ಇಲ್ಲಿನ ಬೈರಂಪಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮಸ್ಥರ ಅಹವಾಲು ಸ್ವೀಕಾರ, ಜನಸಂಪರ್ಕ ಸಭೆ ಹಾಗೂ ವಿವಿಧ ಸವಲತ್ತುಗಳ ವಿತರಣಾ ಕಾರ್ಯಕ್ರಮ ಸೋಮವಾರ ಬೈರಂಪಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅಧ್ಯಕ್ಷತೆಯಲ್ಲಿ ನಡೆಯಿತು.

ಕಾಪು: ಇಲ್ಲಿನ ಬೈರಂಪಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮಸ್ಥರ ಅಹವಾಲು ಸ್ವೀಕಾರ, ಜನಸಂಪರ್ಕ ಸಭೆ ಹಾಗೂ ವಿವಿಧ ಸವಲತ್ತುಗಳ ವಿತರಣಾ ಕಾರ್ಯಕ್ರಮ ಸೋಮವಾರ ಬೈರಂಪಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅಧ್ಯಕ್ಷತೆಯಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಅರ್ಹ 12 ಫಲಾನುಭವಿಗಳಿಗೆ ಮಂಜೂರಾದ ಸುಕನ್ಯ ಸಮೃದ್ಧಿ ಬಾಂಡ್ ಹಾಗೂ ಗ್ರಾಪಂನ ಶೇ 25 ರ ಅನುದಾನದಲ್ಲಿ ವಿವಿಧ ಫಲಾನುಭವಿಗಳಿಗೆ ವೈದ್ಯಕೀಯ, ಶಿಕ್ಷಣ, ಕ್ರೀಡೆ, ಶವ ಸಂಸ್ಕಾರಕ್ಕೆ ಚೆಕ್‌ಗಳನ್ನು ವಿತರಣೆ ಮಾಡಲಾಯಿತು.

ಶಾಸಕರ ಶಿಫಾರಸ್ಸಿನ ಮೇರೆಗೆ ವಿವಿಧ ರಸ್ತೆಗಳ ಅಭಿವೃದ್ಧಿಗೆ 30 ಲಕ್ಷ ಅನುದಾನ ಮಂಜೂರಾಗಿದ್ದು ಇದರ ಗುದ್ದಲಿ ಪೂಜೆಯನ್ನು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ನೆರವೇರಿಸಿದರು.

ಈ ಸಂದರ್ಭ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ, ಉಡುಪಿ ತಹಸೀಲ್ದಾರರಾದ ಗುರುರಾಜ್, ಉಡುಪಿ ತಾಪಂ ಕಾರ್ಯನಿರ್ವಹಣಾಧಿಕಾರಿ ವಿಜಯ, ಪಂಚಾಯತ್ ಆಡಳಿತಾಧಿಕಾರಿ ಸೋಮನಾಥ್, ಪಂಚಾಯತ್‌ ಅಭಿವೃದ್ಧಿ ಅಧಿಕಾರಿ ಶ್ರೀನಿವಾಸ ವಿರೂಪಾಕ್ಷ ಕುಲಕರ್ಣಿ ಹಾಗೂ ಬೈರಂಪಳ್ಳಿ ಗ್ರಾಮ ಪಂಚಾಯತ್ ಮಾಜಿ ಸದಸ್ಯರು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.