ಸಾರಾಂಶ
ಕಲ್ಲಬೆಟ್ಟುವಿನಲ್ಲಿರುವ ಎಕ್ಸಲೆಂಟ್ ವಿದ್ಯಾ ಸಂಸ್ಥೆಯಲ್ಲಿ ನಡೆದ ಸಮಾರಂಭದಲ್ಲಿ ವಾರ್ಷಿಕ ಸಾಂಸ್ಕೃತಿಕ ಚಟುವಟಿಕೆಗಳನ್ನು ರಂಗ ನಟ, ಸಿನಿಮಾ ಕಲಾವಿದ ಅರವಿಂದ ಬೋಳಾರ್ ಉದ್ಘಾಟಿಸಿದರು.
ಕನ್ನಡಪ್ರಭ ವಾರ್ತೆ ಮೂಡುಬಿದಿರೆ
ಕಲೆಯ ಜೊತೆ ವಿದ್ಯೆಯೂ ಇದ್ದರೆ ಹೆಚ್ಚು ಸಾಧನೆ ಸಾಧ್ಯ. ವಿದ್ಯಾರ್ಥಿ ಜೀವನದ ಬಾಲ್ಯದ ಸುವರ್ಣ ಯುಗ. ಚಿನ್ನಕ್ಕೆ ಬಡಿದಷ್ಟು ಆಕಾರ ಮತ್ತು ಹೆಚ್ಚು ಹೊಳಪು ಬರುತ್ತದೆ ಎಂದು ರಂಗಕರ್ಮಿ, ನಟ ಅರವಿಂದ ಬೋಳಾರ್ ಹೇಳಿದ್ದಾರೆ.ಕಲ್ಲಬೆಟ್ಟುವಿನಲ್ಲಿರುವ ಎಕ್ಸಲೆಂಟ್ ವಿದ್ಯಾ ಸಂಸ್ಥೆಯಲ್ಲಿ ನಡೆದ ಸಮಾರಂಭದಲ್ಲಿ ವಾರ್ಷಿಕ ಸಾಂಸ್ಕೃತಿಕ ಚಟುವಟಿಕೆಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.ವಿದ್ಯಾರ್ಥಿಗಳು ತಾವು ಕಲಿತ ಶಾಲೆಯನ್ನು ಮರೆಯಬಾರದು, ನಮ್ಮ ಮನೆಯನ್ನು ಪ್ರೀತಿ ಮಾಡಿದಂತೆ ಶಾಲೆಯನ್ನು ಪ್ರೀತಿ ಮಾಡಬೇಕು. ಶಾಲೆ ವಿದ್ಯಾ ದೇಗುಲ. ಸ್ವಂತ ಉದ್ಯೋಗ ಪಡೆದ ನಂತರ ಹೆತ್ತವರನ್ನು ಗುರುಗಳನ್ನು ಶ್ರದ್ಧೆಯಿಂದ ಸ್ಮರಿಸಬೇಕು ಎಂದರು.ಗೋಲ್ಡನ್ ಬುಕ್ ಆಫ್ ರೆಕಾರ್ಡ್ ಹೋಲ್ಡರ್ ವಿದ್ವಾನ್ ಯಶವಂತ್ ಎಂ. ಜಿ. ಮಾತನಾಡಿ, ದೀಪ ಬೆಳಗಬೇಕಾದರೆ ದೇವರ ಅಸ್ತಿತ್ವ ಅತೀ ಮುಖ್ಯ, ಇಚ್ಛಾ ಶಕ್ತಿ, ದೈವೀಶಕ್ತಿ ಮತ್ತು ಆತ್ಮ ವಿಶ್ವಾಸ ಜೊತೆಗಿದ್ದರೆ ಎಂತಹ ಸಾಧನೆ ಬೇಕಾದರೂ ಮಾಡಬಹುದು ಎಂದರು.ಸಂಸ್ಥೆಯ ಕಾರ್ಯದರ್ಶಿ ರಶ್ಮಿತಾ ಜೈನ್ ಮಾತಾನಾಡಿ, ಕಲೆಯನ್ನು ಕಟ್ಟಿಕೊಂಡು ಜೀವನ ನಡೆಸಬಹುದು, ಕಲೆ ಹೃದಯವನ್ನು ತಟ್ಟಿದ್ದರೆ ಸರಳತೆ ಮನ ಗೆಲ್ಲುತ್ತದೆ. ಇದರಿಂದ ಜೀವನದಲ್ಲಿ ಸಾರ್ಥಕತೆ ಸಾಧಿಸಬಹುದು ಎಂದು ಅಭಿಪ್ರಾಯಪಟ್ಟರು.ಅಧ್ಯಕ್ಷತೆ ವಹಿಸಿದ್ದ ಎಕ್ಸಲೆಂಟ್ ವಿದ್ಯಾ ಸಂಸ್ಥೆಗಳ ಅಧ್ಯಕ್ಷ ಯುವರಾಜ್ ಜೈನ್ ಮಾತನಾಡಿ, ಎಲ್ಲರಿಗೂ ಭಗವಂತ ಏನಾದರೂ ಒಂದು ಪ್ರತಿಭೆಯನ್ನು ಕೊಟ್ಟಿದ್ದಾನೆ ಅದನ್ನು ಬಳಸಿಕೊಂಡು ಜೀವನ ರೂಪಿಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.ಅತಿಥಿಗಳಾದ ಅರವಿಂದ ಬೋಳಾರ್ ಮತ್ತು ಯಶವಂತ್ ಎಂ ಜೆ ಅವರನ್ನು ಸಂಸ್ಥೆಯ ವತಿಯಿಂದ ಗೌರವಿಸಲಾಯಿತು. ಸಂಪನ್ಮೂಲ ಶಿಕ್ಷಕರು ಹಾಗೂ ಸಂಸ್ಥೆಗೆ ಹೊಸದಾಗಿ ಈ ವರ್ಷ ದಾಖಲಾದ ವಿದ್ಯಾರ್ಥಿಗಳ ಸಾಂಸ್ಕೃತಿಕ ಪ್ರತಿಭಾ ಪ್ರದರ್ಶನ ನಡೆಯಿತು. ಮುಖ್ಯೋಪಾಧ್ಯಾಯ ಶಿವಪ್ರಸಾದ್ ಭಟ್ ಮತ್ತು ಸಿಬಿಎಸ್‌ಇ ಶಾಲೆಯ ಪ್ರಾಂಶುಪಾಲ ಶ್ರೀಪ್ರಸಾದ್ ಮತ್ತು ಉಪ ಮುಖ್ಯೋಪಾಧ್ಯಾಯ ಜಯಶೀಲ ಇದ್ದರು.ಶಿಕ್ಷಕಿ ಜಯಲಕ್ಷ್ಮಿ, ವಿದ್ಯಾರ್ಥಿನಿ ಅದಿತಿ ನಿರೂಪಿಸಿದರು, ಆಕಾಂಕ್ಷ್ ಜೈನ್ ಸ್ವಾಗತಿಸಿದರು. ನಕ್ಷತ್ರ ವಂದಿಸಿದರು.