ಆರಾಧನಾ ಮಹೋತ್ಸವದಲ್ಲಿ ನೂರಾರು ಭಕ್ತರ ವೇದಘೋಷದ ನಡುವೆ ವಾದ್ಯ ವೈಭವಗಳೊಂದಿಗೆ ಭಕ್ತಿ ಸಂಗೀತದಲ್ಲಿ ತಾಳಕ್ಕೆ ಹೆಜ್ಜೆ ಹಾಕುತ್ತಾ ರಾಯರ ರಥೋತ್ಸವ ಕಾರ್ಯಕ್ರಮವು ಅದ್ಧೂರಿ ಮತ್ತು ಭಕ್ತಿ ಶ್ರದ್ಧೆಯಿಂದ ನೆರವೇರಿತು.

ಲಕ್ಷ್ಮೇಶ್ವರ: ಪಟ್ಟಣದಲ್ಲಿ ರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವ ಪ್ರಯುಕ್ತ ರಾಯರ ರಥೋತ್ಸವ ಸಡಗರ ಹಾಗೂ ವಿಜೃಂಭಣೆಯಿಂದ ಸೋಮವಾರ ಜರುಗಿತು.

ರಾಯರ ಆರಾಧನೆಯ ಮಹೋತ್ಸವವು ಮೂರು ದಿನಗಳ ಕಾಲ ಸಂಭ್ರಮದಿಂದ ನಡೆಯಿತು. ಆರಾಧನಾ ಮಹೋತ್ಸವದಲ್ಲಿ ನೂರಾರು ಭಕ್ತರ ವೇದಘೋಷದ ನಡುವೆ ವಾದ್ಯ ವೈಭವಗಳೊಂದಿಗೆ ಭಕ್ತಿ ಸಂಗೀತದಲ್ಲಿ ತಾಳಕ್ಕೆ ಹೆಜ್ಜೆ ಹಾಕುತ್ತಾ ರಾಯರ ರಥೋತ್ಸವ ಕಾರ್ಯಕ್ರಮವು ಅದ್ಧೂರಿ ಮತ್ತು ಭಕ್ತಿ ಶ್ರದ್ಧೆಯಿಂದ ನೆರವೇರಿತು.

ನಂತರ ಶ್ರೀಮಠದ ಧರ್ಮದರ್ಶಿ ಹನುಮಂತಾಚಾರ್ಯ ಹೊಂಬಳ ಹಾಗೂ ಕೃಷ್ಣ ಕುಲಕರ್ಣಿ ಅವರು ಮಾತನಾಡಿ, ನಂಬಿದ ಭಕ್ತರನ್ನು ರಾಯರು ಕೈಬಿಟ್ಟ ಉದಾಹರಣೆಗಳಿಲ್ಲ. ೩೦೬ ವರ್ಷಗಳ ಭವ್ಯ ಇತಿಹಾಸವನ್ನು ಹೊಂದಿರುವ ಪಟ್ಟಣದ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಎಲ್ಲರ ಸಹಾಯ, ಸಹಕಾರದಿಂದ ಆರಾಧನೆ ಸೇರಿದಂತೆ ಇನ್ನಿತರ ಧಾರ್ಮಿಕ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನಡೆಸಿಕೊಂಡು ಬರುತ್ತಿದ್ದು, ಸೇವೆ ಮಾಡಿದವರಿಗೆ ಇಷ್ಟಾರ್ಥಗಳನ್ನು ಈಡೇರಿಸುವ ರಾಯರ ಕಾರ್ಯಕ್ರಮವನ್ನು ಎಲ್ಲ ಸಮಾಜದವರು ಪಾಲ್ಗೊಂಡು ಯಶಸ್ವಿಗೊಳಿಸುವ ಸಂಪ್ರದಾಯ ನಮ್ಮ ಭಾಗದಲ್ಲಿ ಉತ್ತಮ ಪರಂಪರೆಯಾಗಿದೆ. ಆರಾಧನೆ ಕಾರ್ಯಕ್ರಮ ಯಶಸ್ವಿಯಾಗಿರುವುದಕ್ಕೆ ಎಲ್ಲರಿಗೂ ರಾಯರು ಆಶೀರ್ವದಿಸಲಿ ಎಂದರು.

ರಥೋತ್ಸವದ ನಂತರ ಶ್ರೀಮಠದ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸೇವೆ ಸಲ್ಲಿಸಿದ ಮಹನೀಯರನ್ನು ಗೌರವಿಸಲಾಯಿತು. ಈ ವೇಳೆ ಶಾಸಕ ಡಾ.ಚಂದ್ರು ಲಮಾಣಿ, ಬ್ರಹ್ಮವೃಂದದ ಅಧ್ಯಕ್ಷ ಗೋಪಾಲ ಪಡ್ನಿಸ್, ಮಾಜಿ ಶಾಸಕ ರಾಮಣ್ಣ ಲಮಾಣಿ, ಚಂಬಣ್ಣ ಬಾಳಿಕಾಯಿ, ಸಿ.ಆರ್. ಲಕ್ಕುಂಡಿಮಠ, ಮಹೇಶ ಹೊಗೆಸೊಪ್ಪಿನ, ಶರಣು ಗೋಡಿ, ನೀಲಪ್ಪ ಕರ್ಜೆಕಣ್ಣವರ, ಎ.ಪಿ. ಕುಲಕರ್ಣಿ, ವೆಂಕಟೇಶ ಗುಡಿ, ಗುರುರಾಜ ಪಾಟೀಲಕುಲಕರ್ಣಿ, ವೇದವ್ಯಾಸ ಹೊಂಬಳ, ಡಿ.ಪಿ. ಹೇಮಾದ್ರಿ, ಅರವಿಂದ ದೇಶಪಾಂಡೆ, ಮನೋಜ ಹೊಂಬಳ, ದಿಗಂಬರ ಪೂಜಾರ, ಅನಿಲ ಕುಲಕರ್ಣಿ, ಬಾಬು ಅಳವಂಡಿ, ಶ್ರೀಪಾದರಾಜ ಹೊಂಬಳ, ಗುರುರಾಜ ಸುಳ್ಳದ, ಪ್ರಾಣೇಶ ಬೆಳ್ಳಟ್ಟಿ, ಗಂಗಾಧರ ಮ್ಯಾಗೇರಿ, ಕಿರಣ ನವಲೆ, ರಾಮು ಪೂಜಾರ, ರಾಘವೇಂದ್ರ ಗೊಗ್ಗಿ, ನಾಗರಾಜ ಪೂಜಾರ, ಕೃಷ್ಣಕುಮಾರ ಕುಲಕರ್ಣಿ, ಬಿ.ಕೆ. ಕುಲಕರ್ಣಿ, ಶ್ರೀನಿವಾಸ ಹುಲಮನಿ, ಶ್ರೀಕಾಂತ ಪೂಜಾರ, ಡಾ. ಪ್ರಸನ್ನ ಕುಲಕರ್ಣಿ, ಗಂಗಾಧರ ಗೋಡಿ, ರಮೇಶ ತೊರಗಲ್, ರವೀಂದ್ರ ರಾಯಚೂರ, ನಿಂಗಪ್ಪ ತಹಸೀಲ್ದಾರ, ಬಸವರಾಜ ಚಕ್ರಸಾಲಿ, ಗಂಗಾಧರ ಹಳ್ಳಿಕೇರಿ, ರಾಘವೇಂದ್ರ ಮಿಸ್ಕಿನ್, ವೆಂಕಟೇಶ ಮಾತಾಡೆ ಇತರರು ಇದ್ದರು.