ಸಾರಾಂಶ
ಮೂರನೇ ಬಾರಿಗೆ ಇಂಗ್ಲೆಂಡ್‌ನ ಪ್ರತಿಷ್ಠಿತ ಗ್ರೀನ್ ಆಸ್ಕರ್ ಪ್ರಶಸ್ತಿಗೆ ಭಾಜನವಾಗಿರುವ ಭಾರತದ ಸೆಲ್ಕೋ ಸೋಲಾರ್ ಸಂಸ್ಥೆಯ ಸಾಧನೆಯನ್ನು ಕೇಂದ್ರ ಗ್ರಾಹಕರ ವ್ಯವಹಾರಗಳು, ಆಹಾರ ಮತ್ತು ನಾಗರಿಕ ಸರಬರಾಜು, ನವೀನ ಮತ್ತು ನವೀಕರಿಸಬಹುದಾದ ಇಂಧನ ಖಾತೆ ಸಚಿವ ಪ್ರಲ್ಹಾದ್ ಜೋಶಿ ಅವರು ಶ್ಲಾಘಿಸಿ ಅಭಿನಂದಿಸಿದ್ದಾರೆ.
ಕನ್ನಡಪ್ರಭ ವಾರ್ತೆ ಬೆಂಗಳೂರು
ಮೂರನೇ ಬಾರಿಗೆ ಇಂಗ್ಲೆಂಡ್‌ನ ಪ್ರತಿಷ್ಠಿತ ಗ್ರೀನ್ ಆಸ್ಕರ್ ಪ್ರಶಸ್ತಿಗೆ ಭಾಜನವಾಗಿರುವ ಭಾರತದ ಸೆಲ್ಕೋ ಸೋಲಾರ್ ಸಂಸ್ಥೆಯ ಸಾಧನೆಯನ್ನು ಕೇಂದ್ರ ಗ್ರಾಹಕರ ವ್ಯವಹಾರಗಳು, ಆಹಾರ ಮತ್ತು ನಾಗರಿಕ ಸರಬರಾಜು, ನವೀನ ಮತ್ತು ನವೀಕರಿಸಬಹುದಾದ ಇಂಧನ ಖಾತೆ ಸಚಿವ ಪ್ರಲ್ಹಾದ್ ಜೋಶಿ ಅವರು ಶ್ಲಾಘಿಸಿ ಅಭಿನಂದಿಸಿದ್ದಾರೆ.ದೆಹಲಿಯಲ್ಲಿನ ತಮ್ಮ ಕಚೇರಿಯಲ್ಲಿ ಸೆಲ್ಕೋ ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮೋಹನ್ ಭಾಸ್ಕರ್ ಹೆಗಡೆ ಹಾಗೂ ಡಿಜಿಎಂ ಗುರುಪ್ರಕಾಶ್ ಶೆಟ್ಟಿ ಅವರನ್ನು ಅಭಿನಂದಿಸಿ ಮಾತನಾಡಿದ ಸಚಿವರು, ವಿಕೇಂದ್ರೀಕೃತ ಸೌರ ವಿದ್ಯುತ್ ಬಳಕೆಯಿಂದ ಬಡತನ ನಿವಾರಿಸುವಲ್ಲಿ ಸೆಲ್ಕೋ ಸಂಸ್ಥೆಯ ನಿಲುವು ಹಾಗೂ ಕಳೆದ 3 ದಶಕಗಳಲ್ಲಿ ಸೆಲ್ಕೋ ಸಂಸ್ಥೆ ಸಾಗುತ್ತಿರುವ ರೀತಿ ಶ್ಲಾಘನೀಯ ಎಂದರು.
ಈ ವೇಳೆ ಮಾತನಾಡಿದ ಮೋಹನ್ ಹೆಗಡೆ, ಜೀವನಾಧಾರ ಉತ್ಪನ್ನಗಳು ಕೌಶಲ್ಯಾಧಾರಿತವಾಗಿ ಸೌರ ವಿದ್ಯುತ್ತಿನಿಂದ ಅಥವಾ ಪರ್ಯಾಯ ಇಂಧನ ಶಕ್ತಿಯಿಂದ ನಡೆಯುವಂತಾದರೆ ವಿದ್ಯುತ್ ಉಳಿತಾಯವಾಗುತ್ತದೆ. ಸ್ವಾವಲಂಬಿ ಬದುಕಿನ ಜೊತೆಗೆ ಉದ್ಯೋಗಗಳನ್ನು ಸೃಷ್ಟಿಸಲು ಸಾಧ್ಯ ಎಂದು ಹೇಳಿದರು.