ಸಾರಾಂಶ
ಮುಂದಿನ ದಿನಗಳಲ್ಲಿ ಕನ್ನಡ ಭಾಷೆಯು ಕನ್ನಡಿಗರ ಅಶೋತ್ತರಗಳ ಪ್ರತಿಬಿಂಬವಾಗಿ ರೂಪುಗೊಳ್ಳಬೇಕು. ಆಗ ಮಾತ್ರ ಕನ್ನಡ ರಾಜ್ಯೋತ್ಸವ ಆಚರಣೆಗೆ ಅರ್ಥ ಬರುತ್ತದೆ. ಇಲ್ಲದಿದ್ದರೆ ಕನ್ನಡ ನಾಡಿನಲ್ಲಿ ಅಲ್ಪಸಂಖ್ಯಾತರಾದರೂ ಅಚ್ಚರಿ ಇಲ್ಲ.
ಕನ್ನಡಪ್ರಭ ವಾರ್ತೆ ಮದ್ದೂರು
ಕನ್ನಡ ನಾಡಿನಲ್ಲಿ ಹುಟ್ಟಿದ ಪ್ರತಿಯೊಬ್ಬರೂ ನಮ್ಮ ನೆಲ, ಜಲ ಮತ್ತು ಭಾಷೆಯ ರಕ್ಷಣೆಗೆ ಹೆಚ್ಚಿನ ಆಸಕ್ತಿ ಹೊಂದಬೇಕು ಎಂದು ಶಾಸಕ ಕೆ.ಎಂ.ಉದಯ್ ಶುಕ್ರವಾರ ಹೇಳಿದರು.ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ಮತ್ತು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ನಡೆದ 69ನೇ ಕನ್ನಡ ರಾಜ್ಯೋತ್ಸವದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ಕನ್ನಡ ಭಾಷೆ ಕನ್ನಡಿಗರ ಅಶೋತ್ತರಗಳ ಭಾವನೆಗಳ ಪ್ರತಿಬಿಂಬವಾಗಿ ರೂಪು ಗೊಂಡರೆ ಮಾತ್ರ ರಾಜ್ಯೋತ್ಸವ ಆಚರಣೆ ಅರ್ಥಪೂರ್ಣವಾಗುತ್ತದೆ ಎಂದರು.
ಮುಂದಿನ ದಿನಗಳಲ್ಲಿ ಕನ್ನಡ ಭಾಷೆಯು ಕನ್ನಡಿಗರ ಅಶೋತ್ತರಗಳ ಪ್ರತಿಬಿಂಬವಾಗಿ ರೂಪುಗೊಳ್ಳಬೇಕು. ಆಗ ಮಾತ್ರ ಕನ್ನಡ ರಾಜ್ಯೋತ್ಸವ ಆಚರಣೆಗೆ ಅರ್ಥ ಬರುತ್ತದೆ. ಇಲ್ಲದಿದ್ದರೆ ಕನ್ನಡ ನಾಡಿನಲ್ಲಿ ಅಲ್ಪಸಂಖ್ಯಾತರಾದರೂ ಅಚ್ಚರಿ ಇಲ್ಲ ಎಂದರು.ಧ್ವಜಾರೋಹಣ ನೆರವೇರಿಸಿದ ತಹಸೀಲ್ದಾರ್ ಡಾ.ಸ್ಮಿತಾ ರಾಮು ಮಾತನಾಡಿ, ಡಿಸೆಂಬರ್‌ನಲ್ಲಿ ಮಂಡ್ಯದಲ್ಲಿ ನಡೆಯುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅರ್ಥಪೂರ್ಣವಾಗಿ ನಡೆಯಲು ಜಿಲ್ಲೆಯ ಜನರು ಸಹಕಾರ ನೀಡಬೇಕು. ಪ್ರತಿ ಮನೆ, ಕಾರ್ಖಾನೆಗ ಳಲ್ಲಿ ಕನ್ನಡ ಬಾವುಟ ರಾರಾಜಿಸಬೇಕು ಮನವಿ ಮಾಡಿದರು.
ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿರುವ ಸಾಧಕರನ್ನು ಅಭಿನಂದಿಸಲಾಯಿತು. ಪುರಸಭಾಧ್ಯಕ್ಷೆ ಕೋಕಿಲ ಅರುಣ್, ಟಿ.ಆರ್.ಪ್ರಸನ್ನ ಕುಮಾರ್, ಸ್ಥಾಯಿ ಸಮಿತಿ ಅಧ್ಯಕ್ಷ ಪಿ.ಸಿದ್ದರಾಜು, ತಾಪಂ ಇಒ ರಾಮಲಿಂಗಯ್ಯ, ಬಿಇಒ ಶಿಕ್ಷಣಾಧಿಕಾರಿ ಸಿ.ಎಚ್.ಕಾಳೀರಯ್ಯ, ಪುರಸಭೆ ಮುಖ್ಯ ಅಧಿಕಾರಿ ಮೀನಾಕ್ಷಿ, ಸದಸ್ಯರಾದ ವಿನುತಾ, ಸರ್ವ ಮಂಗಳ, ರತ್ನಮ್ಮ, ಬಸವರಾಜು, ಜಿಪಂ ಮಾಜಿ ಅಧ್ಯಕ್ಷ ಸುರೇಶ್ ಕಂಠಿ, ರಂಗಭೂಮಿ ಕಲಾವಿದರ ಸಂಘದ ಅಧ್ಯಕ್ಷ, ಮಹದೇವು ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಮುಖಂಡರು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಪಾಲ್ಗೊಂಡಿದ್ದರು.ವೇದಿಕೆ ಕಾರ್ಯಕ್ರಮಕ್ಕೆ ಮುನ್ನ ಪಟ್ಟಣದ ಶ್ರೀ ನರಸಿಂಹ ಸ್ವಾಮಿ ದೇಗುಲದ ಬಳಿಯಿಂದ ದೇವಿ ಶ್ರೀ ಭುವನೇಶ್ವರಿ ದೇವಿ,ಮೆರವಣಿಗೆ ಯೊಂದಿಗೆ ಶಾಲಾ ಮಕ್ಕಳು ಆಕರ್ಷಕ ಪಧಸಂಚಲನ ದೊಂದಿಗೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು.