ನಿವೇಶಹ ರಹಿತ ಅರ್ಹ ಫಲಾನುಭವಿಗಳಿಗೆ ನಿವೇಶನ ನೀಡಿ: ಅಬ್ದುಲ್ಲಾ ಖಾನ್

| Published : Jan 16 2024, 01:46 AM IST

ನಿವೇಶಹ ರಹಿತ ಅರ್ಹ ಫಲಾನುಭವಿಗಳಿಗೆ ನಿವೇಶನ ನೀಡಿ: ಅಬ್ದುಲ್ಲಾ ಖಾನ್
Share this Article
  • FB
  • TW
  • Linkdin
  • Email

ಸಾರಾಂಶ

ಶಿರಾ ನಗರದ ನಿವೇಶನ ರಹಿತರಿಗೆ ನಿವೇಶನ ಹಂಚುವಾಗ ಅರ್ಹ ಫಲಾನುಭವಿಗಳನ್ನು ಗುರುತಿಸಿ ನಿವೇಶನ ಹಂಚುವ ಮೂಲಕ ನಿವೇಶನ ರಹಿತರ ಬೇಡಿಕೆ ಈಡೇರಿಸಿ ಶಾಸಕ ಟಿ.ಬಿ.ಜಯಚಂದ್ರ ಅವರಿಗೆ ಕೀರ್ತಿ ತನ್ನಿ ಎಂದು ಕೆಪಿಸಿಸಿ ಅಲ್ಪಸಂಖ್ಯಾತರ ಘಟಕದ ರಾಜ್ಯ ಉಪಾಧ್ಯಕ್ಷ ಅಬ್ದುಲ್ಲಾ ಖಾನ್ ಹೇಳಿದರು.

ಕನ್ನಡಪ್ರಭ ವಾರ್ತೆ ಶಿರಾ

ನಗರದ ನಿವೇಶನ ರಹಿತರಿಗೆ ನಿವೇಶನ ಹಂಚುವಾಗ ಅರ್ಹ ಫಲಾನುಭವಿಗಳನ್ನು ಗುರುತಿಸಿ ನಿವೇಶನ ಹಂಚುವ ಮೂಲಕ ನಿವೇಶನ ರಹಿತರ ಬೇಡಿಕೆ ಈಡೇರಿಸಿ ಶಾಸಕ ಟಿ.ಬಿ.ಜಯಚಂದ್ರ ಅವರಿಗೆ ಕೀರ್ತಿ ತನ್ನಿ ಎಂದು ಕೆಪಿಸಿಸಿ ಅಲ್ಪಸಂಖ್ಯಾತರ ಘಟಕದ ರಾಜ್ಯ ಉಪಾಧ್ಯಕ್ಷ ಅಬ್ದುಲ್ಲಾ ಖಾನ್ ಹೇಳಿದರು.

ನಗರದಲ್ಲಿ ನೂತನವಾಗಿ ಶಿರಾ ನಗರಸಭೆ ಆಶ್ರಯ ಸಮಿತಿಗೆ ನಾಮನಿರ್ದೇಶನ ಸದಸ್ಯರಾಗಿ ಆಯ್ಕೆಯಾದ ಮಂಜುನಾಥ್ ಹಾಗೂ ಜಯಲಕ್ಷ್ಮೀ, ವಾಜರಹಳ್ಳಿ ರಮೇಶ್, ನೂರುದ್ದೀನ್ ಅವರಿಗೆ ಅಭಿನಂದನೆ ಸಲ್ಲಿಸ ಮಾತನಾಡಿ,. ಕಾಂಗ್ರೆಸ್ ಪಕ್ಷ ಯಾವತ್ತೂ ಹಿಂದುಳಿದ ವರ್ಗ, ಸಣ್ಣ ಸಣ್ಣ ಸಮುದಾಯದವರನ್ನು ಗುರುತಿಸಿ ಅಧಿಕಾರವನ್ನು ನೀಡುತ್ತದೆ. ಎಲ್ಲರಿಗೂ ಸರಿಸಮಾನವಾಗಿ ಅಧಿಕಾರ ನೀಡುತ್ತಿರುವುದು ಕಾಂಗ್ರೆಸ್ ಪಕ್ಷ. ಇದು ಹಿಂದಿನಿಂದಲೂ ಇದೇ ರೀತಿ ನಡೆಯುತ್ತಿದೆ ಮುಂದೆಯೂ ನಡೆಯುತ್ತದೆ ಎಂದ ಅವರು ನೂತನವಾಗಿ ಆಶ್ರಯ ಸಮಿತಿಗೆ ನಾಮನಿರ್ದೇಶನ ಸದಸ್ಯರಾಗಿ ಆಯ್ಕೆಯಾಗಿರುವ ನಿಮ್ಮ ಮೇಲೆ ದೊಡ್ಡ ಜವಾಬ್ದಾರಿ ಇದೆ. ಸುಮಾರು ೧೦ ಸಾವಿರ ನಿವೇಶನಗಳು ನಗರ ಸೇರಿದಂತೆ ತಾಲೂಕಿನಲ್ಲಿ ಹಂಚಬೇಕಿದೆ. ಅರ್ಹ ಫಲಾನುಭವಿಗಳನ್ನು ಹುಡುಕಿ ಪರಿಶೀಲನೆ ಮಾಡಿ ನಿವೇಶನ ಹಂಚುವ ಕಾರ್ಯ ಮಾಡಬೇಕು. ನಿವೇಶನ ರಹಿತರಿಗೆ ನ್ಯಾಯ ಒದಗಿಸಬೇಕು. ಯಾವುದೇ ರೀತಿಯ ತಾರತಮ್ಯ ಮಾಡಬಾರದು ಎಂದು ಕಿವಿಮಾತು ಹೇಳಿದರು.

ನೂತನವಾಗಿ ಆಶ್ರಯ ಸಮಿತಿಗೆ ನಾಮನಿರ್ದೇಶನ ಸದಸ್ಯರಾಗಿ ಆಯ್ಕೆಯಾಗಿರುವ ಜಯಲಕ್ಷ್ಮೀ ಮಾತನಾಡಿ, ಕಾಂಗ್ರೆಸ್ ಪಕ್ಷವು ಮಹಿಳೆಯರನ್ನು ದಲಿತರನ್ನು ಗುರುತಿಸಿ ನಗರಸಭೆ ಆಶ್ರಯ ಸಮಿತಿಗೆ ನಾಮನಿರ್ದೇಶನ ಸದಸ್ಯರನ್ನಾಗಿ ಆಯ್ಕೆ ಮಾಡಿದೆ. ಇದಕ್ಕೆ ಕಾರಣರಾದ ಶಾಸಕ ಟಿ.ಬಿ.ಜಯಚಂದ್ರ ಅವರಿಗೆ ಅಭಿನಂದನೆ ಸಲ್ಲಿಸುತ್ತೇವೆ ಎಂದರು. ಈ ವೇಳೆ ನಗರಸಭೆ ಆಶ್ರಯ ಸಮಿತಿ ನಾಮನಿರ್ದೇಶನ ಸದಸ್ಯ ಮಂಜುನಾಥ್ ಸೇರಿದಂತೆ ಹಲವರು ಹಾಜರಿದ್ದರು.