ಮದ್ದೂರು ತಾಲೂಕಿನ ನಿಡಘಟ್ಟ ಗ್ರಾಮದ ಬಳಿಗೆ ಆಗಮಿಸಿದ ಸಚಿವದ್ವಯರಿಗೆ ಶಾಸಕ ಕೆ.ಎಂ.ಉದಯ್ ನೇತೃತ್ವದಲ್ಲಿ ಮದ್ದೂರು ಹಾಗೂ ಕೊಪ್ಪ ಹೋಬಳಿಯ ನೂರಾರು ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರು ಮತ್ತು ಬೆಂಬಲಿಗರು ಪಟಾಕಿ ಸಿಡಿಸಿ ಡೊಳ್ಳು ವಾದ್ಯಗಳ ಸ್ವಾಗತದೊಂದಿಗೆ ಮಾಲಾರ್ಪಣೆ ಮತ್ತು ಹೂಗುಚ್ಚನೀಡಿ ಅಭಿನಂದನೆ.
ಕನ್ನಡಪ್ರಭ ವಾರ್ತೆ ಮದ್ದೂರು
ಸಚಿವರಾದ ನಂತರ ಪ್ರಥಮ ಬಾರಿಗೆ ಮಂಡ್ಯ ಜಿಲ್ಲೆಗೆ ಆಗಮಿಸಿದ್ದ ಎನ್.ಚಲುವರಾಯಸ್ವಾಮಿ, ಪಿ.ಎಂ.ನರೇಂದ್ರ ಸ್ವಾಮಿ, ವಿಧಾನ ಪರಿಷತ್ ಸದಸ್ಯ ಬಿ.ಎಸ್.ಶಿವಣ್ಣ ಅವರುಗಳನ್ನು ಕಾಂಗ್ರೆಸ್ ಕಾರ್ಯಕರ್ತರು ಅದ್ಧೂರಿ ಸ್ವಾಗತ ಕೋರಿದರು.ತಾಲೂಕಿನ ನಿಡಘಟ್ಟ ಗ್ರಾಮದ ಬಳಿಗೆ ಆಗಮಿಸಿದ ಸಚಿವದ್ವಯರಿಗೆ ಶಾಸಕ ಕೆ.ಎಂ.ಉದಯ್ ನೇತೃತ್ವದಲ್ಲಿ ಮದ್ದೂರು ಹಾಗೂ ಕೊಪ್ಪ ಹೋಬಳಿಯ ನೂರಾರು ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರು ಮತ್ತು ಬೆಂಬಲಿಗರು ಪಟಾಕಿ ಸಿಡಿಸಿ ಡೊಳ್ಳು ವಾದ್ಯಗಳ ಸ್ವಾಗತದೊಂದಿಗೆ ಮಾಲಾರ್ಪಣೆ ಮತ್ತು ಹೂಗುಚ್ಚನೀಡಿ ಅಭಿನಂದಿಸಿದರು.
ಈ ವೇಳೆ ಕಾರ್ಯಕರ್ತರ ಗುಂಪು ಸಚಿವರಾದ ಚಲುವರಾಯಸ್ವಾಮಿ, ನರೇಂದ್ರ ಸ್ವಾಮಿ ಮತ್ತು ಎಂಎಲ್ಸಿಶಿವಣ್ಣ ಅವರುಗಳಿಗೆ ತೆರೆದ ವಾಹನದಲ್ಲಿ ಬೃಹತ್ ಗಾತ್ರದ ಸೇಬಿನ ಹಾರ ಹಾಕಿ ಅಭಿನಂದಿಸಿ ಸಚಿವರ ಪರ ಘೋಷಣೆ ಕೂಗಿ ಮೆರವಣಿಗೆ ನಡೆಸಿದರು.ಈ ವೇಳೆ ಜಿಲ್ಲಾ ಸಹಕಾರ ಬ್ಯಾಂಕ್ ಉಪಾಧ್ಯಕ್ಷ ಸಿ.ಚೆಲುವರಾಜು, ನಿರ್ದೇಶಕ ಪಿ.ಸಂದರ್ಶ, ಮಾಜಿ ಅಧ್ಯಕ್ಷ ಕೆ.ಸಿ.ಜೋಗಿಗೌಡ, ಮನ್ಮುಲ್ ನಿರ್ದೇಶಕ ಹರೀಶ್ ಬಾಬು, ಜಿಪಂ ಮಾಜಿ ಅಧ್ಯಕ್ಷ ಸುರೇಶ್ ಕಂಠಿ, ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷರಾದ ಕದಲೂರು ರಾಮಕೃಷ್ಣ, ಸಿ.ನಾಗೇಗೌಡ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಅಜ್ಜಹಳ್ಳಿ ರಾಮಕೃಷ್ಣ, ಗ್ಯಾರೆಂಟಿ ಸಮಿತಿ ಸದಸ್ಯ ಸಿದ್ದರಾಜು, ನಾಗಮಂಗಲ ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಎನ್.ದಿವಾಕರ್ ಮನ್ಮುಲ್ ಮಾಜಿ ನಿರ್ದೇಶಕ ಲಿಂಗನದೊಡ್ಡಿ ರಾಮಕೃಷ್ಣ, ಕದಲೂರು ಸೊಸೈಟಿ ಅಧ್ಯಕ್ಷ ಕೆ.ಆರ್.ಮಹೇಶ್, ಪುರಸಭೆ ಮಾಜಿ ಅಧ್ಯಕ್ಷ ಎಂ.ಪಿ.ಅಮರ ಬಾಬು, ಮಾಜಿ ಸದಸ್ಯರಾದ ವಿಜಯ್ ಕುಮಾರ್, ಡಾಬಾ ಮಹೇಶ್, ಎನ್.ಸಿ.ರಘು, ಎಂ.ಡಿ.ಮಹಾಲಿಂಗಯ್ಯ, ಮುಖಂಡರಾದ ಅರುಣ, ಕೆ.ಪಿ.ಶ್ರೀಧರ, ಪಣ್ಣೇದೊಡ್ಡಿ ಸುಧಾಕರ ಸೇರಿದಂತೆ ಕಾಂಗ್ರೆಸ್ ಪಕ್ಷದ ವಿವಿಧ ಘಟಕಗಳ ಪದಾಧಿಕಾರಿಗಳು ಭಾಗವಹಿಸಿದ್ದರು.