ಉಗ್ರಾಣ ಕಟ್ಟಡ ನಿರ್ಮಾಣ ಕಾಮಗಾರಿಗೆ ಗುದ್ದಲಿ ಪೂಜೆ

| Published : Aug 30 2025, 01:00 AM IST

ಸಾರಾಂಶ

ತಾಲೂಕಿನ ಮಲ್ಲಯ್ಯನಪುರ ಗ್ರಾಮದ ಹೊರವಲಯದಲ್ಲಿ ರಾಷ್ಟ್ರೀಯ ಆರೋಗ್ಯ ಮಿಷನ್ ಯೋಜನೆ ಅನುದಾನದ ಅಂದಾಜು 77 ಲಕ್ಷ ರು.ವೆಚ್ಚದಲ್ಲಿ ನೂತನ ಲಸಿಕಾ ಉಗ್ರಾಣ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಾಸಕ ಸಿ.ಪುಟ್ಟರಂಗಶೆಟ್ಟಿ ಗುದ್ದಲಿ ಪೂಜೆ ನೆರವೇರಿಸಿದರು.

ಚಾಮರಾಜನಗರ: ತಾಲೂಕಿನ ಮಲ್ಲಯ್ಯನಪುರ ಗ್ರಾಮದ ಹೊರವಲಯದಲ್ಲಿ ರಾಷ್ಟ್ರೀಯ ಆರೋಗ್ಯ ಮಿಷನ್ ಯೋಜನೆ ಅನುದಾನದ ಅಂದಾಜು 77 ಲಕ್ಷ ರು.ವೆಚ್ಚದಲ್ಲಿ ನೂತನ ಲಸಿಕಾ ಉಗ್ರಾಣ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಾಸಕ ಸಿ.ಪುಟ್ಟರಂಗಶೆಟ್ಟಿ ಗುದ್ದಲಿ ಪೂಜೆ ನೆರವೇರಿಸಿದರು.

ನಂತರ ಮಾತನಾಡಿದ ಅವರು, ಮನುಷ್ಯನಿಗೆ ಶಿಕ್ಷಣ ಎಷ್ಟು ಮುಖ್ಯವೋ, ಹಾಗೇ ಆರೋಗ್ಯವು ಮುಖ್ಯ, ಆರೋಗ್ಯ ಸುಸ್ಥಿರವಾಗಿಡುವ ನಿಟ್ಟಿನಲ್ಲಿ ಲಸಿಕಾ ಸಾಮಾಗ್ರಿಗಳ ಸುರಕ್ಷತೆ ಅತ್ಯಂತ ಅಗತ್ಯವಾಗಿದೆ. ಅದಕ್ಕಾಗಿ ಉಗ್ರಾಣ ಕಟ್ಟಡ ನಿರ್ಮಿಸಲಾಗುತ್ತಿದೆ ಎಂದರು.

ಗುತ್ತಿಗೆದಾರರು ಗುಣಮಟ್ಟದ ಕಾಮಗಾರಿಗೆ ಒತ್ತು ನೀಡುವ ಮೂಲಕ ನಿಗದಿತ ಅವಧಿಯೊಳಗೆ ಕಾಮಗಾರಿ ಮುಗಿಸಿ, ಆರೋಗ್ಯ ಇಲಾಖೆ ಕಾರ್ಯಕ್ಕೆ ಅನುಕೂಲ ಮಾಡಿಕೊಡಬೇಕು ಎಂದು ಸೂಚಿಸಿದರು.

ಈ ಸಂದರ್ಭದಲ್ಲಿ ಶಿವಪುರ ಗ್ರಾಪಂ ಅಧ್ಯಕ್ಷೆ ಎಂ.ಸಿ.ಮಹದೇವಮ್ಮ, ಚುಡಾಅಧ್ಯಕ್ಷ ಮಹಮದ್ ಅಸ್ಗರ್, ನಗರಸಭೆ ಸದಸ್ಯರಾದ ಕಲೀಲ್ ಉಲ್ಲಾ, ಮಹಮದ್ ಅಮಿಕ್, ಮಾಜಿಅಧ್ಯಕ್ಷ ಸಯ್ಯದ್ ರಫೀ, ssಸದಸ್ಯ ಹತಿಕ್ ಅಹಮದ್, ಜಿಪಂ ಸಿಇಒ ಮೋನಾರೋತ್, ಡಿಎಚ್‌ಒ ಡಾ. ಎಸ್.ಚಿದಂಬರ, ಗುತ್ತಿಗೆದಾರ ಕೆ.ಸಿ.ಶಿವಕುಮಾರಸ್ವಾಮಿ ಇತರರು ಹಾಜರಿದ್ದರು.