ಪಟ್ಟಣದಲ್ಲಿ ಮುಖ್ಯಮಂತ್ರಿ ಸಮಗ್ರ ಅಭಿವೃದ್ಧಿ ಯೋಜನೆಯಡಿಯಲ್ಲಿ 65 ಲಕ್ಷ ವೆಚ್ಚದಲ್ಲಿ ಮುದೇನಗುಡಿ ರಸ್ತೆ, ಆಶ್ರಯ ಕಾಲನಿಯಲ್ಲಿ ಸಿಸಿ ರಸ್ತೆ ಹಾಗೂ ಮುಗಳಿ ರಸ್ತೆ 75.30 ಲಕ್ಷ ವೆಚ್ಚದಲ್ಲಿ ಸಿಸಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಲಾಯಿತು.

ಕನ್ನಡಪ್ರಭ ವಾರ್ತೆ ರೋಣ

ಪಟ್ಟಣದಲ್ಲಿ ಮುಖ್ಯಮಂತ್ರಿ ಸಮಗ್ರ ಅಭಿವೃದ್ಧಿ ಯೋಜನೆಯಡಿಯಲ್ಲಿ ₹65 ಲಕ್ಷ ವೆಚ್ಚದಲ್ಲಿ ಮುದೇನಗುಡಿ ರಸ್ತೆ, ಆಶ್ರಯ ಕಾಲನಿಯಲ್ಲಿ ಸಿಸಿ ರಸ್ತೆ ಹಾಗೂ ಮುಗಳಿ ರಸ್ತೆ ₹75.30 ಲಕ್ಷ ವೆಚ್ಚದಲ್ಲಿ ಸಿಸಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಲಾಯಿತು.

ಈ ವೇಳೆ ರೋಣ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ‌ ಸಮಿತಿ ಅಧ್ಯಕ್ಷ ಮಿಥುನ ಜಿ.ಪಾಟೀಲ ಮಾತನಾಡಿ, ಪಟ್ಟಣದ ಸಮಗ್ರ ಅಭಿವೃದ್ಧಿ ಹಾಗೂ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಶಾಸಕರು ಹಾಗೂ ವಿಧಾನಸಭಾ ಅಧ್ಯಕ್ಷರು ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ಶ್ರಮಿಸಿದ್ದಾರೆ. ರೋಣ ಮತಕ್ಷೇತ್ರದಲ್ಲಿ ಶೈಕ್ಷಣಿಕ, ಸಾಮಾಜಿಕ ಹಾಗೂ ಮೂಲಭೂತ ಸೌಲಭ್ಯಗಳನ್ನು ಅಭಿವೃದ್ಧಿಗಾಗಿ ಸರ್ಕಾರ ಅನುದಾನ ಬಿಡುಗಡೆಗೊಳಿಸಿದ್ದು ಮುಖ್ಯಮಂತ್ರಿ ಸಮಗ್ರ ಅಭಿವೃದ್ಧಿ ಯೋಜನೆಯಡಿಯಲ್ಲಿ ₹1 ಕೋಟಿ 40 ಲಕ್ಷ ಅನುದಾನ ದೊರೆತಿದ್ದು ಪಟ್ಟಣದಲ್ಲಿನ ಒಳರ ಸ್ತೆಗಳನ್ನು ಅಭಿವೃದ್ಧಿಪಡಿಸಿ ಸಮಗ್ರ ಪಟ್ಟಣದ ಅಭಿವೃದ್ಧಿಗಾಗಿ ಶ್ರಮಿಸಲಾಗುವುದು ಎಂದರು.

ಈಗಾಗಲೇ ಕಾಂಗ್ರೆಸ್ ಸರ್ಕಾರವು ಹತ್ತು ಹಲವು ಜನಪರ ಯೋಜನೆಗಳನ್ನು ಜಾರಿಗೆ ತಂದಿದ್ದು ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಸರ್ಕಾರದ ಯೋಜನೆಗಳನ್ನು ತಲುಪಿಸುವಲ್ಲಿ ಶ್ರಮಿಸಲಾಗುತ್ತಿದ್ದೆ. ಪಂಚಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುವ ಸಮಾಜದಲ್ಲಿನ ಜನರ ಆರ್ಥಿಕವಾಗಿ ಸಬಲೀಕರಣ ಮಾಡುವ ನಿಟ್ಟಿನಲ್ಲಿ ಹಲವು ಕ್ರಮ ಕೈಗೊಳ್ಳಲಾಗಿದೆ. ಮುಂದಿನ ದಿನಮಾನಗಳಲ್ಲಿ ಹಲವು ಯೋಜನೆಗಳ ಮೂಲಕ ಕರ್ನಾಟಕ ರಾಜ್ಯವನ್ನು ಮಾದರಿ ರಾಜ್ಯವನ್ನು ಮಾಡಲಾಗುವುದು ಎಂದರು.

ಈ ಸಂದರ್ಭ ಯೂಸಫ್ ಇಟಗಿ, ಪುರಸಭೆ ಮಾಜಿ ಅಧ್ಯಕ್ಷೆ ರಂಗವ್ವ ಭಜಂತ್ರಿ, ಬಾವಾಸಾಬ ಬೇಟಗೇರಿ, ಖಾದೀರಸಾಬ ಸಂಕನೂರ, ಸಂಗು ನವಲಗುಂದ, ಡಾ. ಎಂ.ಬಿ. ಇಟಗಿ, ಬಸವರಾಜ ಹೊಸಳ್ಳಿ, ಅಭಿಷೇಕ ನವಲಗುಂದ, ಪುರಸಭೆ ಮುಖ್ಯಾಧಿಕಾರಿ ರಮೇಶ ಹೊಸಮನಿ, ರಾಜು ಮಾಡಲಗೇರಿ ಮುಂತಾದವರು ಉಪಸ್ಥಿತರಿದ್ದರು.