ಕುಣಿಗಲ್‌ನಲ್ಲಿ ಸ್ಕೇಟಿಂಗ್ ವಿಜೇತರಿಗೆ ಅದ್ಧೂರಿ ಸ್ವಾಗತ

| Published : Jan 30 2024, 02:07 AM IST

ಕುಣಿಗಲ್‌ನಲ್ಲಿ ಸ್ಕೇಟಿಂಗ್ ವಿಜೇತರಿಗೆ ಅದ್ಧೂರಿ ಸ್ವಾಗತ
Share this Article
  • FB
  • TW
  • Linkdin
  • Email

ಸಾರಾಂಶ

ಚೆನ್ನೈನಲ್ಲಿ ಜ.27 ಮತ್ತು 28 ರಂದು ಸ್ಕೇಟಿಂಗ್ ಫೆಡರೇಷನ್ ಆಫ್ ಇಂಡಿಯಾ ಇವರ ಆಶ್ರಯದಲ್ಲಿ ನಡೆದ ಕ್ರೀಡಾಕೂಟದಲ್ಲಿ ದೇಶದ ಹಲವಾರು ರಾಜ್ಯಗಳಿಂದ ಸಾವಿರಾರು ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಕನ್ನಡಪ್ರಭ ವಾರ್ತೆ ಕುಣಿಗಲ್

ಚೆನ್ನೈನಲ್ಲಿ ಜ.27 ಮತ್ತು 28 ರಂದು ಸ್ಕೇಟಿಂಗ್ ಫೆಡರೇಷನ್ ಆಫ್ ಇಂಡಿಯಾ ಇವರ ಆಶ್ರಯದಲ್ಲಿ ನಡೆದ ಕ್ರೀಡಾಕೂಟದಲ್ಲಿ ದೇಶದ ಹಲವಾರು ರಾಜ್ಯಗಳಿಂದ ಸಾವಿರಾರು ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಕುಣಿಗಲ್ ರಾಮು ಸ್ಕೇಟಿಂಗ್ ಕ್ಲಬ್‌ನಿಂದ ಭಾಗವಹಿಸಿದ ವಿದ್ಯಾರ್ಥಿಗಳಲ್ಲಿ ಪಟ್ಟಣದ 8ನೇ ತರಗತಿ ನವ್ಯಾಶ್ರೀ ಎಂಬ ವಿದ್ಯಾರ್ಥಿ 14 ವರ್ಷದ ವಿಭಾಗದಲ್ಲಿ ಭಾಗವಹಿಸಿ 400 ಮೀಟರ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನದ ಪಡೆದು ಚಿನ್ನದ ಪದಕವನ್ನು ತನ್ನದಾಗಿಸಿಕೊಂಡಿದ್ದು, ಅದೇ ರೀತಿ ರಿಲೇಯಲ್ಲಿ ಭಾಗವಹಿಸಿ ದ್ವಿತೀಯ ಸ್ಥಾನಕ್ಕೆ ಬೆಳ್ಳಿಯ ಪದಕವನ್ನು ಪಡೆದಿದ್ದಾಳೆ.

ಸಾತ್ವಿಕ್ ಹಾಗೂ ಚಿನ್ಮಯಿ 12 ವರ್ಷದ ವಿಭಾಗದಲ್ಲಿ ಭಾಗವಹಿಸಿ ದ್ವಿತೀಯ ಸ್ಥಾನವನ್ನು ಪಡೆದು ಬೆಳ್ಳಿ ಪದಕವನ್ನು ಪಡೆದಿದ್ದಾರೆ. 6 ವರ್ಷದ ವಿಭಾಗದಲ್ಲಿ ಭಾಗವಹಿಸಿದ್ದ ಶಾರವಿ ಪ್ರಥಮ ಸ್ಥಾನ ಪಡೆದು ಚಿನ್ನದ ಪದಕವನ್ನು ಪಡೆದಿದ್ದಾಳೆ. ಮಕ್ಕಳ ಈ ಗೆಲುವಿನ ವಿಚಾರ ತಿಳಿಯುತ್ತಿದ್ದಂತೆ ಪೋಷಕರು ಹಾಗೂ ಹಲವಾರು ಸಂಘ ಸಂಸ್ಥೆಯ ಪದಾಧಿಕಾರಿಗಳು ಕುಣಿಗಲ್ ಪಟ್ಟಣದ ಹುಚ್ಚಮಾಸ್ತಿ ಗೌಡ ವೃತದಲ್ಲಿ ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ನವ್ಯಾಶ್ರೀ, ನಮ್ಮ ಗ್ರಾಮದಲ್ಲಿ ನಮಗೆ ಸಿಕ್ಕ ಅದ್ಧೂರಿ ಸ್ವಾಗತದಿಂದ ಇನ್ನಷ್ಟು ಸಾಧನೆ ಮಾಡಬೇಕೆಂಬ ಆಟ ನಮ್ಮಲ್ಲಿ ಉಂಟಾಗಿದೆ ಎಂದರು. ಪೋಷಕರು ಸೇರಿದಂತೆ ಹಲವಾರು ಸಂಘ ಸಂಸ್ಥೆಯ ಪದಾಧಿಕಾರಿಗಳು ಹಾಗೂ ಅಭಿಮಾನಿಗಳು ಭಾಗವಹಿಸಿದ್ದರು.