ಅಲ್ಪಸಂಖ್ಯಾತರ ಕಲ್ಯಾಣ ಕಾರ್ಯಕ್ರಮಗಳಿಗೆ ಅನುದಾನ

| Published : Apr 01 2025, 12:50 AM IST

ಸಾರಾಂಶ

ಅಲ್ಪಸಂಖ್ಯಾತ ಕಲ್ಯಾಣ ಕಾರ್ಯಕ್ರಮಗಳಿಗೆ ಮೀಸಲಿರುವ ಅನುದಾನವನ್ನು ಮೊಹಲ್ಲಾಗಳ ರಸ್ತೆ ಮತ್ತು ಚರಂಡಿಗಳ ನಿರ್ಮಾಣ ಕಾಮಗಾರಿಗೆ ಬಳಸಿಕೊಳ್ಳಲಾಗುತ್ತದೆ ಎಂದು ಶಾಸಕ ಶರತ್ ಬಚ್ಚೇಗೌಡ ಹೇಳಿದರು.

ಸೂಲಿಬೆಲೆ: ಅಲ್ಪಸಂಖ್ಯಾತ ಕಲ್ಯಾಣ ಕಾರ್ಯಕ್ರಮಗಳಿಗೆ ಮೀಸಲಿರುವ ಅನುದಾನವನ್ನು ಮೊಹಲ್ಲಾಗಳ ರಸ್ತೆ ಮತ್ತು ಚರಂಡಿಗಳ ನಿರ್ಮಾಣ ಕಾಮಗಾರಿಗೆ ಬಳಸಿಕೊಳ್ಳಲಾಗುತ್ತದೆ ಎಂದು ಶಾಸಕ ಶರತ್ ಬಚ್ಚೇಗೌಡ ಹೇಳಿದರು.

ಹೋಬಳಿಯ ಕಂಬಳೀಪುರ ಗ್ರಾಪಂ ವ್ಯಾಪ್ತಿಯ ಇ-ಮುತ್ಸಂದ್ರ ಗ್ರಾಮದಲ್ಲಿ ಅಲ್ಪಸಂಖ್ಯಾತ ಅಭಿವೃದ್ಧಿ ಅನುದಾನದಲ್ಲಿ ಕಾಂಕ್ರೀಟ್ ರಸ್ತೆ ಹಾಗೂ ಚರಂಡಿ ನಿರ್ಮಾಣ ಕಾಮಗಾರಿ ಗುದ್ದಲಿಪೂಜೆ ನೆರವೇರಿಸಿ ಮಾತನಾಡಿದ ಅವರು,

ಇ-ಮುತ್ಸಂದ್ರ ಗ್ರಾಮದಲ್ಲಿ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಅನುದಾನದಲ್ಲಿ ೫೦ ಲಕ್ಷ ವೆಚ್ಚದಲ್ಲಿ ಕಾಂಕ್ರೀಟ್‌ ರಸ್ತೆ ಹಾಗೂ ೫೦ ಲಕ್ಷ ವೆಚ್ಚದಲ್ಲಿ ಚರಂಡಿ ನಿರ್ಮಾಣ ಕಾಮಗಾರಿ ನೆರವೇರಿಸಲಾಗುವುದು ಎಂದರು.

ಕಂಬಳೀಪುರ ಗ್ರಾಪಂ ಮಾಜಿ ಅಧ್ಯಕ್ಷ ಆನಂದಪ್ಪ ಮಾತನಾಡಿ, ಇ-ಮುತ್ಸಂದ್ರ ಗ್ರಾಮದಲ್ಲಿ ಅಲ್ಪಸಂಖ್ಯಾತ ಸಮುದಾಯ ಹೆಚ್ಚಿನ ಸಂಖ್ಯೆಯಲ್ಲಿದ್ದು ಸಮುದಾಯದ ಅನುಕೂಲಕ್ಕಾಗಿ ಅವರ ಬೇಡಿಕೆಯಂತೆ ಶಾಸಕ ಶರತ್ ಬಚ್ಚೇಗೌಡರು ೧ ಕೋಟಿ ಅನುದಾನದಲ್ಲಿ ರಸ್ತೆ ಹಾಗೂ ಚರಂಡಿ ಕಾಮಗಾರಿ ಮಾಡಿಸಿಕೊಟ್ಟಿದ್ದಾರೆ ಎಂದರು.

ಈ ವೇಳೆ ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಬಿ.ವಿ.ಸತೀಶಗೌಡ, ಹೊಸಕೋಟೆ ಟೌನ್ ಕಾಂಗ್ರೆಸ್ ಅಧ್ಯಕ್ಷ ಬಿ.ವಿ.ಬೈರೇಗೌಡ, ತಾಪಂ ಮಾಜಿ ಸದಸ್ಯ ಡಾ.ಡಿ.ಟಿ.ವೆಂಕಟೇಶ್, ಅಕ್ಬರ್ ಅಲಿಖಾನ್, ವಿಜಯಕುಮಾರ್, ಗುತ್ತಿಗೆದಾರ ಮನೋಜ್ ಇತರರಿದ್ದರು.