ಮಳೆ ನೀರು ಕೊಯ್ಲಿನಿಂದ ಅಂತರ್ಜಲ ವೃದ್ಧಿ

| Published : Feb 16 2025, 01:45 AM IST

ಸಾರಾಂಶ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಕೃಷಿ ತರಬೇತಿ ಕೇಂದ್ರ ವತಿಯಿಂದ ದೊಡ್ಡಬಳ್ಳಾಪುರ ತಾಲೂಕಿನ ಹಾಡೋನಹಳ್ಳಿಯ ಕೃಷಿ ವಿಜ್ಞಾನ ಕೇಂದ್ರದ ಆವರಣದಲ್ಲಿ ರೈತರಿಗಾಗಿ ಅಟಲ್ ಭೂಜಲ್ ಯೋಜನೆಯ ಕುರಿತು ಒಂದು ದಿನದ ತರಬೇತಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು.

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಕೃಷಿ ತರಬೇತಿ ಕೇಂದ್ರ ವತಿಯಿಂದ ದೊಡ್ಡಬಳ್ಳಾಪುರ ತಾಲೂಕಿನ ಹಾಡೋನಹಳ್ಳಿಯ ಕೃಷಿ ವಿಜ್ಞಾನ ಕೇಂದ್ರದ ಆವರಣದಲ್ಲಿ ರೈತರಿಗಾಗಿ ಅಟಲ್ ಭೂಜಲ್ ಯೋಜನೆಯ ಕುರಿತು ಒಂದು ದಿನದ ತರಬೇತಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು.

ತರಬೇತಿಯಲ್ಲಿ ಬೆಂಗಳೂರು ಕೃಷಿ ಇಲಾಖೆ ಉಪ ನಿರ್ದೇಶಕರಾದ ಗಾಯತ್ರಿ ಮಾತನಾಡಿ, ಜಿಲ್ಲೆಯಲ್ಲಿ ಈಗ ಅಂತರ್ಜಲ ಕಡಿಮೆಯಾಗಿ 1600 ಅಡಿ ಆಳ ಹೋದರು ಬೋರ್‌ವೆಲ್‌ ನಲ್ಲಿ ನೀರು ಸಿಗುತ್ತಿಲ್ಲ. ಆದ್ದರಿಂದ ಮಳೆ ನೀರನ್ನು ಕೃಷಿ ಹೊಂಡದ ಮೂಲಕ ಹಾಗು ವಿವಿಧ ಕ್ರಮಗಳ ಮೂಲಕ ನೀರನ್ನು ಸದ್ಬಳಕೆ ಮಾಡಿಕೊಳ್ಳಿ. ನೀರಿನ ಮಿತ ಬಳಕೆ, ಸೂಕ್ಷ್ಮ ನೀರಾವರಿ ತಾಂತ್ರಿಕತೆಗಳು ಮತ್ತು ನೀರಿನ ಮರು ಪೂರೈಕೆ ವಿಧಾನಗಳನ್ನು ಕೃಷಿಯಲ್ಲಿ ಅಳವಡಿಸಿಕೊಳ್ಳುವಂತೆ ರೈತರಿಗೆ ಮಾಹಿತಿ ನೀಡಿದರು.

ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ. ಹನುಮಂತರಾಯ ಮಾತನಾಡಿ, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ನೀರಿನ ಅಭಾವ ಕಾಡುತ್ತಿದೆ. ಲಭ್ಯವಿರುವ ನೀರಿನಲ್ಲಿ ಶೇ. 70 ರಷ್ಟು ಕೃಷಿಗೆ ಬಳಕೆ ಮಾಡಲಾಗುತ್ತಿದೆ ಹಾಗಾಗಿ ಮಳೆ ನೀರನ್ನು ಚೆನ್ನಾಗಿ ಶೇಖರಣೆ ಮಾಡಿ ಕೃಷಿಗೆ ಪರಿಮಾಮಕಾರಿಯಾಗಿ ನೂತನ ತಂತ್ರಜ್ಞಾನವಾದ ಸೆನ್ಸಾರ್ ಸ್ವಯಂಚಾಲಿತ ನೀರಾವರಿ ಮೂಲಕ ಭೂಮಿಗೆ ಎಷ್ಟು ನೀರು ಬೇಕೋ ಅಷ್ಟು ನೀರು ಕೊಟ್ಟು ನೀರಿನ ನಿರ್ವಹಣೆ ಮಾಡಬೇಕೆಂದು ತಿಳಿಸಿದರು. ತೋಟಗಾರಿಕೆ ಬೆಳೆಗಳಿಗೆ ಈ ಹೊಸ ತಂತ್ರಜ್ಞಾನ ಬಹಳ ಉಪಯುಕ್ತವೆಂದು ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ರಾಜ್ಯ ಕಾರ್ಯಕ್ರಮ ನಿರ್ವಹಣಾ ಘಟಕದ ನಿಷಿತ, ಕೃಷಿ ತಜ್ಞೆ ದೀಪ್ತಿ, ಜಿಲ್ಲಾ ಕೃಷಿ ತರಬೇತಿ ಕೇಂದ್ರ ಆರ್.ಕೆ. ಶಾಲಾದ ಸಹಾಯಕ ಕೃಷಿ ನಿರ್ದೇಶಕಿ ಶ್ರೀಮತಿ ಸುಮಂಗಲ, ಕೃಷಿ ಅಧಿಕಾರಿ ಶ್ರೀ ನವೀನ್ ಮತ್ತು ಶ್ರೀ ಕಸ್ತೂರಯ್ಯರವರು, ಜೈನ್ ನೀರಾವರಿ ಸಂಸ್ಥೆಯ ತೋಷಿತ್ ರೈ, ಫೈಲೋ ಸಂಸ್ಥೆಯ ಅನಿಲ್, ತಾಲೂಕಿನ ಆತ್ಮ ಸಿಬ್ಬಂಧಿಗಳು ಹಾಗೂ ರೈತರು ಭಾಗವಹಿಸಿದ್ದರು.

ಫೋಟೋ-15ಕೆಡಿಬಿಪಿ1-

ದೊಡ್ಡಬಳ್ಳಾಪುರ ತಾಲೂಕಿನ ಹಾಡೋನಹಳ್ಳಿಯಲ್ಲಿ ಅಟಲ್ ಭೂ ಜಲ ಯೋಜನೆ ಕುರಿತು ರೈತರಿಗೆ ತರಬೇತಿ ಕಾರ್ಯಾಗಾರ ನಡೆಯಿತು.