ಮಲೆನಾಡು ಭಾಗದ ಅಭಿವೃದ್ಧಿಗೆ ಹೆಚ್ಚಿನ ಗಮನ

| Published : May 19 2025, 12:17 AM IST

ಸಾರಾಂಶ

ಮಲೆನಾಡು ಭಾಗಕ್ಕೆ ಹೆಚ್ಚಿನ ಅನುದಾನವನ್ನು ತರುವ ಮೂಲಕ ಸಂಪೂರ್ಣ ಅಭಿವೃದ್ಧಿಗೆ ತಾವು ಬದ್ಧ ಎಂದು ಶಾಸಕ ಎಚ್. ಕೆ ಸುರೇಶ್ ಹೇಳಿದರು. ಒಂದು ಕೋಟಿ ವೆಚ್ಚದ ರಸ್ತೆ ಮತ್ತು ಚರಂಡಿ ಡಾಂಬರೀಕರಣದ ಕಾಮಗಾರಿಗೆ ಗುದ್ದಲಿ ಪೂಜೆ ನಡೆಸಿ ಬಳಿಕ ಕಾಮಗಾರಿಗೆ ಗುದ್ದಲಿ ಪೂಜೆ ನಡೆಸಿ ಮಾತನಾಡಿದ ತಾಲೂಕಿನ ಮಲೆನಾಡು ಭಾಗಕ್ಕೆ ಈ ಹಿಂದಿನಿಂದಲೂ ಅಭಿವೃದ್ಧಿ ವಿಚಾರದಲ್ಲಿ ತಾರತಮ್ಯ ನಡೆಯುತ್ತಿದೆ, ಇದನ್ನು ಮನಗಂಡು ಶಾಸಕನಾದ ಬಳಿಕದಿಂದಲೂ ಮಲೆನಾಡಿನ ಹಳ್ಳಿಗಳಿಗೆ ಭೇಟಿ ನೀಡಿ ಕಾಮಗಾರಿಗಳು ಮತ್ತು ಇನ್ನಿತರ ಸಮಸ್ಯೆಗಳ ಪಟ್ಟಿ ಮಾಡಿ ಸರ್ಕಾರಕ್ಕೆ ಕೋಟ್ಯಂತರ ರು. ಅನುದಾನಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಸದ್ಯಕ್ಕೆ 13 ಕೋಟಿ ರು. ಅನುದಾನ ಬಿಡುಗಡೆಯಾಗಿದ್ದು ಶೀಘ್ರದಲ್ಲೇ ಶಂಕುಸ್ಥಾಪನೆ ನಡೆಸಲಾಗುವುದು ಎಂದರು.

ಕನ್ನಡಪ್ರಭ ವಾರ್ತೆ ಬೇಲೂರು

ತಾಲೂಕಿನ ಮಲೆನಾಡು ಭಾಗಕ್ಕೆ ಹೆಚ್ಚಿನ ಅನುದಾನವನ್ನು ತರುವ ಮೂಲಕ ಸಂಪೂರ್ಣ ಅಭಿವೃದ್ಧಿಗೆ ತಾವು ಬದ್ಧ ಎಂದು ಶಾಸಕ ಎಚ್. ಕೆ ಸುರೇಶ್ ಹೇಳಿದರು.

ತಾಲೂಕಿನ ಸಿದ್ಧರಹಳ್ಳಿ ಗ್ರಾಮದ ಕಾವೇರಿ ನಿಗಮದಿಂದ ನೀಡಿದ ಒಂದು ಕೋಟಿ ವೆಚ್ಚದ ರಸ್ತೆ ಮತ್ತು ಚರಂಡಿ ಡಾಂಬರೀಕರಣದ ಕಾಮಗಾರಿಗೆ ಗುದ್ದಲಿ ಪೂಜೆ ನಡೆಸಿ ಬಳಿಕ ಕಾಮಗಾರಿಗೆ ಗುದ್ದಲಿ ಪೂಜೆ ನಡೆಸಿ ಮಾತನಾಡಿದ ತಾಲೂಕಿನ ಮಲೆನಾಡು ಭಾಗಕ್ಕೆ ಈ ಹಿಂದಿನಿಂದಲೂ ಅಭಿವೃದ್ಧಿ ವಿಚಾರದಲ್ಲಿ ತಾರತಮ್ಯ ನಡೆಯುತ್ತಿದೆ, ಇದನ್ನು ಮನಗಂಡು ಶಾಸಕನಾದ ಬಳಿಕದಿಂದಲೂ ಮಲೆನಾಡಿನ ಹಳ್ಳಿಗಳಿಗೆ ಭೇಟಿ ನೀಡಿ ಕಾಮಗಾರಿಗಳು ಮತ್ತು ಇನ್ನಿತರ ಸಮಸ್ಯೆಗಳ ಪಟ್ಟಿ ಮಾಡಿ ಸರ್ಕಾರಕ್ಕೆ ಕೋಟ್ಯಂತರ ರು. ಅನುದಾನಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಸದ್ಯಕ್ಕೆ 13 ಕೋಟಿ ರು. ಅನುದಾನ ಬಿಡುಗಡೆಯಾಗಿದ್ದು ಶೀಘ್ರದಲ್ಲೇ ಶಂಕುಸ್ಥಾಪನೆ ನಡೆಸಲಾಗುವುದು ಎಂದರು.

ಕಾವೇರಿ ನಿಗಮದಿಂದ 1 ಕೋಟಿ ರು. ವೆಚ್ಚದ ಕಾಮಗಾರಿಯಲ್ಲಿ ಸಿಮೆಂಟ್ ಚರಂಡಿ ಹಾಗೂ ಡಾಂಬರೀಕರಣದ ರಸ್ತೆ ನಡೆಸಲು ಇಂದು ಶಂಕುಸ್ಥಾಪನೆ ‌ನಡೆಸಲಾಗಿದೆ. ಗುಣಮಟ್ಟದ ಕಾಮಗಾರಿಗೆ ಒತ್ತು ನೀಡುವುದು ನಮ್ಮ ಪ್ರಥಮ ಅದ್ಯತೆಯಾಗಿದೆ. ವಿಧಾನಸಭಾ ಕ್ಷೇತ್ರದಲ್ಲಿ ಈಗಾಗಲೇ 200 ಕೋಟಿಗೂ ಹೆಚ್ಚಿನ ಅನುದಾನದಲ್ಲಿ ಕ್ಷೇತ್ರದಲ್ಲಿ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದ್ದು, ಕೆಲವು ಪ್ರಗತಿಯಲ್ಲಿವೆ ಎಂದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಲಕ್ಷ್ಮಿ ಗ್ರಾಮಸ್ಥರಾದ ಸುರೇಶ್, ಹಾಲಪ್ಪ ಶೆಟ್ಟಿ, ಚಂದ್ರಶೇಖರ್ ಉಮೇಶ್, ರುಕ್ಮಿಣಿ, ವಿಕ್ರಂ ಕೌರಿ, ರಘು, ಕೋಮರಾಜ್, ಶಶಿ, ಕಾವೇರಿ ನಿಗಮದ ರಾಮಕೃಷ್ಣ, ಅಭಿವೃದ್ಧಿ ಅಧಿಕಾರಿ ಸರಸ್ವತಿ ಹಾಜರಿದ್ದರು.