ಹೆಬ್ರಿ: ಅಂತರ್ಜಲ ಸಂರಕ್ಷಣೆ ಮತ್ತು ಸದ್ಭಳಕೆಯ ಕುರಿತು ನಡೆದ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಹೆಬ್ರಿ ಎಸ್.ಆರ್. ಆಂಗ್ಲ ಮಾಧ್ಯಮ ಪ್ರೌಢಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಸಾನಿಧ್ಯ ಆಚಾರ್ಯ ಪ್ರಥಮ ಸ್ಥಾನ ಪಡೆದು ಶಾಲೆಗೆ ಕೀರ್ತಿ ತಂದಿದ್ದಾರೆ.
ಕರ್ನಾಟಕ ಸರ್ಕಾರದ ಹಿರಿಯ ಭೂವಿಜ್ಞಾನಿ, ಜಿಲ್ಲಾ ಅಂತರ್ಜಲ ಕಚೇರಿ ಹಾಗೂ ಅಂತರ್ಜಲ ನಿರ್ದೇಶನಾಲಯ, ಉಡುಪಿ ರಜತಾದ್ರಿ ವತಿಯಿಂದ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ‘ಅಂತರ್ಜಲ ಸಂರಕ್ಷಣೆ ಮತ್ತು ಸದ್ಭಳಕೆ’ ವಿಷಯದ ಕುರಿತು ಉಡುಪಿಯ ಬೋರ್ಡ್ ಹೈಸ್ಕೂಲ್‌ನಲ್ಲಿ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ ಆಯೋಜಿಸಲಾಗಿತ್ತು.ಈ ಸ್ಪರ್ಧೆಯಲ್ಲಿ ಸಾನಿಧ್ಯ ಆಚಾರ್ಯ ತಾಲೂಕು ಮಟ್ಟದಲ್ಲಿಯೂ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟದ ಸ್ಪರ್ಧೆಗೆ ಅರ್ಹತೆ ಪಡೆದಿದ್ದರು. ಜಿಲ್ಲಾ ಮಟ್ಟದಲ್ಲೂ ತಮ್ಮ ಪ್ರತಿಭೆಯನ್ನು ಮೆರೆದ ಅವರು ಪ್ರಥಮ ಸ್ಥಾನ ಗಳಿಸಿದ್ದಾರೆ. ಈ ಸಾಧನೆಗಾಗಿ ಅವರಿಗೆ ₹7,500 ನಗದು ಬಹುಮಾನ ದೊರೆತಿದೆ.ವಿದ್ಯಾರ್ಥಿನಿಯ ಸಾಧನೆಗೆ ಎಸ್.ಆರ್. ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಎಚ್. ನಾಗರಾಜ ಶೆಟ್ಟಿ ಹಾಗೂ ಕಾರ್ಯದರ್ಶಿ ಸಪ್ನಾ ಎನ್. ಶೆಟ್ಟಿ ಅಭಿನಂದನೆ ಸಲ್ಲಿಸಿ, ಮುಂದಿನ ದಿನಗಳಲ್ಲಿಯೂ ಶೈಕ್ಷಣಿಕ ಹಾಗೂ ಸೃಜನಾತ್ಮಕ ಕ್ಷೇತ್ರಗಳಲ್ಲಿ ಹೆಚ್ಚಿನ ಸಾಧನೆ ಮಾಡುವಂತೆ ಶುಭ ಹಾರೈಸಿದ್ದಾರೆ.ಅಂತರ್ಜಲ ಸಂರಕ್ಷಣೆ ಚಿತ್ರಕಲಾ ಸ್ಪರ್ಧೆ: ಜಿಲ್ಲಾ ಮಟ್ಟದಲ್ಲಿ ಹೆಬ್ರಿ ಎಸ್.ಆರ್. ವಿದ್ಯಾರ್ಥಿನಿಗೆ ಪ್ರಥಮ
ಅಂತರ್ಜಲ ಸಂರಕ್ಷಣೆ ಮತ್ತು ಸದ್ಭಳಕೆಯ ಕುರಿತು ನಡೆದ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಹೆಬ್ರಿ ಎಸ್.ಆರ್. ಆಂಗ್ಲ ಮಾಧ್ಯಮ ಪ್ರೌಢಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಸಾನಿಧ್ಯ ಆಚಾರ್ಯ ಪ್ರಥಮ ಸ್ಥಾನ ಪಡೆದು ಶಾಲೆಗೆ ಕೀರ್ತಿ ತಂದಿದ್ದಾರೆ.
Latest Videos
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.