ಗೃಹಲಕ್ಷ್ಮಿ ಯೋಜನೆ ಜುಲೈ ಕಂತಿನ ಹಣ ಬಿಡುಗಡೆ ಪ್ರಕ್ರಿಯೆ ನಡೆಯುತ್ತಿದ್ದು ಯೋಜನೆ ರದ್ದಾಗಲ್ಲ: ಸಚಿವೆ ಹೆಬ್ಬಾಳಕರ

| Published : Sep 29 2024, 01:49 AM IST / Updated: Sep 29 2024, 12:29 PM IST

Lakshmi Hebbalkar
ಗೃಹಲಕ್ಷ್ಮಿ ಯೋಜನೆ ಜುಲೈ ಕಂತಿನ ಹಣ ಬಿಡುಗಡೆ ಪ್ರಕ್ರಿಯೆ ನಡೆಯುತ್ತಿದ್ದು ಯೋಜನೆ ರದ್ದಾಗಲ್ಲ: ಸಚಿವೆ ಹೆಬ್ಬಾಳಕರ
Share this Article
  • FB
  • TW
  • Linkdin
  • Email

ಸಾರಾಂಶ

ಗೃಹಲಕ್ಷ್ಮಿ ಯೋಜನೆಯ ಜುಲೈ ಕಂತಿನ ಹಣ ಬಿಡುಗಡೆ ಪ್ರಕ್ರಿಯೆ ನಡೆಯುತ್ತಿದ್ದು, ಇದಾದ ಕೆಲ ದಿನಗಳಲ್ಲೇ ಆಗಸ್ಟ್ ತಿಂಗಳ ಹಣವೂ ಬಿಡುಗಡೆಯಾಗಲಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ ಹೇಳಿದರು.

 ಬೆಳಗಾವಿ :  ಗೃಹಲಕ್ಷ್ಮಿ ಯೋಜನೆಯ ಜುಲೈ ಕಂತಿನ ಹಣ ಬಿಡುಗಡೆ ಪ್ರಕ್ರಿಯೆ ನಡೆಯುತ್ತಿದ್ದು, ಇದಾದ ಕೆಲ ದಿನಗಳಲ್ಲೇ ಆಗಸ್ಟ್ ತಿಂಗಳ ಹಣವೂ ಬಿಡುಗಡೆಯಾಗಲಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ ಹೇಳಿದರು.

ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದು ನಿರಂತರ ಪ್ರಕ್ರಿಯೆ. ಸರ್ಕಾರ ಯಾವುದೇ ಕಾರಣಕ್ಕೂ ಪಂಚ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಮಾತೇ ಇಲ್ಲ ಎಂದು ಸ್ಪಷ್ಟಪಡಿಸಿದರು.

ಪಂಚಮಸಾಲಿ ಸಮುದಾಯಕ್ಕೆ ಮಾಜಿ ಸಚಿವ ಮುರುಗೇಶ ನಿರಾಣಿ ಅವರ ಕೊಡುಗೆ ಏನು ಎಂದು ಪ್ರಶ್ನಿಸಿದ ಅವರು, ಪಂಚಮಸಾಲಿ ಮೀಸಲಾತಿ, 2ಎ ಮೀಸಲಾತಿಗಾಗಿ ನಡೆಯುತ್ತಿರುವ ಹೋರಾಟಕ್ಕೆ ಸದಾ ನನ್ನ ಬೆಂಬಲ ಇರಲಿದೆ ಎಂದರು.

ಮುರುಗೇಶ ನಿರಾಣಿ ಅವರು ಅಧಿಕಾರದಲ್ಲಿದ್ದಾಗ ಸಮುದಾಯದ ಬಗ್ಗೆ ಯೋಚಿಸಲಿಲ್ಲ. ಈಗ ಸುಖಾಸುಮ್ಮನೆ ನನ್ನ ಮೇಲೆ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ. ಬೇರೆ ಸಮಾಜಕ್ಕೆ ಯಾವುದೇ ತೊಂದರೆಯಾಗದಂತೆ ಮೀಸಲಾತಿ ನೀಡಲಿ ಎಂಬುದೇ ನಮ್ಮ ಆಗ್ರಹವಾಗಿದೆ ಎಂದು ತಿಳಿಸಿದರು.

ಬೆಳಗಾವಿ ಜಿಲ್ಲೆಯನ್ನು ಮೂರು ವಿಭಾಗಗಳನ್ನಾಗಿ ಮಾಡಬಹುದು. ಜಿಲ್ಲೆ ವಿಭಜನೆಗೊಂಡರೆ ಅಭಿವೃದ್ಧಿಗೆ ಮತ್ತಷ್ಟು ಒತ್ತು ನೀಡಬಹುದು. ದಸರಾ ಮುಕ್ತಾಯಗೊಂಡ ಬಳಿಕ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಸಭೆ ನಡೆಸಲಾಗುವುದು ಎಂದವರು ಹೇಳಿದರು.