ಸಾರಾಂಶ
ಕಡೂರು, ವೀರ ವನಿತೆ ಕಿತ್ತೂರು ರಾಣಿ ಚನ್ನಮ್ಮ ಬ್ರಿಟಿಷರ ವಿರುದ್ಧ ವಿಜಯ ಸಾಧಿಸಿ 200 ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮತ್ತು ಬೆಳಗಾವಿ ಜಿಲ್ಲಾ ಆಡಳಿತದಿಂದ ಸಂಚರಿಸುತ್ತಿರುವ ಚನ್ನಮ್ಮನ ವಿಜಯೋತ್ಸವದ ರಥ ಯಾತ್ರೆಗೆ ಪಟ್ಟಣದಲ್ಲಿ ಅದ್ಧೂರಿಯ ಸ್ವಾಗತ ಮಾಡಿ ಬೀಳ್ಕೊಡಲಾಗುತ್ತಿದೆ ಎಂದು ಪುರಸಭೆ ಅಧ್ಯಕ್ಷ ಭಂಡಾರಿ ಶ್ರೀನಿವಾಸ್ ತಿಳಿಸಿದರು.
ಕನ್ನಡಪ್ರಭ ವಾರ್ತೆ, ಕಡೂರು
ವೀರ ವನಿತೆ ಕಿತ್ತೂರು ರಾಣಿ ಚನ್ನಮ್ಮ ಬ್ರಿಟಿಷರ ವಿರುದ್ಧ ವಿಜಯ ಸಾಧಿಸಿ 200 ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮತ್ತು ಬೆಳಗಾವಿ ಜಿಲ್ಲಾ ಆಡಳಿತದಿಂದ ಸಂಚರಿಸುತ್ತಿರುವ ಚನ್ನಮ್ಮನ ವಿಜಯೋತ್ಸವದ ರಥ ಯಾತ್ರೆಗೆ ಪಟ್ಟಣದಲ್ಲಿ ಅದ್ಧೂರಿಯ ಸ್ವಾಗತ ಮಾಡಿ ಬೀಳ್ಕೊಡಲಾಗುತ್ತಿದೆ ಎಂದು ಪುರಸಭೆ ಅಧ್ಯಕ್ಷ ಭಂಡಾರಿ ಶ್ರೀನಿವಾಸ್ ತಿಳಿಸಿದರು. ಪಟ್ಟಣದ ಬನಶಂಕರಿ ಸಮುದಾಯ ಭವನದ ಮುಂದೆ ತಹಸೀಲ್ದಾರ್ ಸಿ.ಎಸ್.ಪೂರ್ಣಿಮಾ, ಪುರಸಭೆ ಸದಸ್ಯರು ಹಾಗೂ ಸಾರ್ವಜನಿಕರು ಚನ್ನಮ್ಮನ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಪಟ್ಟಣದಲ್ಲಿ ಅದ್ಧೂರಿಯ ಮೆರವಣಿಗೆ ಮೂಲಕ ಸಾಗಿ ಡಾ.ಬಿ.ಆರ್.ಅಂಬೇಡ್ದರ್ ಪ್ರತಿಮೆ ಮುಂದೆ ಪುಷ್ಪಾರ್ಚನೆ ಮಾಡಿ ಘೋಷಣೆ ಕೂಗುವ ಮೂಲಕ ಬೀಳ್ಕೊಡಲಾಗುತ್ತಿದೆ ಎಂದರು.ಇದೇ 23 ರಂದು ಕಿತ್ತೂರಿನಲ್ಲಿ ನಡೆಯಲಿರುವ ಕಿತ್ತೂರು ಉತ್ಸವ ರಾಜ್ಯಮಟ್ಟದ ಉತ್ಸವವಾಗಿದ್ದು, 1857ರಲ್ಲಿ ಮೊದಲ ಸ್ವಾತಂತ್ರ್ಯ ಸಂಗ್ರಾಮಕ್ಕೆ 30 ವರ್ಷಗಳ ಮೊದಲು ಬ್ರಿಟಿಷರೊಂದಿಗೆ ಹೋರಾಡಿದ ಕಿತ್ತೂರು ರಾಣಿ ಚನ್ನಮ್ಮನ ನೆನಪಿಗಾಗಿ ಆಚರಿಸಲಾಗುತ್ತದೆ. ಈ ಸವಿ ನೆನಪಿಗಾಗಿ ರಾಜ್ಯಾದ್ಯಂತ ತೆರಳುತ್ತಿರುವ ರಥ ಯಾತ್ರೆ ಅವರ ನೆನಪು ಸದಾಕಾಲ ಅಚ್ಚಳಿಯದೆ ಉಳಿಯಲಿದೆ ಎಂದರು.ತಹಸೀಲ್ದಾರ್ ಸಿ.ಎಸ್.ಪೂರ್ಣಿಮಾ, ತಾಲೂಕು ಪಂಚಾಯಿತಿ ಕಾರ್ಯಾನಿರ್ವಾಹಣಾಧಿಕಾರಿ ಪ್ರವೀಣ್, ಕ್ಷೇತ್ರ ಶಿಕ್ಷಣಾಧಿಕಾರಿ ಸಿದ್ದರಾಜನಾಯ್ಕ,ಉಪ ತಹಸೀಲ್ದಾರ್ ನಾಗರತ್ನ, ಪುರಸಭೆ ಸದಸ್ಯರಾದ ಯಾಸೀನ್, ಮರುಗುದ್ದಿ ಮನು ಮತ್ತಿತರರು ಇದ್ದರು.8ಕೆಕೆಡಿಯು2.ಕಡೂರು ಪಟ್ಟಣಕ್ಕೆ ಆಗಮಿಸಿದ ಕಿತ್ತೂರು ರಾಣಿ ಚನ್ನಮ್ಮನ ಜ್ಯೋತಿ ರಥವನ್ನು ಪುರಸಭೆ ಅಧ್ಯಕ್ಷ ಭಂಡಾರಿ ಶ್ರೀನಿವಾಸ್ ಮತ್ತು ತಹಸೀಲ್ದಾರ್ ಸಿ.ಎಸ್.ಪೂರ್ಣಿಮಾ ಸ್ವಾಗತಿಸಿದರು. ಸಾರ್ವಜನಿಕರು ಇದ್ದರು.