ಸಾರಾಂಶ
ಕನ್ನಡಪ್ರಭ ವಾರ್ತೆ ನಾಪೋಕ್ಲು
ಇಲ್ಲಿನ ಕೊಡವ ಸಮಾಜ ರಸ್ತೆಯ ಅಭಿವೃದ್ಧಿಗೆ ವಿರಾಜಪೇಟೆ ಶಾಸಕ ಅಜ್ಜಿಕುಟ್ಟೀರ ಎಸ್.ಪೊನ್ನಣ್ಣ ಭೂಮಿಪೂಜೆ ನೆರವೇರಿಸಿದರು.ಅತ್ಯಂತ ಜನಸಂಚಾರ ಹಾಗೂ ವಾಹನ ದಟ್ಟಣೆ ಇರುವ ಈ ರಸ್ತೆ ಹದಗೆಟ್ಟಿರುವುದನ್ನು ಮನಗಂಡು 20 ಲಕ್ಷ ರು. ಅನುದಾನ ನೀಡಿದ್ದು, ಅತ್ಯಂತ ಶೀಘ್ರದಲ್ಲಿ ಗುಣಮಟ್ಟ ಕಾಯ್ದುಕೊಂಡು ಈ ರಸ್ತೆ ನಿರ್ಮಾಣವಾಗಲಿದೆ ಎಂದು ಶಾಸಕರು ತಿಳಿಸಿದ್ದಾರೆ.
ನಾಪೋಕ್ಲು ಗ್ರಾಮ ಪಂಚಾಯಿತಿಗೆ ಮಲ ತ್ಯಾಜ್ಯ ನಿರ್ವಹಣಾ ಸಂಚಾರಿ ಘಟಕವನ್ನು ನೀಡಲಾಗಿದ್ದು, ಗ್ರಾಮ ಪಂಚಾಯಿತಿ ಅಧ್ಯಕ್ಷೆ ವನಜಾಕ್ಷಿ ರೇಣುಕೇಶ್‌ಗೆ ವಾಹನದ ಕೀಯನ್ನು ಶಾಸಕರು ಹಸ್ತಾಂತರ ಮಾಡಿದರು.ಗ್ರಾಮ ಪಂಚಾಯಿತಿ ಅಧ್ಯಕ್ಷೆ ವನಜಾಕ್ಷಿ ರೇಣುಕೇಶ್, ಸದಸ್ಯರಾದ ಮಾಚೇಟಿರ ಕುಸು ಕುಶಾಲಪ್ಪ, ಅರುಣ್ ಬೇಬ, ಹೇಮಾವತಿ ಅರುಣ್, ಪ್ರತೀಪ ಬಿ.ಎಂ., ಅಹಮ್ಮದ್ ಟಿ.ಎ., ಸಾಬಾ ತಿಮ್ಮಯ್ಯ, ಇಸ್ಮಾಯಿಲ್ ಕೆ.ಎ., ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಚೊಂದಕ್ಕಿ, ಸಿಬ್ಬಂದಿ, ಕೊಡವ ಸಮಾಜ ಅಧ್ಯಕ್ಷ ಮುಂಡಂಡ ಸಿ.ನಾಣಯ್ಯ ಹಾಗೂ ನಿರ್ದೇಶಕರು, ಮಹಿಳಾ ಪರಿಷತ್ ಅಧ್ಯಕ್ಷ ನಿಶಾ ಮೇದಪ್ಪ ಹಾಗೂ ನಿರ್ದೇಶಕರು, ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘ ಅಧ್ಯಕ್ಷ ಬಿದ್ದಾಟಂಡ ತಮ್ಮಯ್ಯ, ಮೇರಿ ಚಿಟ್ಟಿಯಪ್ಪ, ಸದಸ್ಯರು, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಧರ್ಮದ ಉತ್ತಪ್ಪ, ಬಾಚಮಂಡ ಲವ ಚಿನ್ನಪ್ಪ, ನಾಪೋಕ್ಲು ಯೂಥ್ ಕಾಂಗ್ರೆಸ್ ಅಧ್ಯಕ್ಷ ಸಿರಾಜ್, ಚರ್ಮದಂಡ ಸೋಮಣ್ಣ, ಸಮಿತಿ ಸದಸ್ಯರು, ಸಂಪನ್ ಅಯ್ಯಪ್ಪ, ಎಂ.ಎಚ್. ಅಬ್ದುಲ್ ರೆಹಮಾನ್, ಮಹಮ್ಮದ್ ಹಾಜಿ ಕುಂಜಿಲ, ಕೇಲೇಟಿರ ದೀಪು, ಎಂ.ಎ. ಮನ್ಸೂರ್ ಅಲಿ, ಅಝೀಜ್, ಲತೀಫ್, ಕಾಂಗ್ರೆಸ್ ಪ್ರಮುಖರು, ಕಾರ್ಯಕರ್ತರು ಪಾಲ್ಗೊಂಡಿದ್ದರು.