ಕನ್ನಡಪ್ರಭ ವಾರ್ತೆ ಚಾಮರಾಜನಗರ

ಮುಖ್ಯಮಂತ್ರಿಗಳ ವಿಶೇಷ ಗ್ರಾಮೀಣ ರಸ್ತೆಗಳ ಅಭಿವೃದ್ಧಿ ನಿಧಿಯಲ್ಲಿ ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ಬಿಡುಗಡೆಯಾಗಿದ್ದು, ಮುಂದಿನ ದಿನಗಳಲ್ಲಿ ಗ್ರಾಮೀಣ ಸಂಪರ್ಕ ರಸ್ತೆಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡುವುದಾಗಿ ಗುಂಡ್ಲುಪೇಟೆ ಕ್ಷೇತ್ರದ ಶಾಸಕ ಎಚ್.ಎಂ. ಗಣೇಶ್‌ ಪ್ರಸಾದ್ ತಿಳಿಸಿದರು.

ತಾಲೂಕಿನ ಹರವೆ ಗ್ರಾಮದ ಹತ್ತಿರದಲ್ಲಿನ ಗುಂಡ್ಲುನಿಂದ ಮಲೆಯೂರು ಮಾರ್ಗಕ್ಕೆ ಸಂಪರ್ಕ ಕಲ್ಪಿಸುವ ೫೦೦ ಮೀಟರ್ ರಸ್ತೆ ಅಭಿವೃದ್ಧಿಗಾಗಿ ₹1 ಕೋಟಿ ವೆಚ್ಚದಲ್ಲಿ ಕೈಗೊಂಡಿರುವ ಕಾಮಗಾರಿಗೆ ಸೋಮವಾರ ಗುದ್ದಲಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.

ಈಗಾಗಲೇ ಬದನವಾಳುನಿಂದ ರಾಜ್ಯ ಹೆದ್ದಾರಿ ೧೫೦ನಿಂದ ವೀರನಪುರ ಕ್ರಾಸ್‌ಗೆ ಸೇರುವ ರಸ್ತೆಯನ್ನು ಅಭಿವೃದ್ಧಿಪಡಿಸಲು ಸಿಎಂ ವಿಶೇಷ ಅನುದಾನದಡಿ ಕಾಮಗಾರಿಯನ್ನು ಕೈಗೊಳ್ಳಲಾಗಿದೆ. ಮಲೆಯೂರಿನಿಂದ ಹರವೆ ಮಾರ್ಗದ ರಸ್ತೆ ಅಭಿವೃದ್ಧಿಗೆ ಚಾಲನೆ ನೀಡಿ, ಕಾಮಗಾರಿ ಪ್ರಗತಿಯಲ್ಲಿದೆ. ಈಗ ಹರವೆಯ ಗುಂಡ್ಲುದಿಂದ ಮಲೆಯೂರಿಗೆ ಸಂಪರ್ಕ ಕಲ್ಪಿಸುವ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ಮಾಡಿದ್ದೇವೆ ಎಂದರು.

ಹರವೆ ಗುಂಡ್ಲು ಸೇತುವೆ ನಿರ್ಮಾಣಕ್ಕೆ ₹೨.೫೦ ಕೋಟಿ ಬಿಡುಗಡೆಯಾಗಿದ್ದು, ಟೆಂಡರ್ ಪ್ರಕ್ರಿಯೆಯಲ್ಲಿದೆ. ಅಂತಿಮವಾಗುತ್ತಿದ್ದಂತೆ ಈ ಸೇತುವೆ ನಿರ್ಮಾಣಕ್ಕೆ ಚಾಲನೆ ನೀಡಲಾಗುತ್ತದೆ. ಚಿಕ್ಕಬೇಗೂರು, ಹರವೆ ಮಾರ್ಗದ ಮುಖ್ಯ ರಸ್ತೆ ಅಭಿವೃದ್ದಿಗೆ ₹೧೦ ಕೋಟಿ ಬಿಡುಗಡೆಯಾಗಿದ್ದು, ₹೬ ಕೋಟಿ ಹರವೆ ಭಾಗದ ರಸ್ತೆಗೆ ಸೇರ್ಪಡೆ ಮಾಡಲಾಗಿದೆ. ಕಳೆದ ಮೂರು ವರ್ಷಗಳ ಅವಧಿಯಲ್ಲಿ ಹರವೆ ಭಾಗದ ಆರು ಪಂಚಾಯಿತಿ ವ್ಯಾಪ್ತಿ ಗ್ರಾಮಗಳ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲು ಹೆಚ್ಚಿನ ಶ್ರಮ ವಹಿಸಿದ್ದು, ಇನ್ನು ಎರಡು ವರ್ಷಗಳ ಅವಧಿಯಲ್ಲಿ ಹರವೆ ಹೋಬಳಿಯನ್ನು ಮಾದರಿಯನ್ನಾಗಿ ಮಾಡುವ ಗುರಿ ನಮ್ಮದಾಗಿದೆ. ಎಲ್ಲಾ ಗ್ರಾಮಗಳಲ್ಲಿ ಎಲ್ಲಾ ವರ್ಗಗಳ ಜನರು ವಾಸಿಸುವ ಬಡಾವಣೆಗಳಿಗೆ ಈಗಾಗಲೇ ಸಿಮೆಂಟ್ ರಸ್ತೆ, ಚರಂಡಿ ನಿರ್ಮಾಣ ಮಾಡಲಾಗುತ್ತಿದೆ. ಮುಂದೆ ಇನ್ನು ಹೆಚ್ಚಿನ ಅನುದಾನವನ್ನು ನೀಡುವುದಾಗಿ ಎಚ್.ಎಂ. ಗಣೇಶ್ ಪ್ರಸಾದ್ ತಿಳಿಸಿದರು.


ಹರವೆ ಜಿಪಂ ಕ್ಷೇತ್ರದ ಮಾಜಿ ಸದಸ್ಯ ಕೆರೆಹಳ್ಳಿ ನವೀನ್, ಕರ್ನಾಟಕ ರಾಜ್ಯ ಕನಿಷ್ಠ ವೇತನ ಸಲಹಾ ಸಮಿತಿಯ ಮಾಜಿ ಅಧ್ಯಕ್ಷ ಉಮೇಶ್ ಎಸ್‌ಪಿಕೆ, ಪಿಡಬ್ಲ್ಯೂಡಿ ಎಇಇ ಶಾಂತಮ್ಮ, ತಾಪಂ ಮಾಜಿ ಸದಸ್ಯ ಉದಯಕುಮಾರ್, ಮುಖಂಡರಾದ ಮಾಸ್ಟರ್ ಮಾದಪ್ಪ, ಮಲ್ಲಣ್ಣ, ಪಿಎಸಿಸಿ ಬ್ಯಾಂಕ್ ನಿರ್ದೇಶಕ ರೇವಣ್ಣ, ರಂಗಸ್ವಾಮಿ ನಾಯಕ, ಗ್ಯಾರಂಟಿ ಸಮಿತಿ ಸದಸ್ಯ ಪ್ರವೀಣ್, ಹೊಸಹಳ್ಳಿ ಮಧುಸೂದನ್, ಕೆಂಪರಾಜು, ಮಹದೇವಯ್ಯ, ಮಹದೇವಸ್ವಾಮಿ, ಗೌಡಿಕೆ ಲೋಕೇಶ, ಬಸವರಾಜಪ್ಪ, ಮಲ್ಲೇಶ್, ಪ್ರಕಾಶ್ ಮೊದಲಾದವರು ಇದ್ದರು.