸೋಮವಾರ ಪಟ್ಟಣದ ಎ.ಪಿ.ಎಂ.ಸಿ.ಮುಂಭಾಗದ ಆವರಣ 2ನೇ ಗೇಟ್‌ನಲ್ಲಿ ಭವ್ಯವಾದ ಅಲಂಕೃತ ಮಂಟಪದಲ್ಲಿ 9ನೇ ವರ್ಷದ ಶ್ರೀ ಹಿಂದೂ ಮಹಾಗಣಪತಿಯನ್ನು ಪ್ರತಿಷ್ಠಾಪಿಸಲಾಗಿತ್ತು. ಪ್ರತಿನಿತ್ಯ ಭಜನೆ ಸಾಂಸ್ಕೃತಿಕ ಕಾರ್ಯಕ್ರಮ ಪ್ರಸಾದ ವಿನಿಯೋಗವನ್ನು ಏರ್ಪಡಿಸಲಾಗಿತ್ತು.

ಸೆ.21 ರಂದು ಸೋಮವಾರ ಶ್ರೀ ಹಿಂದೂ ಮಹಾಗಣಪತಿ ವಿಸರ್ಜನಾ ಕಾರ್ಯಕ್ರಮ, ನಗರದ ಪ್ರಮುಖ ಬೀದಿಗಳಲ್ಲಿ ಮಂಗಳವಾದ್ಯ ಮತ್ತು ವಿವಿಧ ವಾದ್ಯಗೋಷ್ಠಿಗಳೊಂದಿಗೆ ಅದ್ಧೂರಿ ಮೆರವಣಿಗೆ ಮತ್ತು ಶೋಭಾಯಾತ್ರೆಯನ್ನು ಏರ್ಪಡಿಸಲಾಗಿತ್ತು.

ವಿಶ್ವ ಹಿಂದೂ ಪರಿಷದ್ ಬಜರಂಗದಳ, ತರೀಕೆರೆ ಶ್ರೀ ಹಿಂದೂ ಮಹಾಗಣಪತಿ ಸೇವಾ ಸಮಿತಿ 9ನೇ ವರ್ಷದ ಗಣೇಶೋತ್ಸವ ಕಾರ್ಯಕಾರಿ ಸಮಿತಿ ಪದಾದಿಕಾರಿಗಳು, ಸದಸ್ಯರು, ಭಕ್ತಾದಿಗಳು ಭಾಗವಹಿಸಿದ್ದರು.

ಅದ್ಧೂರಿ ಮೆರವಣಿಗೆ ಮತ್ತು ಶೋಭಾಯಾತ್ರೆಯಲ್ಲಿ ಅಧಿಕ ಸಂಖ್ಯೆಯಲ್ಲಿ ಭಕ್ತಾದಿಗಳು ಭಾಗವಹಿಸಿದ್ದರು. ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.