ಕನ್ನಡ ಜ್ಯೋತಿ ರಥಯಾತ್ರೆಗೆ ಅಣ್ಣಿಗೇರಿಯಲ್ಲಿ ಅದ್ಧೂರಿ ಸ್ವಾಗತ

| Published : Oct 01 2024, 01:30 AM IST

ಕನ್ನಡ ಜ್ಯೋತಿ ರಥಯಾತ್ರೆಗೆ ಅಣ್ಣಿಗೇರಿಯಲ್ಲಿ ಅದ್ಧೂರಿ ಸ್ವಾಗತ
Share this Article
  • FB
  • TW
  • Linkdin
  • Email

ಸಾರಾಂಶ

87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಕನ್ನಡ ಜ್ಯೋತಿ ರಥಯಾತ್ರೆ ಅಣ್ಣಿಗೇರಿ ಮತ್ತು ಕಲಘಟಗಿಯಲ್ಲಿ ಅದ್ಧೂರಿ ಸ್ವಾಗತ ಕೋರಲಾಯಿತು.

ಅಣ್ಣಿಗೇರಿ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಕನ್ನಡ ಜ್ಯೋತಿ ರಥಯಾತ್ರೆ ಅಣ್ಣಿಗೇರಿಗೆ ಆಗಮಿಸಿದ ಹಿನ್ನೆಲೆಯಲ್ಲಿ ಶಾಸಕ ಎನ್‌.ಎಚ್‌. ಕೋನರಡ್ಡಿ, ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ತಾಯಿ ಭುವನೇಶ್ವರಿ ಮೂರ್ತಿಗೆ ನಮಿಸುವ ಮೂಲಕ ಸ್ವಾಗತಿಸಿದರು.

ರಥಯಾತ್ರೆ ಅಣ್ಣಿಗೇರಿ ಪ್ರವೇಶಿಸುತ್ತಿದ್ದಂತೆ ಆಗಮಿಸಿದ ಕನ್ನಡಾಭಿಮಾನಿಗಳು ಕನ್ನಡ ಶಲ್ಯ ಧರಿಸಿ ರಥಯಾತ್ರೆಯಲ್ಲಿ ಪಾಲ್ಗೊಂಡರು.

ಜಿಲ್ಲಾಧಿಕಾರಿ ದಿವ್ಯ ಪ್ರಭು ರಥಯಾತ್ರೆಗೆ ಚಾಲನೆ ನೀಡಿ ಮಾತನಾಡಿ, ಕನ್ನಡ ನಮ್ಮ ಹೆಮ್ಮೆಯ ಭಾಷೆ. ನೆಲ-ಜಲ ಉಳಿವಿಗಾಗಿ ಶ್ರಮಿಸೋಣ. ಕನ್ನಡ ನುಡಿ ಹೆತ್ತ ತಾಯಿ ಇದ್ದಂತೆ ಎಂದರು.

ಶಾಸಕ ಎನ್‌.ಎಚ್‌. ಕೋನರಡ್ಡಿ ಮಾತನಾಡಿ, ಕನ್ನಡ ಸಾಹಿತ್ಯ ಸಮ್ಮೇಳನದ ಹಿನ್ನೆಲೆಯಲ್ಲಿ ಸಂಚರಿಸುತ್ತಿರುವ ಕನ್ನಡ ಜ್ಯೋತಿ ರಥಯಾತ್ರೆ ಪ್ರತಿಯೊಬ್ಬ ನಾಗರಿಕನ ಹಿರಿಮೆಗೆ ಸಾಕ್ಷಿಯಾಗಿದೆ ಎಂದರು.

ಕಸಾಪ ಜಿಲ್ಲಾಧ್ಯಕ್ಷ ಲಿಂಗರಾಜ ಅಂಗಡಿ ಮಾತನಾಡಿ, ಜಿಲ್ಲೆ, ತಾಲೂಕಿನಾದ್ಯಂತ ಸಾಗುತ್ತಿರುವ ಕನ್ನಡ ರಥಯಾತ್ರೆಯನ್ನು ಸ್ವಾಗತಿಸುವ ಮೂಲಕ ಜಿಲ್ಲಾಡಳಿತ ಮತ್ತು ಜನಪ್ರತಿನಿಧಿಗಳು ಅವರ ಕರ್ತವ್ಯ ನಿಭಾಯಿಸಿದ್ದಾರೆ. ಸಮಸ್ತ ಕನ್ನಡಾಭಿಮಾನಿಗಳ ಪರವಾಗಿ ಧನ್ಯವಾದಗಳು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಪುರಸಭೆ ಅಧ್ಯಕ್ಷೆ ಮೆಹಬೂಬಿ ನವಲಗುಂದ, ತಹಸೀಲ್ದಾರ್‌ ಮಂಜುನಾಥ ದಾಸಪ್ಪನವರ, ಪುರಸಭೆ ಅಧ್ಯಕ್ಷರು, ಕಸಾಪ ತಾಲೂಕು ಅಧ್ಯಕ್ಷ, ಸರ್ವ ಸದಸ್ಯರು, ವಿವಿಧ ಇಲಾಖೆ ಮುಖ್ಯ ಅಧಿಕಾರಿಗಳು, ಸಿಬ್ಬಂದಿ ವರ್ಗದವರು ಪಾಲ್ಗೊಂಡಿದ್ದರು. ಕಲಘಟಗಿಯಲ್ಲಿ ಕನ್ನಡ ರಥಯಾತ್ರೆಗೆ ಭವ್ಯ ಸ್ವಾಗತ

ಕಲಘಟಗಿ:

ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಆಗಮಿಸಿದ ಕನ್ನಡಜ್ಯೋತಿ ಹೊತ್ತ ಕನ್ನಡ ರಥಯಾತ್ರೆಗೆ ಪಟ್ಟಣದಲ್ಲಿ ಭವ್ಯ ಸ್ವಾಗತ ನೀಡಲಾಯಿತು.

ಹನ್ನೆರಡು ಮಠದಿಂದ ವಿವಿಧ ಕಲಾತಂಡ ಹಾಗೂ ವಾದ್ಯಮೇಳಗಳಿಂದ ರಥಯಾತ್ರೆಯನ್ನು ಪಟ್ಟಣದಲ್ಲಿ ಸ್ವಾಗತಿಸಲಾಯಿತು.

ಈ ಸಂದರ್ಭದಲ್ಲಿ ಕಸಾಪ ಜಿಲ್ಲಾಧ್ಯಕ್ಷರಾ ಡಾ. ಲಿಂಗರಾಜ ಅಂಗಡಿ, ತಹಸೀಲ್ದಾರ್ ವೀರೇಶ ಮುಳಗುಂದಮಠ, ಸಿಪಿಐ ಶ್ರೀಶೈಲ ಕೌಜಲಗಿ, ತಾಲೂಕು ಕಸಾಪ ಅಧ್ಯಕ್ಷ ರಮೇಶ ಸೋಲಾರಗೊಪ್ಪ, ಬ್ಲಾಕ್ ಕಾಂಗ್ರೆಸ್‌ ಅಧ್ಯಕ್ಷ ಮಂಜುನಾಥಗೌಡ ಮುರಳ್ಳಿ, ಹರೀಶ ಮಠದ, ಸೋಮು ಬೆನ್ನೂರ, ಐ.ಸಿ. ಗೋಕುಲ, ಗಂಗಪ್ಪ ಗೌಳಿ, ಎಸ್.ಎಸ್. ತಡಸಮಠ, ಕೃಷ್ಣಾ ತಹಸೀಲ್ದಾರ್, ಪ್ರಮೋದ ಪಾಲ್ಕರ, ಈಶ್ವರ ಜವಳಿ, ವೈ.ಜಿ. ಭಗವತಿ, ಶ್ರೀಧರ ಪಾಟೀಲ ಕುಲಕರ್ಣಿ, ಸೋಮಲಿಂಗ ಒಡೆಯರ, ಶಂಕರಗೌಡ ಭಾವಿಕಟ್ಟಿ, ಪಪಂ ಸದಸ್ಯರು ಸೇರಿದಂತೆ ತಾಲೂಕು ಕಸಾಪ ಸದಸ್ಯರು, ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ವಿವಿಧ ಶಾಲೆಗಳ ಸಿಬ್ಬಂದಿ ಮತ್ತು ಮಕ್ಕಳು, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತರು, ಕನ್ನಡ ಸಂಸ್ಕೃತಿ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.