ಚಿಕ್ಕಮಗಳೂರುಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ಮುಂಗಾರು ಮಳೆ ಕೊರತೆಯಿಂದ ಬರ ಪರಿಸ್ಥಿತಿ ತಲೆದೋರಿದ್ದು, ಅಂತರ್ಜಲ ಮಟ್ಟದಲ್ಲಿ ಭಾರೀ ಕುಸಿತ ಉಂಟಾಗಿದೆ.

- ಕಳೆದ ವರ್ಷಕ್ಕೆ ಹೋಲಿಸಿದರೆ ಜಿಲ್ಲೆಯ 7 ತಾಲೂಕುಗಳಲ್ಲಿ ಅಂತರ್ಜಲ ಮಟ್ಟ 5 ರಿಂದ 7 ಮೀಟರ್‌ಗೂ ಹೆಚ್ಚು ಕುಸಿದಿದೆ

ವಿಶ್ವನಾಥ ಮಲೇಬೆನ್ನೂರು

ಕನ್ನಡಪ್ರಭ ವಾರ್ತೆ ಚಿಕ್ಕಮಗಳೂರು

ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ಮುಂಗಾರು ಮಳೆ ಕೊರತೆಯಿಂದ ಬರ ಪರಿಸ್ಥಿತಿ ತಲೆದೋರಿದ್ದು, ಅಂತರ್ಜಲ ಮಟ್ಟದಲ್ಲಿ ಭಾರೀ ಕುಸಿತ ಉಂಟಾಗಿದೆ.

ಕಳೆದ ವರ್ಷಕ್ಕೆ ಹೋಲಿಸಿದರೆ ಜಿಲ್ಲೆಯ 7 ತಾಲೂಕುಗಳಲ್ಲಿ ಅಂತರ್ಜಲ ಮಟ್ಟ 5 ರಿಂದ 7 ಮೀಟರ್‌ಗೂ ಹೆಚ್ಚು ಕುಸಿದಿದೆ. ಇದರಿಂದ ಕೃಷಿ ಚಟುವಟಿಕೆಗಳಿಗೆ ತೀವ್ರ ಹಿನ್ನಡೆಯಾಗಿದ್ದು, ಕುಡಿಯುವ ನೀರಿನ ಸಮಸ್ಯೆಯೂ ಗಂಭೀರವಾಗುವ ಆತಂಕ ಎದುರಾಗಿದೆ.

ಜಿಲ್ಲೆಯಲ್ಲಿ ಮುಂಗಾರು ಅವಧಿಯ ನಾಲ್ಕು ತಿಂಗಳಲ್ಲಿ ವಾಡಿಕೆಯಂತೆ 1,447 ಮಿ.ಮೀ. ಮಳೆಯಾಗಬೇಕಿತ್ತು. ಆದರೆ, ಈ ಬಾರಿ ಕೇವಲ 908 ಮಿ.ಮೀ. ಮಳೆಯಾಗಿದೆ. ಶೇ.37ರಷ್ಟು ಮಳೆ ಕೊರತೆ ದಾಖಲಾಗಿದೆ. ನಿರೀಕ್ಷಿತ ಪ್ರಮಾಣದಲ್ಲಿ ಮಳೆ ಯಾಗದ ಪರಿಣಾಮ ಅಂತರ್ಜಲ ಮರುಪೂರಣಕ್ಕೆ ಹಿನ್ನಡೆಯಾಗಿ ಕೊಳವೆಬಾವಿಗಳಲ್ಲಿ ನೀರಿನ ಲಭ್ಯತೆ ಗಣನೀಯವಾಗಿ ಕಡಿಮೆಯಾಗಿದೆ.

ಜಿಲ್ಲೆಯ ಒಂಬತ್ತು ತಾಲೂಕುಗಳ ಪೈಕಿ ಏಳು ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ. ಈ ತಾಲೂಕು ಗಳಲ್ಲಿ ಅಂತರ್ಜಲ ಮಟ್ಟ ತೀವ್ರವಾಗಿ ಕುಸಿದಿದೆ. ಕೃಷಿ ಹಾಗೂ ಕುಡಿಯುವ ನೀರಿನ ಅಗತ್ಯಗಳನ್ನು ಪೂರೈಸುವುದು ಸವಾಲಾಗಿದೆ. ಉತ್ತಮ ಮಳೆಯಾಗಿದ್ದ ಮೂಡಿಗೆರೆ ಮತ್ತು ಶೃಂಗೇರಿ ತಾಲೂಕುಗಳಲ್ಲಿಯೂ ಅಂತರ್ಜಲ ಮಟ್ಟ ಸ್ವಲ್ಪ ಪ್ರಮಾಣದಲ್ಲಿ ಕುಸಿದಿದೆ. ಉಳಿದ ತಾಲೂಕುಗಳಲ್ಲಿ 5 ರಿಂದ 7 ಮೀಟರ್‌ಗೂ ಹೆಚ್ಚಿನ ಕುಸಿತ ಕಂಡುಬಂದಿದೆ.ಅಜ್ಜಂಪುರದಲ್ಲಿ ಅತಿ ಹೆಚ್ಚು ಕುಸಿತ:

ಜಿಲ್ಲೆಯ ತಾಲೂಕುಗಳ ಪೈಕಿ ಅಜ್ಜಂಪುರದಲ್ಲಿ ಅಂತರ್ಜಲ ಮಟ್ಟ ಅತಿ ಹೆಚ್ಚು ಕುಸಿದಿರುವುದು ಆತಂಕಕ್ಕೆ ಕಾರಣವಾಗಿದೆ. 2025ರ ಸೆಪ್ಟೆಂಬರ್‌ನಲ್ಲಿ ನೆಲಮಟ್ಟದಿಂದ 6.53 ಮೀಟರ್ ಆಳದಲ್ಲಿ ಅಂತರ್ಜಲ ಲಭ್ಯವಿತ್ತು. ಆದರೆ, ಈ ವರ್ಷದ ಸೆಪ್ಟೆಂಬರ್‌ನಲ್ಲಿ ನೀರಿನ ಮಟ್ಟ 13.77 ಮೀಟರ್ ಆಳಕ್ಕೆ ಇಳಿದಿದೆ. ಇದರಿಂದ ಒಂದೇ ವರ್ಷದಲ್ಲಿ 7.24 ಮೀಟರ್‌ನಷ್ಟು ಅಂತರ್ಜಲ ಮಟ್ಟ ಕುಸಿದಂತಾಗಿದೆ.ಕೊಳವೆಬಾವಿಗಳಲ್ಲೂ ನೀರಿಲ್ಲ:

ಅಂತರ್ಜಲ ಮಟ್ಟ ಕುಸಿತದಿಂದ ಗ್ರಾಮೀಣ ಪ್ರದೇಶಗಳಲ್ಲಿ ಕೊಳವೆಬಾವಿಗಳ ಮೂಲಕ ನೀರು ಪಡೆಯುವುದು ಕಷ್ಟಕರ ವಾಗಿದೆ. ಈಗಾಗಲೇ ಕೊರೆಸಿರುವ ಕೊಳವೆಬಾವಿಗಳಲ್ಲಿ ನೀರು ಲಭ್ಯವಾಗುತ್ತಿಲ್ಲ. ಹೊಸದಾಗಿ ಕೊಳವೆಬಾವಿಗಳನ್ನು ಕೊರೆಸಿದರೂ ನೀರು ಸಿಗದ ಪರಿಸ್ಥಿತಿ ನಿರ್ಮಾಣವಾಗಿದೆ. ಇದರಿಂದ ರೈತರು ತೋಟಗಳಿಗೆ ನೀರುಣಿಸಲು ಟ್ಯಾಂಕರ್‌ಗಳ ಮೊರೆ ಹೋಗುವಂತಾಗಿದೆ.

ಟ್ಯಾಂಕರ್‌ ಮೊರೆ: ಟ್ಯಾಂಕರ್‌ ಮೂಲಕ ನೀರು ಸಾಗಿಸಿ ತೋಟಗಳಿಗೆ ಪೂರೈಸಬೇಕಾಗಿರುವುದರಿಂದ ರೈತರ ಕೃಷಿ ವೆಚ್ಚ ಹೆಚ್ಚುತ್ತಿದೆ. ಮಳೆ ಕೊರತೆ, ಅಂತರ್ಜಲ ಕುಸಿತ ಹಾಗೂ ನೀರಿನ ಅಭಾವ ಒಟ್ಟಾಗಿ ಕೃಷಿ ಚಟುವಟಿಕೆಗಳ ಮೇಲೆ ಗಂಭೀರ ಪರಿಣಾಮ ಬೀರುತ್ತಿವೆ. ಪ್ರತಿ ತೋಟಗಳಿ ಟ್ಯಾಂಕರ್‌ ಮೂಲಕ ನೀರು ತೆಗೆದುಕೊಂಡು ಬಂದು ಸುರಿಯುವುದಕ್ಕೆ ಹೊಂಡಗಳನ್ನು ನಿರ್ಮಿಸಿಕೊಂಡಿರುವುದು ನೀರಿನ ಹಾಹಾಕಾರಕ್ಕೆ ಹಿಡಿದ ಕೈಗನ್ನಡಿಯಾಗಿವೆ.--ಬಾಕ್ಸ್‌--

ತಾಲೂಕುವಾರು ಅಂತರ್‌ ಜಲ ಮಟ್ಟದ ಕುಸಿತದ ವಿವರ (ಮೀಟರ್‌)

ತಾಲೂಕುಸೆಪ್ಟಂಬರ್ 2025ಸೆಪ್ಟಂಬರ್ 2026ಕುಸಿತ ಪ್ರಮಾಣ

ಅಜ್ಜಂಪುರ6.5313.777.24

ಚಿಕ್ಕಮಗಳೂರು6.9611.804.84

ಕಡೂರು11.3715.554.18

ಕೊಪ್ಪ9.9814.154.17

ಮೂಡಿಗೆರೆ7.159.121.97

ಎನ್‌.ಆರ್‌.ಪುರ9.8014.014.21

ಶೃಂಗೇರಿ4.355.411.06

ತರೀಕೆರೆ7.0511.214.16