ಪಾವಗಡ ನಗರದ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಿದ್ದು ಸಿಎಂ ಹಾಗೂ ಶಾಸಕರ ಪ್ರದೇಶಾಭಿವೃದ್ಧಿ ಯೋಜನೆ ಅಡಿ ಸುಮಾರು 20ಕೋಟಿ ವೆಚ್ಚದ ಕಾಮಗಾರಿಗಳು ಪ್ರಗತಿಯಲ್ಲಿವೆ ಎಂದು ಶಾಸಕ ಹಾಗೂ ತುಮುಲ್ ಅಧ್ಯಕ್ಷರಾದ ಎಚ್.ವಿ.ವೆಂಕಟೇಶ್ ಹೇಳಿದರು.
ಕನ್ನಡಪ್ರಭ ವಾರ್ತೆ ಪಾವಗಡ
ಪಾವಗಡ ನಗರದ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಿದ್ದು ಸಿಎಂ ಹಾಗೂ ಶಾಸಕರ ಪ್ರದೇಶಾಭಿವೃದ್ಧಿ ಯೋಜನೆ ಅಡಿ ಸುಮಾರು 20ಕೋಟಿ ವೆಚ್ಚದ ಕಾಮಗಾರಿಗಳು ಪ್ರಗತಿಯಲ್ಲಿವೆ ಎಂದು ಶಾಸಕ ಹಾಗೂ ತುಮುಲ್ ಅಧ್ಯಕ್ಷರಾದ ಎಚ್.ವಿ.ವೆಂಕಟೇಶ್ ಹೇಳಿದರು. ಪಟ್ಟಣದ ಶಾಂತಿ ನಗರದಲ್ಲಿ ಭಾನುವಾರ ಭೂಸೇನಾ ನಿಗಮದ ವತಿಯಿಂದ ಕೇಂದ್ರದ ವತಿಯಿಂದ ಕೈಗೊಂಡಿದ್ದ 20 ಲಕ್ಷ ವೆಚ್ಚದ ನೂತನ ಅಂಗನವಾಡಿ ಕೇಂದ್ರದ ಉದ್ಘಾಟನೆ ನೆರವೇರಿಸಿ ಮಾತನಾಡಿದರು. ಪಟ್ಟಣದ ಸರ್ವೋತ್ತೊಮುಖ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಿದ್ದು ಕುಡಿಯುವ ನೀರು, ಸಿಸಿರಸ್ತೆ ಚರಂಡಿ ಅಂಗನವಾಡಿ ಹಾಗೂ ಶಾಲಾ ಕೊಠಡಿ ಸೇರಿದಂತೆ ಅಗತ್ಯ ಮೂಲಭೂತ ಸಮಸ್ಯೆ ನಿವಾರಣೆಗೆ ಹೆಚ್ಚು ಆದ್ಯತೆ ನೀಡಲಾಗಿದೆ. ನಗರದಲ್ಲಿನ ಮನೆಮನೆಗೆ ಸಮರ್ಪಕವಾಗಿ ಶುದ್ಧ ತುಂಗಭದ್ರಾ ನದಿ ಯೋಜನೆಯ ಕುಡಿಯುವ ನೀರು ಸರಬರಾಜ್ ಕಲ್ಪಿಸುವ ಹಿನ್ನೆಲೆಯಲ್ಲಿ ಅಮೃತ ಯೋಜನೆಯಡಿ ಕೋಟ್ಯಂತರ ರು.ವೆಚ್ಚದಲ್ಲಿ ವಾರ್ಡ್‌ಗಳಲ್ಲಿ ಹೊಸ ಪೈಪ್‌ಲೈನ್ ಹಾಗೂ ಮನೆಮನೆ ನಲ್ಲಿ ಅಳವಡಿಕೆ ಕಾಮಗಾರಿ ಭರದಿಂದ ಸಾಗುತ್ತಿದೆ. ಪೈಪ್‌ಲೈನ್ ಕಾಮಗಾರಿಯ ವೇಗ ಹೆಚ್ಚಿಸಿದ್ದು, ಕಾಮಗಾರಿ ನಿರ್ವಹಣೆಗೆ ಅಗೆದಿದ್ದ ಗುಂಡಿಗಳನ್ನು ಮುಚ್ಚುವಂತೆ ಈಗಾಗಲೇ ಪುರಸಭೆ ಹಾಗೂ ಅಮೃತ ಯೋಜನೆಯ ಅಧಿಕಾರಿಗಳಿಗೆ ತಾಕೀತು ಮಾಡಲಾಗಿದೆ ಎಂದರು.ಸರ್ಕಾರಿ ಬಸ್ ನಿಲ್ದಾಣ ಸೇರಿದಂತೆ ಮುಂದಿನ ದಿನಗಳಲ್ಲಿ ನಗರದ ಸೌಂದರ್ಯ ಹೆಚ್ಚಿಸುವ ಪ್ರಯುಕ್ತ, ಸ್ವಚ್ಛತೆ ಇತರೆ ಅಗತ್ಯ ಸೌಲಭ್ಯಗಳ ಕುರಿತು ಹೆಚ್ಚಿನ ಅನುದಾನ ಕಲ್ಪಿಸುವುದಾಗಿ ತಿಳಿಸಿದರು.
ಇದೇ ವೇಳೆ ಪುರಸಭಾ ಮಾಜಿ ಅಧ್ಯಕ್ಷರಾದ ಸುದೇಶ್ ಬಾಬು, ಮುಖಂಡ ಎ.ಶಂಕರ್ ರೆಡ್ಡಿ, ಪುರಸಭೆ ಮಾಜಿ ಅಧ್ಯಕ್ಷ ಪಿ.ಎಚ್.ರಾಜೇಶ್, ರಾಮಾಂಜಿನಪ್ಪ, ಪುರಸಭೆ ಮಾಜಿ ಸದಸ್ಯರಾದ ತೆಂಗಿನಕಾಯಿ ರವಿ, ವಿಜಯ್ ಕುಮಾರ್, ಮೊಹಮ್ಮದ್ ಇಮ್ರಾನ್, ಗೊರ್ತಿನಾಗರಾಜ್, ಸಿಡಿಪಿಒ ಸುನಿತಾ, ಟಿಪಿಎಸ್ ಮಾಜಿ ಸದಸ್ಯ ಹನುಮಂತರಾಯಪ್ಪ, ಸಮಾಜ ಸೇವಕ ಗುಡಿಪಲ್ಲಿ ರಂಗಪ್ಪ, ಅಲ್ಪ ಸಂಖ್ಯಾತರ ಘಟಕದ ಮುಖಂಡರಾದ ಷಾಬಾಬು, ಭೂಸೇನಾ ನಿಗಮದ ಎಇ ಮಹದೇವಪ್ಪ, ಗುತ್ತಿಗೆದಾರ ಮಂಜುನಾಥ್,ಐಟಿ ಘಟಕದ ವಿ.ಎಚ್.ಪಾಳ್ಯದ ಪಾಪಣ್ಣ ಇತರೆ ಅನೇಕ ಮಂದಿ ಗಣ್ಯರು ಉಪಸ್ಥಿತರಿದ್ದರು.