ಬಡವರು ಹಾಗೂ ನಿರ್ಗತಿಕರ ಬದುಕಿಗೆ ಆಸರೆಯಾಗುವ ನಿಟ್ಟಿನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಅರೇಹಳ್ಳಿ ಹೋಬಳಿ ನಾರ್ವೆ ಗ್ರಾಪಂ ವ್ಯಾಪ್ತಿಯ ಸುಳಗಳಲೆ ಗ್ರಾಮದ ಮಹಾದೇವಮ್ಮ ಎಂಬುವವರಿಗೆ ವಾತ್ಸಲ್ಯ ಮನೆ ಮಂಜೂರು ಮಾಡಲಾಗಿದ್ದು, ಮನೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಲಾಯಿತು. ವಾಸಿಸುತ್ತಿದ್ದ ಮನೆ ಶಿಥಿಲಾವಸ್ಥೆಗೆ ತಲುಪಿದ್ದು, ಯಾವುದೇ ಸಂದರ್ಭದಲ್ಲಿ ಕುಸಿದು ಬೀಳುವ ಸ್ಥಿತಿಯಲ್ಲಿತ್ತು. ಇದರಿಂದಾಗಿ ಸುರಕ್ಷಿತ ವಾಸಸ್ಥಳವಿಲ್ಲದೆ ಸಂಕಷ್ಟದ ಜೀವನ ನಡೆಸುವಂತಾಗಿತ್ತು. ಮಹಾದೇವಮ್ಮ ಅವರ ಪರಿಸ್ಥಿತಿಯನ್ನು ಮನಗಂಡ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ವಾತ್ಸಲ್ಯ ಯೋಜನೆಯಡಿ ಮನೆ ನಿರ್ಮಿಸಿಕೊಡಲು ಮಂಜೂರಾತಿ ನೀಡಿದೆ.
ಕನ್ನಡಪ್ರಭ ವಾರ್ತೆ ಬೇಲೂರು
ಬಡವರು ಹಾಗೂ ನಿರ್ಗತಿಕರ ಬದುಕಿಗೆ ಆಸರೆಯಾಗುವ ನಿಟ್ಟಿನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಅರೇಹಳ್ಳಿ ಹೋಬಳಿ ನಾರ್ವೆ ಗ್ರಾಪಂ ವ್ಯಾಪ್ತಿಯ ಸುಳಗಳಲೆ ಗ್ರಾಮದ ಮಹಾದೇವಮ್ಮ ಎಂಬುವವರಿಗೆ ವಾತ್ಸಲ್ಯ ಮನೆ ಮಂಜೂರು ಮಾಡಲಾಗಿದ್ದು, ಮನೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಲಾಯಿತು.ನಿವಾಸಿ ಮಹಾದೇವಮ್ಮ ಅವರು ಪ್ರತಿ ತಿಂಗಳು ೧,೦೦೦ ರುಪಾಯಿ ಮಾಶಾಸನ ಪಡೆಯುತ್ತಾ ಜೀವನ ನಿರ್ವಹಣೆ ಮಾಡುತ್ತಿದ್ದಾರೆ. ಆದರೆ ಅವರು ವಾಸಿಸುತ್ತಿದ್ದ ಮನೆ ಶಿಥಿಲಾವಸ್ಥೆಗೆ ತಲುಪಿದ್ದು, ಯಾವುದೇ ಸಂದರ್ಭದಲ್ಲಿ ಕುಸಿದು ಬೀಳುವ ಸ್ಥಿತಿಯಲ್ಲಿತ್ತು. ಇದರಿಂದಾಗಿ ಸುರಕ್ಷಿತ ವಾಸಸ್ಥಳವಿಲ್ಲದೆ ಸಂಕಷ್ಟದ ಜೀವನ ನಡೆಸುವಂತಾಗಿತ್ತು. ಮಹಾದೇವಮ್ಮ ಅವರ ಪರಿಸ್ಥಿತಿಯನ್ನು ಮನಗಂಡ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ವಾತ್ಸಲ್ಯ ಯೋಜನೆಯಡಿ ಮನೆ ನಿರ್ಮಿಸಿಕೊಡಲು ಮಂಜೂರಾತಿ ನೀಡಿದೆ. ಇದರ ಅಂಗವಾಗಿ ಆಯೋಜಿಸಿದ್ದ ಭೂಮಿಪೂಜೆ ಕಾರ್ಯಕ್ರಮದಲ್ಲಿ ಒಕ್ಕೂಟದ ಅಧ್ಯಕ್ಷ ಚಂದ್ರಯ್ಯ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ಮಾಲಾಶ್ರೀ, ಜಿಲ್ಲಾ ನಿರ್ದೇಶಕ ಮಹಾಬಲ ಕುಲಾಲ್, ತಾಲೂಕು ಯೋಜನಾಧಿಕಾರಿ ಮಂಜುಳಾ ಟಿ.ಆರ್., ವಲಯ ಮೇಲ್ವಿಚಾರಕ ಲೀಲಾವತಿ, ಜ್ಞಾನವಿಕಾಸ ಸಮನ್ವಯಾಧಿಕಾರಿ ಸುಷ್ಮಾ, ಫಲಾನುಭವಿ ಮಹಾದೇವಮ್ಮ ಸೇರಿದಂತೆ ಗ್ರಾಮದ ಸದಸ್ಯರು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.