ಅಂತರ್ಜಲ ಸಂರಕ್ಷಣೆ ನಿಟ್ಟಿನಲ್ಲಿ ಗ್ರಾಮ ಮಟ್ಟದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ವಾಟರ್‌ಮ್ಯಾನ್‌ಗಳ ಪಾತ್ರ ಮಹತ್ವದಾಗಿದೆ ಎಂದು ಅಂತರ್ಜಲ ನಿರ್ದೇಶನಾಲಯದ ನಿರ್ದೇಶಕ ರಾಜೇಂದ್ರ ಬಿ.ಕೆ. ಅವರು ತಿಳಿಸಿದರು.

ಕನ್ನಡಪ್ರಭ ವಾರ್ತೆ ತುಮಕೂರುಅಂತರ್ಜಲ ಸಂರಕ್ಷಣೆ ನಿಟ್ಟಿನಲ್ಲಿ ಗ್ರಾಮ ಮಟ್ಟದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ವಾಟರ್‌ಮ್ಯಾನ್‌ಗಳ ಪಾತ್ರ ಮಹತ್ವದಾಗಿದೆ ಎಂದು ಅಂತರ್ಜಲ ನಿರ್ದೇಶನಾಲಯದ ನಿರ್ದೇಶಕ ರಾಜೇಂದ್ರ ಬಿ.ಕೆ. ಅವರು ತಿಳಿಸಿದರು. ನಗರದ ಬಾಲಭವನದಲ್ಲಿ ನಡೆದ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಅಂತರ್ಜಲ ಅಭಿವೃದ್ದಿ, ಸದ್ಬಳಕೆ, ಸಂರಕ್ಷಣೆ ಕುರಿತು ಹಾಗೂ ಮಳೆ ನೀರಿನ ಸಂಗ್ರಹಣೆ ಮತ್ತು ಮರುಬಳಕೆ, ಅಂತರ್ಜಲ ಕಲುಷಿತತೆ ತಡೆಗಟ್ಟುವಿಕೆ ಬಗ್ಗೆ ತೆರೆದ ತ್ಯಕ್ತ ಕೊಳವೆ ಬಾವಿಗಳಲ್ಲಿ ಚಿಕ್ಕಮಕ್ಕಳು ಬೀಳುವ ಅವಘಡಗಳನ್ನು ನಿಯಂತ್ರಿಸುವ ಕುರಿತಂತೆ, ತುಮಕೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬರುವ ವಾಟರ್‌ಮ್ಯಾನ್, ತತ್ಸಂಬಂಧಿಸಿದ ಅಧಿಕಾರಿಗಳು, ತುಮಕೂರು ತಾಲೂಕು ವ್ಯಾಪ್ತಿಯ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ಅಂತರ್ಜಲ ಕುರಿತು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ನರೇಗಾ ಕಾರ್ಯಕ್ರಮದಡಿ ಅಂತರ್ಜಲ ಮರುಪೂರಣದ ಬಗ್ಗೆ ಜಿಲ್ಲೆಯಲ್ಲಿ ಅತಿ ಹೆಚ್ಚು ರಚನೆಗಳನ್ನು ನಿರ್ಮಿಸಲಾಗಿದೆ ಎಂದು ತಿಳಿಸಿದರು.

ಕಾರ್ಯಾಗಾರದಲ್ಲಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ(ಅಭಿವೃದ್ಧಿ) ಸಂಜೀವಪ್ಪ, ಅಂತರ್ಜಲ ನಿರ್ದೇಶನಾಲಯದ ಉಪ ನಿರ್ದೇಶಕ ಜಿ. ಜಯಣ್ಣ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಸಿದ್ಧರಾಮಣ್ಣ ಎಸ್., ಹಿರಿಯ ಭೂವಿಜ್ಞಾನಿಗಳಾದ ಕೆ.ಎಸ್. ನಾಗವೇಣಿ ಹಾಗೂ ಜಗದೀಶ್ವರಿ ಎಮ್. ಭಾಗವಹಿಸಿದ್ದರು. ಕಾರ್ಯಗಾರದಲ್ಲಿ ರಾಮಯ್ಯ ವಿಶ್ವವಿದ್ಯಾನಿಲಯದ ಸಿವಿಲ್ ಎಂಜಿನಿಯರಿಂಗ್ ವಿಭಾಗದ ಪ್ರಾಧ್ಯಾಪಕ ಡಾ. ಎ.ವಿ. ಗಣೇಶ್ ಅವರು ಅಂತರ್ಜಲದ ಮಹತ್ವದ ಬಗ್ಗೆ ಉಪನ್ಯಾಸ ನೀಡಿದರು.ತುಮಕೂರು ತಾಲೂಕಿನ ಎಲ್ಲಾ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ವಾಟರ್‌ಮ್ಯಾನ್‌ಗಳು ಹಾಗೂ ತುಮಕೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬರುವ ವಾಟರ್‌ಮ್ಯಾನ್‌ಗಳು ಕಾರ್ಯಾಗಾರದ ಸದುಪಯೋಗ ಪಡೆದುಕೊಂಡರು.