ಸಾರಾಂಶ
ಕೆರೆಗಳನ್ನು ಒತ್ತುವರಿ ಮಾಡುವುದು, ಮುಚ್ಚುವುದು ಅಭಿವೃದ್ಧಿ ಮತ್ತು ಅನ್ಯ ಕಾಮಗಾರಿಗಳಿಗೆ ಕೆರೆ ಜಾಗವನ್ನು ಆಕ್ರಮಿಸಿ ಕಟ್ಟಡ ನಿರ್ಮಾಣ ಮಾಡುವುದರಿಂದ ನಮ್ಮ ಮುಂದಿನ ಪೀಳಿಗೆ ಸಾಕಷ್ಟು ಸಮಸ್ಯೆ ಎದುರಿಸಬೇಕಾಗುತ್ತದೆ. ನೀರು ಅತ್ಯಮೂಲ್ಯವಾಗಿದ್ದು, ಕೆರೆ ಕಟ್ಟೆಗಳ ಸಂರಕ್ಷಣೆ ಮೂಲಕ ಅದನ್ನು ಉಳಿಸಿಕೊಳ್ಳಬೇಕಿದೆ.
ಕನ್ನಡಪ್ರಭ ವಾರ್ತೆ ಪಾಂಡವಪುರ
ಕೆರೆ-ಕಟ್ಟೆಗಳು ಉಳಿದರೆ ಅಂತರ್ಜಲ ಹೆಚ್ಚುವ ಜತೆಗೆ ಜಾನುವಾರಗಳಿಗೆ ಕುಡಿಯುವ ನೀರಿಗೆ ಆಸರೆಯಾಗುತ್ತದೆ ಎಂದು ಶಾಸಕ ದರ್ಶನ್ ಪುಟ್ಟಣ್ಣಯ್ಯ ಹೇಳಿದರು.ತಾಲೂಕಿನ ಜಕ್ಕನಹಳ್ಳಿ ಸಮೀಪದ ನಾಗನಕಟ್ಟೆ ಕೆರೆಯನ್ನು ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ನಮ್ಮೂರು ನಮ್ಮ ಕೆರೆ ಯೋಜನೆಯಡಿ ಪುನಶ್ಚೇತನಗೊಳಿಸಿದ್ದ ಕೆರೆಗೆ ಬಾಗಿನ ಅರ್ಪಣೆ, ನಾಮಫಲಕ ಅನಾವರಣ ಹಾಗೂ ಹಸ್ತಾಂತರ ಕಾರ್ಯಕ್ರಮದಲ್ಲಿ ಮಾತನಾಡಿದರು.
ಕೆರೆಗಳನ್ನು ಒತ್ತುವರಿ ಮಾಡುವುದು, ಮುಚ್ಚುವುದು ಅಭಿವೃದ್ಧಿ ಮತ್ತು ಅನ್ಯ ಕಾಮಗಾರಿಗಳಿಗೆ ಕೆರೆ ಜಾಗವನ್ನು ಆಕ್ರಮಿಸಿ ಕಟ್ಟಡ ನಿರ್ಮಾಣ ಮಾಡುವುದರಿಂದ ನಮ್ಮ ಮುಂದಿನ ಪೀಳಿಗೆ ಸಾಕಷ್ಟು ಸಮಸ್ಯೆ ಎದುರಿಸಬೇಕಾಗುತ್ತದೆ. ನೀರು ಅತ್ಯಮೂಲ್ಯವಾಗಿದ್ದು, ಕೆರೆ ಕಟ್ಟೆಗಳ ಸಂರಕ್ಷಣೆ ಮೂಲಕ ಅದನ್ನು ಉಳಿಸಿಕೊಳ್ಳಬೇಕಿದೆ ಎಂದರು.ಕೆರೆಗಳನ್ನು ಉಳಿಸುವ ನಿಟ್ಟಿನಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ಸೇವೆ ಶ್ಲಾಘನೀಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಈ ವೇಳೆ ಸಂಸ್ಥೆ ಜಿಲ್ಲಾ ನಿರ್ದೇಶಕ ಎಚ್.ಎಲ್.ಮುರುಳೀಧರ್ ಕೆರೆಗೆ ಬಾಗಿನ ಅರ್ಪಿಸಿದರು. ಇದೇ ವೇಳೆ ಕೆರೆ ಸುತ್ತ ಗಿಡಗಳನ್ನು ನೆಡಲಾಯಿತು.
ಕಾರ್ಯಕ್ರದಮದಲ್ಲಿ ಜನಜಾಗೃತಿ ವೇದಿಕೆ ಜಿಲ್ಲಾ ಉಪಾಧ್ಯಕ್ಷ ಅಶ್ವಥ್ ಕುಮಾರೇಗೌಡ, ಕೆರೆ ಸಮಿತಿಯ ಜೆ.ಪಿ.ಶಿವಶಂಕರ್, ಚಂದ್ರಶೇಖರ್, ಸಂಸ್ಥೆ ಯೋಜನಾಧಿಕಾರಿ ಸರೋಜ, ಗ್ರಾಪಂ ಅಧ್ಯಕ್ಷೆ ಮಂಜುಳಾ, ಪಿಡಿಒ ಸುರೇಶ್ ಇತರರು ಇದ್ದರು.