ಆಶ್ವಾಸನೆ ಬದಲಿಗೆ ಅನುದಾನ ನೀಡಲಿ: ಶಾಸಕ ದೊಡ್ಡನಗೌಡ ಪಾಟೀಲ

| Published : Jan 02 2024, 02:15 AM IST

ಸಾರಾಂಶ

ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಮುಖ್ಯಮಂತ್ರಿಯಾದ ಸಮಯದಲ್ಲಿ ಅಡಿಗಲ್ಲು ಹಾಕಿ ಚಾಲನೆ ನೀಡಲಾಗಿತ್ತು. ನಂತರ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂತು. ಮುಖ್ಯಮಂತ್ರಿ ಸಿದ್ರಾಮಯ್ಯ ಹಣ ಬಿಡುಗಡೆ ಮಾಡಲಿಲ್ಲ. ಆದರೆ ಈಗ ಸಿದ್ದರಾಮಯ್ಯ ಸಿಎಂ ಆಗಿದ್ದಾರೆ.

ಕುಷ್ಟಗಿ: ಕಾಂಗ್ರೆಸ್ ಸರ್ಕಾರವು ಕೇವಲ ಆಶ್ವಾಸನೆ ನೀಡುತ್ತಿದೆ. ಅಭಿವೃದ್ಧಿಗಾಗಿ ಹಣ ನೀಡಲು ಮುಂದಾಗುತ್ತಿಲ್ಲ ಎಂದು ಶಾಸಕ, ವಿರೋಧ ಪಕ್ಷದ ಮುಖ್ಯ ಸಚೇತಕ ದೊಡ್ಡನಗೌಡ ಪಾಟೀಲ ಹೇಳಿದರು.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೃಷ್ಣಾ ಬಿ ಸ್ಕೀಂ, ಕೊಪ್ಪಳ ಏತ ನೀರಾವರಿಯ ಯೋಜನೆಯ ಅಭಿವೃದ್ಧಿಗಾಗಿ ಕಾಂಗ್ರೆಸ್ ಸರ್ಕಾರ ಹಣ ನೀಡುತ್ತಿಲ್ಲ. ಕೇವಲ ಆಶ್ವಾಸನೆಗಳನ್ನು ನೀಡುತ್ತಿದೆ. ಅನುದಾನ ನೀಡುತ್ತಿಲ್ಲ ಎಂದರು.ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಮುಖ್ಯಮಂತ್ರಿಯಾದ ಸಮಯದಲ್ಲಿ ಅಡಿಗಲ್ಲು ಹಾಕಿ ಚಾಲನೆ ನೀಡಲಾಗಿತ್ತು. ನಂತರ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂತು. ಮುಖ್ಯಮಂತ್ರಿ ಸಿದ್ರಾಮಯ್ಯ ಹಣ ಬಿಡುಗಡೆ ಮಾಡಲಿಲ್ಲ. ಆದರೆ ಈಗ ಸಿದ್ದರಾಮಯ್ಯ ಸಿಎಂ ಆಗಿದ್ದಾರೆ. ಅಭಿವೃದ್ದಿಯ ಕುರಿತು ಕೇವಲ ಆಶ್ವಾಸನೆಗಳನ್ನು ನೀಡುತ್ತಿದ್ದಾರೆ. ಈ ಸರ್ಕಾರದಿಂದ ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ ಎಂದರು.ಈಗಾಗಲೇ ತಾಲೂಕಿನ ಕೆಲ ಕೆರೆಗಳು ಸಂಪೂರ್ಣ ತುಂಬಿವೆ. ಇನ್ನಷ್ಟು ಕೆರೆಗಳು ತುಂಬಿಸಬೇಕಾಗಿದೆ. ಆ ಎಲ್ಲ ಕೆರೆಗಳನ್ನು ತುಂಬಿಸುವಂತಹ ಕೆಲಸ ಸಂಪೂರ್ಣ ಮಾಡುತ್ತೇವೆ. ಮುಂದಿನ ದಿನಮಾನದಲ್ಲಿ ವಿಧಾನಸಭೆಯಲ್ಲಿ ಚರ್ಚೆ ಮಾಡಿ ಸರ್ಕಾರಕ್ಕೆ ಒತ್ತಡ ಹಾಕಿ ಕೊಪ್ಪಳ ಏತ ನೀರಾವರಿ ಯೋಜನೆ ಸಂಪೂರ್ಣಗೊಳಿಸುವಂತಹ ಕೆಲಸ ಮಾಡಿ ಈ ಭಾಗದ ಕನಸಿನ ಕೂಸಾಗಿರುವ ಕೊಪ್ಪಳ ಏತ ನೀರಾವರಿಯ ಯೋಜನೆ ಸಂಪೂರ್ಣಗೊಳಿಸುವಂತಹ ಕೆಲಸ ಮಾಡುತ್ತೇವೆ ಎಂದರು.ಕುಷ್ಟಗಿಗೆ ನಾಯಕರ ದಂಡು:ಜನವರಿ ಅಥವಾ ಫೆಬ್ರುವರಿ ತಿಂಗಳಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜೆಯೇಂದ್ರ, ವಿಪಕ್ಷ ನಾಯಕ ಆರ್.ಅಶೋಕ, ಸುನಿಲಕುಮಾರ್ ಸೇರಿದಂತೆ ಪಕ್ಷದ ಘಟಾನುಘಟಿ ನಾಯಕರು ಕುಷ್ಟಗಿ ಪಟ್ಟಣಕ್ಕೆ ಆಗಮಿಸಲಿದ್ದಾರೆ. ಬೃಹತ್ ಸಮಾವೇಶ ಮಾಡುತ್ತೇವೆ. ಇಡೀ ದೇಶದಲ್ಲಿ ಬಿಜೆಪಿ ಅಲೆಯಿದ್ದು, ರಾಜ್ಯದಲ್ಲಿ 28 ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ. ಮುಂದಿನ ದಿನಮಾನದಲ್ಲಿ ಮತ್ತೆ ಈ ದೇಶದ ಪ್ರಧಾನಿಯಾಗಿ ನರೇಂದ್ರ ಮೋದಿ ಆಗಲಿದ್ದಾರೆ ಎಂದು ಹೇಳಿದರು.ಈ ಸಂದರ್ಭದಲ್ಲಿ ಬಿಜೆಪಿ ಅಧ್ಯಕ್ಷ ಬಸವರಾಜ ಹಳ್ಳೂರ, ಚಂದ್ರಕಾಂತ ವಡ್ಡಿಗೇರಿ ಉಪಸ್ಥಿತರಿದ್ದರು.