₹1 ಕೋಟಿ ವೆಚ್ಚದಲ್ಲಿ ಪಟ್ಟಣದ ಡಿ.ದೇವರಾಜ ಅರಸು ಕ್ರೀಡಾಂಗಣದ ಅಭಿವೃದ್ಧಿ ಕಾಮಗಾರಿಗೆ ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ ಭೂಮಿ ಪೂಜೆ ನೆರವೇರಿಸಿದರು.
ಗುಂಡ್ಲುಪೇಟೆ: ₹1 ಕೋಟಿ ವೆಚ್ಚದಲ್ಲಿ ಪಟ್ಟಣದ ಡಿ.ದೇವರಾಜ ಅರಸು ಕ್ರೀಡಾಂಗಣದ ಅಭಿವೃದ್ಧಿ ಕಾಮಗಾರಿಗೆ ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ ಭೂಮಿ ಪೂಜೆ ನೆರವೇರಿಸಿದರು. ಪಟ್ಟಣದ ಡಿ.ದೇವರಾಜ ಅರಸು ಕ್ರೀಡಾಂಗಣದೊಳಗೆ ಗುದ್ದಲಿ ಪೂಜೆ ಬಳಿಕ ಮಾತನಾಡಿ, ಕ್ರೀಡಾಂಗಣದ ಸಮಗ್ರ ಅಭಿವೃದ್ಧಿಗೆ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಶಾಸಕರೊಂದಿಗೆ ಜಿಲ್ಲಾ ಸಹಕಾರ ಒಕ್ಕೂಟದ ಅಧ್ಯಕ್ಷ ಎಚ್.ಎಸ್.ನಂಜುಂಡಪ್ರಸಾದ್, ಹಾಪ್ ಕಾಮ್ಸ್ ಅಧ್ಯಕ್ಷ ರಾಘವಾಪುರ ನಾಗೇಶ್, ಟಿಎಪಿಸಿಎಂಎಸ್ ಅಧ್ಯಕ್ಷ ಜಿ.ಮಡಿವಾಳಪ್ಪ, ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಪಿ.ಬಿ.ರಾಜಶೇಖರ್, ಪುರಸಭೆ ನಿಕಟ ಪೂರ್ವ ಅಧ್ಯಕ್ಷ ಶಶಿಧರ್ ಪಿ ದೀಪು, ಗುಂಡ್ಲುಪೇಟೆ ಟೌನ್ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರೂ ಆದ ಪುರಸಭೆ ಮಾಜಿ ಅಧ್ಯಕ್ಷರಾದ ರಮೇಶ್, ಕಿರಣ್ ಗೌಡ, ಮಧು, ತಾಪಂ ಮಾಜಿ ಅಧ್ಯಕ್ಷ ಎಚ್.ಎನ್.ಬಸವರಾಜು, ಪುರಸಭೆ ಮಾಜಿ ಉಪಾಧ್ಯಕ್ಷರಾದ ಅಣ್ಣಯ್ಯಸ್ವಾಮಿ, ಶ್ರೀನಿವಾಸ್, ಕಾರ್ಗಳ್ಳಿ ಸುರೇಶ್, ಮುಖಂಡರಾದ ಪುಟ್ಟಸ್ವಾಮಿ ಆಚಾರ್, ದುಂದಾಸನಪುರ ಮಂಜುನಾಥ್, ಬೇರಂಬಾಡಿ ರಾಜೇಶ್, ಸುರೇಶ್ ನಾಯಕ್, ವೆಂಕಟೇಶ್ ನಾಯಕ, ತಮ್ಮಣ್ಣ ಸೇರಿ ಹಲವರಿದ್ದರು.