ಸಾರಾಂಶ
ಬಿಪಿಎಲ್ ಕಾರ್ಡ್ ಎಪಿಎಲ್ ಆದರೂ ‘ಗೃಹಲಕ್ಷ್ಮೀ’ ಹಣ ಬರುತ್ತೆ. ಆದರೆ, ಎಪಿಎಲ್ ಇರಲಿ, ಬಿಪಿಎಲ್ ಇರಲಿ, ತೆರಿಗೆ ಕಟ್ಟಿದರೆ ಗೃಹಲಕ್ಷ್ಮೀ ಹಣ ಸಂದಾಯ ಆಗುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಸ್ಪಷ್ಟಪಡಿಸಿದ್ದಾರೆ.
ಬೆಳಗಾವಿ : ಬಿಪಿಎಲ್‌ಗೆ ಅರ್ಹವಲ್ಲದ ಕಾರ್ಡ್‌ಗಳನ್ನು ಮಾತ್ರ ಎಪಿಎಲ್‌ಗೆ ಬದಲಾವಣೆ ಮಾಡಲಾಗಿದೆ. ಬಿಪಿಎಲ್ ಕಾರ್ಡ್ ಎಪಿಎಲ್ ಆದರೂ ‘ಗೃಹಲಕ್ಷ್ಮೀ’ ಹಣ ಬರುತ್ತೆ. ಆದರೆ, ಎಪಿಎಲ್ ಇರಲಿ, ಬಿಪಿಎಲ್ ಇರಲಿ, ತೆರಿಗೆ ಕಟ್ಟಿದರೆ ಗೃಹಲಕ್ಷ್ಮೀ ಹಣ ಸಂದಾಯ ಆಗುವುದಿಲ್ಲ. ತೆರಿಗೆ ಕಟ್ಟದಿದ್ದರೆ ಮಾತ್ರ ಹಣ ಸಂದಾಯವಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಸ್ಪಷ್ಟಪಡಿಸಿದ್ದಾರೆ.
ನಗರದಲ್ಲಿ ಬುಧವಾರ ಸುದ್ದಿಗಾರರ ಜೊತೆ ಅವರು ಮಾತನಾಡಿದರು. ರಾಜ್ಯದಲ್ಲಿ ಬಿಪಿಎಲ್‌ಗೆ ಅರ್ಹವಲ್ಲದ ಸುಮಾರು 80 ಸಾವಿರ ಕಾರ್ಡ್‌ಗಳನ್ನು ರದ್ದು ಮಾಡುವ ಬದಲು ಅವುಗಳನ್ನು ಎಪಿಎಲ್‌ಗೆ ವರ್ಗಾವಣೆ ಮಾಡಲಾಗಿದೆ. ವರ್ಗಾವಣೆ ಮಾಡಿರುವುದರಿಂದ ಯಾವುದೇ ಗೊಂದಲ ಇಲ್ಲ. ಎಪಿಎಲ್, ಬಿಪಿಎಲ್ ಕಾರ್ಡ್ ಇದ್ದವರಿಗೆ ಗೃಹಲಕ್ಷ್ಮೀ ಹಣ ಬಂದೇ ಬರುತ್ತದೆ. ಈ ಬಗ್ಗೆ ಜನರಲ್ಲಿ ಯಾವುದೇ ಗೊಂದಲ ಬೇಡ. ಆದರೆ, ತೆರಿಗೆ ಕಟ್ಟಿದರೆ ಗೃಹಲಕ್ಷ್ಮೀ ಹಣ ಸಂದಾಯ ಆಗುವುದಿಲ್ಲ ಎಂದು ಹೇಳಿದರು.
ಸಚಿವೆ ಸ್ಪಷ್ಟನೆ
ಅನರ್ಹರ ಬಿಪಿಎಲ್ ಕಾರ್ಡ್ ಎಪಿಎಲ್ ಆಗಿದೆ ಅಷ್ಟೆ
- ತೆರಿಗೆ ಕಟ್ಟುವವರಿಗೆ ಮಾತ್ರ 2000 ರು. ಬರಲ್ಲ
‘ಗೃಹಲಕ್ಷ್ಮಿ’ಗೆ ರೇಷನ್ ಕಾರ್ಡ್ ಇದ್ದರಾಯಿತು
ರಾಜ್ಯದಲ್ಲಿ ಬಿಪಿಎಲ್‌ಗೆ ಅರ್ಹವಲ್ಲದ ಸುಮಾರು 80 ಸಾವಿರ ಕಾರ್ಡ್‌ಗಳನ್ನು ರದ್ದು ಮಾಡುವ ಬದಲು ಎಪಿಎಲ್‌ಗೆ ವರ್ಗಾವಣೆ ಮಾಡಲಾಗಿದೆ. ವರ್ಗಾವಣೆ ಮಾಡಿರುವುದರಿಂದ ಯಾವುದೇ ಗೊಂದಲ ಇಲ್ಲ. ಎಪಿಎಲ್, ಬಿಪಿಎಲ್ ಕಾರ್ಡ್ ಇದ್ದವರಿಗೆ ಗೃಹಲಕ್ಷ್ಮೀ ಹಣ ಬಂದೇ ಬರುತ್ತದೆ.
- ಲಕ್ಷ್ಮೀ ಹೆಬ್ಬಾಳ್ಕರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ