ಸಾರಾಂಶ
ಕನ್ನಡ ಪ್ರಭ ವಾರ್ತೆ ಮುಧೋಳ
ತಾಲೂಕಿನ ಜನರ ಬಹಳ ವರ್ಷಗಳ ಬೇಡಿಕೆಯಾಗಿದ್ದ ಸಾರ್ವಜನಿಕ ಆಸ್ಪತ್ರೆಯನ್ನು 100 ಹಾಸಿಗೆಗೆ ಮೇಲ್ದರ್ಜೆಗೇರಿಸುವುದಕ್ಕೆ (ತಾಯಿ-ಮಗು ಆಸ್ಪತ್ರೆ) ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟದ ಸಭೆಯಲ್ಲಿ ₹19 ಕೋಟಿ ಅನುದಾನಕ್ಕೆ ಆಡಳಿತಾತ್ಮಕ ಅನುಮೋದನೆ ದೊರೆತಿದೆ.ನಗರದ ಕೆಇಎಂ ಆಸ್ಪತ್ರೆಯಲ್ಲಿ ತಿಂಗಳಿಗೆ ನೂರಾರು ಗರ್ಭಿಣಿಯರಿಗೆ ಹೆರಿಗೆ ಹಾಗೂ ಶಸ್ತ್ರ ಚಿಕಿತ್ಸೆ ನೀಡಲಾಗುತ್ತಿದೆ. ನಗರ ಹಾಗೂ ತಾಲೂಕಿನ 72 ಹಳ್ಳಿಗಳಿಗೆ ಅನುಕೂಲ ಕಲ್ಪಿಸಲು ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪೂರ ಅವರು ತಾಯಿ ಹಾಗೂ ಮಗುವಿನ ಆಸ್ಪತ್ರೆ ನಿರ್ಮಾಣಕ್ಕೆ ಮುಂದಾಗಿದ್ದು, ಈ ವಿಷಯವನ್ನು ಆರೋಗ್ಯ ಸಚಿವ ದಿನೇಶ ಗುಂಡೂರಾವ್ ಮತ್ತು ಸಿಎಂ ಸಿದ್ದರಾಮಯ್ಯನವರ ಗಮನಕ್ಕೆ ತಂದಿದ್ದರು. ಅವರ ಆಶಯದಂತೆ ಈಗ ಮಂಜೂರಾತಿ ದೊರೆತಿದೆ. ಶೀಘ್ರವೇ ಟೆಂಡರ್ ಕರೆದು ಭೂಮಿಪೂಜೆ ನೆರವೇರಿಸಲಾಗುವುದು ಎಂದು ಸಚಿವ ಆರ್.ಬಿ. ತಿಮ್ಮಾಪೂರ ತಿಳಿಸಿದ್ದಾರೆ. ಮುಧೋಳ ಸಾರ್ವಜನಿಕ ಆಸ್ಪತ್ರೆಗೆ ಹೆಚ್ಚಿನ ಸೌಲಭ್ಯ, ಸ್ತ್ರೀ ರೋಗ ತಜ್ಞರನ್ನು ಹಾಗೂ ಸಿಬ್ಬಂದಿ ನಿಯೋಜನೆ ಮಾಡುವ ಬಗ್ಗೆ ಆರೋಗ್ಯ ಸಚಿವರ ಗಮನಕ್ಕೆ ತಂದಿದ್ದೇನೆ. ಇದಕ್ಕೆ ಸಾಕಾರಾತ್ಮಕವಾಗಿ ಸ್ಪಂದಿಸುವದಾಗಿ ಹೇಳಿದ್ದಾರೆ ಸಚಿವರು ತಿಳಿಸಿದ್ದಾರೆ ಎಂದು ಹೇಳಿದ್ದಾರೆ. ಕೋಟ್-
ಬಡ ವರ್ಗದ ಗರ್ಭಿಣಿ ಮಹಿಳೆಯರಿಗೆ ಶೀಘ್ರ ಚಿಕಿತ್ಸೆ ದೊರೆಯಲೆಂದು ತಾಯಿ-ಮಗು ಆಸ್ಪತ್ರೆಗೆ ಮಂಜೂರಾತಿ ಪಡೆಯಲಾಗಿದೆ. ಇದಕ್ಕೆ ಅನುಮೋದನೆ ನೀಡಿದ ಮುಖ್ಯಮಂತ್ರಿ ಹಾಗೂ ಆರೋಗ್ಯ ಸಚಿವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಶೀಘ್ರವೇ ಟೆಂಡರ್ ಕರೆದು ಭೂಮಿಪೂಜೆ ನೆರವೇರಿಸಲಾಗುವುದು.ಆರ್.ಬಿ. ತಿಮ್ಮಾಪೂರ ಜಿಲ್ಲಾ ಉಸ್ತುವಾರಿ ಸಚಿವಮುಖ್ಯಾಂಶಗಳು
-19 ಕೋಟಿ ಅನುದಾನಕ್ಕೆ ಆಡಲಿತಾತ್ಮಕ ಅನುಮೋದನೆ-100 ಹಾಸಿಗಗಳಿಗೆ ಮೇಲ್ದರ್ಜೆಗೇರಲಿ ಸಾರ್ವನಿಕ ಆಸ್ಪತ್ರೆ
-ತಾಯಿ-ಮಗು ಆಸ್ಪತ್ರೆ ಎಂದು ನಾಮಕರಣ-ಶೀಘ್ರದಲ್ಲೇ ಕಾಮಗಾರಿ ಭೂಮಿಪೂಜೆ