ಜಿಎಸ್‌ಟಿ ಸರಳೀಕರಣ: ಮೋದಿ ಸರ್ಕಾರದ ನಿರ್ಧಾರಕ್ಕೆ ಪ್ರಮೋದ್ ಮಧ್ವರಾಜ್ ಶ್ಲಾಘನೆ

| Published : Sep 08 2025, 01:01 AM IST

ಜಿಎಸ್‌ಟಿ ಸರಳೀಕರಣ: ಮೋದಿ ಸರ್ಕಾರದ ನಿರ್ಧಾರಕ್ಕೆ ಪ್ರಮೋದ್ ಮಧ್ವರಾಜ್ ಶ್ಲಾಘನೆ
Share this Article
  • FB
  • TW
  • Linkdin
  • Email

ಸಾರಾಂಶ

ಇತ್ತೀಚೆಗೆ ನಡೆದ 56ನೇ ಜಿಎಸ್‌ಟಿ ಮಂಡಳಿ ಸಭೆಯಲ್ಲಿ ಪ್ರಸ್ತುತ ಇರುವ ಶೇ.12 ಮತ್ತು ಶೇ.28ರ ತೆರಿಗೆ ಸ್ಲ್ಯಾಬ್‌ಗಳನ್ನು ತೆಗೆದುಹಾಕಿ, ಅವುಗಳ ಬದಲಿಗೆ ಕೇವಲ ಶೇ.5 ಮತ್ತು ಶೇ.18ರ ಎರಡು ಹಂತದ ತೆರಿಗೆಗಳನ್ನು ಜಾರಿಗೆ ತರಲು ಒಪ್ಪಿಗೆ ಸೂಚಿಸಲಾಗಿದೆ. ಈ ನಿರ್ಧಾರದಿಂದ ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳ ಮೇಲಿನ ಆರ್ಥಿಕ ಹೊರೆ ಕಡಿಮೆಯಾಗಿ ಅವರಿಗೆ ದೊಡ್ಡಮಟ್ಟದ ನಿರಾಳತೆ ದೊರೆಯಲಿದೆ.

ಕನ್ನಡಪ್ರಭ ವಾರ್ತೆ ಉಡುಪಿ

ಜಿಎಸ್‌ಟಿ ತೆರಿಗೆ ದರಗಳನ್ನು ಸರಳೀಕರಿಸುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಮುಕ್ತ ಕಂಠದಿಂದ ಶ್ಲಾಘಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಮತ್ತು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ನೇತೃತ್ವದಲ್ಲಿ ಕೈಗೊಂಡಿರುವ ಈ ಕ್ರಮವು ದೇಶದ ಪ್ರಗತಿಗೆ ಮತ್ತು ಸಾಮಾನ್ಯ ಜನರ ಏಳಿಗೆಗೆ ಸಹಾಯಕವಾಗಲಿದೆ ಎಂದು ಅವರು ಹೇಳಿದ್ದಾರೆ.ಇತ್ತೀಚೆಗೆ ನಡೆದ 56ನೇ ಜಿಎಸ್‌ಟಿ ಮಂಡಳಿ ಸಭೆಯಲ್ಲಿ ಪ್ರಸ್ತುತ ಇರುವ ಶೇ.12 ಮತ್ತು ಶೇ.28ರ ತೆರಿಗೆ ಸ್ಲ್ಯಾಬ್‌ಗಳನ್ನು ತೆಗೆದುಹಾಕಿ, ಅವುಗಳ ಬದಲಿಗೆ ಕೇವಲ ಶೇ.5 ಮತ್ತು ಶೇ.18ರ ಎರಡು ಹಂತದ ತೆರಿಗೆಗಳನ್ನು ಜಾರಿಗೆ ತರಲು ಒಪ್ಪಿಗೆ ಸೂಚಿಸಲಾಗಿದೆ. ಈ ನಿರ್ಧಾರದಿಂದ ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳ ಮೇಲಿನ ಆರ್ಥಿಕ ಹೊರೆ ಕಡಿಮೆಯಾಗಿ ಅವರಿಗೆ ದೊಡ್ಡಮಟ್ಟದ ನಿರಾಳತೆ ದೊರೆಯಲಿದೆ.ಈ ಜನಪರ ತೀರ್ಮಾನವನ್ನು ಸ್ವಾಗತಿಸಿದ ಪ್ರಮೋದ್ ಮಧ್ವರಾಜ್, ದೇಶದ ಜನರ ಕಲ್ಯಾಣಕ್ಕಾಗಿ ತೆಗೆದುಕೊಂಡಿರುವ ಈ ಮಹತ್ವದ ನಿರ್ಧಾರಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ನನ್ನ ಹೃತ್ಪೂರ್ವಕ ಧನ್ಯವಾದಗಳು ಎಂದು ತಿಳಿಸಿದ್ದಾರೆ. ಈ ಕ್ರಮವು ಭಾರತದ ಆರ್ಥಿಕ ಬೆಳವಣಿಗೆಗೆ ಮತ್ತಷ್ಟು ವೇಗ ನೀಡಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.