ರಾಜ್ಯದಲ್ಲಿಯೇ ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ಗದಗ ತಾಲೂಕು ಅಗ್ರಸ್ಥಾನ ಪಡೆದಿದ್ದು, ಇದಕ್ಕೆ ಕಾರಣೀಕರ್ತರಾದ ರಾಜ್ಯ ಗ್ಯಾರಂಟಿ ಯೋಜನೆಗಳ ಅಧ್ಯಕ್ಷ ಎಚ್.ಎಂ. ರೇವಣ್ಣ, ಉಪಾಧ್ಯಕ್ಷ ಎಸ್.ಆರ್. ಪಾಟೀಲ, ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಕೆ. ಪಾಟೀಲ ಅವರ ಮಾರ್ಗದರ್ಶದಲ್ಲಿ ಪ್ರಗತಿ ಸಾಧಿಸಿದ್ದು, ಅಭಿನಂದನಾರ್ಹವಾಗಿದೆ.
ಗದಗ: ರಾಜ್ಯದ ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ಗದಗ ತಾಲೂಕು ಅಗ್ರಸ್ಥಾನ ಪಡೆದಿದ್ದರೂ ಗೃಹಲಕ್ಷ್ಮೀ ಯೋಜನೆಯ ಪ್ರಗತಿ ಇನ್ನೂ ಹೆಚ್ಚಿಸಬೇಕಿದೆ ಎಂದು ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಅಶೋಕ ಮಂದಾಲಿ ತಿಳಿಸಿದರು.ನಗರದ ಉಪ ವಿಭಾಗಾಧಿಕಾರಿಗಳ ಕಾರ್ಯಾಲಯದಲ್ಲಿ ಬುಧವಾರ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ತಾಲೂಕು ಸಮಿತಿ ಕಚೇರಿಯಲ್ಲಿ ನಡೆದ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಯೋಜನೆಯ ಶೇ. 100 ಪ್ರಗತಿ ಸಾಧನೆಗೆ ಎಲ್ಲ ಅಂಗನವಾಡಿ ಕಾರ್ಯಕರ್ತೆಯರ ಪಾತ್ರ ಮಹತ್ವವಾಗಿದೆ. ಪ್ರತಿ ವಾರ್ಡ್‌ಗಳಲ್ಲಿ ನಗರಸಭೆಯ ಸದಸ್ಯರು, ಅಧಿಕಾರಿಗಳು ಮತ್ತು ಸಮಿತಿ ಸದಸ್ಯರ ಸಹಕಾರದೊಂದಿಗೆ ನಗರದ 1ರಿಂದ 35 ವಾರ್ಡ್‌ಗಳಲ್ಲಿ ಯೋಜನೆಯ ಸೌಲಭ್ಯದಿಂದ ಯಾರೂ ವಂಚಿತರಾಗಬಾರದು ಮತ್ತು ವಂಚಿತರಾದವರನ್ನು ಗುರುತಿಸಿ ಮಾಹಿತಿ ಕೊಡಲು ಅಂಗನವಾಡಿ ಕಾರ್ಯಕರ್ತೆಯರಿಗೆ ಸೂಚಿಸಿದರು.ರಾಜ್ಯದಲ್ಲಿಯೇ ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ಗದಗ ತಾಲೂಕು ಅಗ್ರಸ್ಥಾನ ಪಡೆದಿದ್ದು, ಇದಕ್ಕೆ ಕಾರಣೀಕರ್ತರಾದ ರಾಜ್ಯ ಗ್ಯಾರಂಟಿ ಯೋಜನೆಗಳ ಅಧ್ಯಕ್ಷ ಎಚ್.ಎಂ. ರೇವಣ್ಣ, ಉಪಾಧ್ಯಕ್ಷ ಎಸ್.ಆರ್. ಪಾಟೀಲ, ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಕೆ. ಪಾಟೀಲ ಅವರ ಮಾರ್ಗದರ್ಶದಲ್ಲಿ ಪ್ರಗತಿ ಸಾಧಿಸಿದ್ದು, ಅಭಿನಂದನಾರ್ಹವಾಗಿದೆ ಎಂದರು.ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ತಾಲೂಕು ಸಮಿತಿ ಸದಸ್ಯ ಕೃಷ್ಣಗೌಡ ಪಾಟೀಲ ಮಾತನಾಡಿ, ಪಂಚಗ್ಯಾರಂಟಿ ಯೋಜನೆಗಳು ಬಡ ಜನರನ್ನು ಆರ್ಥಿಕವಾಗಿ ಸಬಲೀಕರಿಸುವ ಉದ್ದೇಶ ಹೊಂದಿವೆ. ಅರ್ಹ ಫಲಾನುಭವಿಗಳು ಸೌಲಭ್ಯ ಪಡೆಯುವಲ್ಲಿ ವಿಳಂಬ ಆಗಬಾರದು. ಪ್ರತಿ ವಾರ್ಡ್‌ಗಳಿಗೆ ಅಂಗನವಾಡಿ ಕಾರ್ಯಕರ್ತೆಯರು ಭೇಟಿ ನೀಡಿ ಎಂದರು.
ಗ್ಯಾರಂಟಿ ಯೋಜನೆ ಅನುಷ್ಠಾನದಲ್ಲಿ ಶೇ. 100 ಪ್ರಗತಿ ಸಾಧಿಸಲು ಎಲ್ಲ ಅಂಗನವಾಡಿ ಕಾರ್ಯಕರ್ತೆಯರು ಕಾರ್ಯನಿರ್ವಹಿಸಬೇಕು ಹಾಗೂ ಪ್ರತಿ ವಾರ್ಡ್‌ಗಳಲ್ಲಿ ಕ್ಯಾಂಪೇನ್ ಮಾಡುವ ಮೂಲಕ ಸೌಲಭ್ಯವಂಚಿತರನ್ನು ಮತ್ತು ಅರ್ಹ ಫಲಾನುಭವಿಗಳನ್ನು ಗುರುತಿಸಿ ಸೌಲಭ್ಯ ಒದಗಿಸಲು ಮುಂದಾಗಬೇಕೆಂದರು.ಈ ವೇಳೆ ಅಧಿಕಾರಿಗಳು, ಅಂಗನವಾಡಿ ಕಾರ್ಯಕರ್ತೆಯರು ಇದ್ದರು.