ಸಾರಾಂಶ
ರೆಸ್ಟೋರೆಂಟ್ ಉದ್ಘಾಟನೆಗೆ ಮಡಿಕೇರಿಗೆ ಆಗಮಿಸಿದ್ದ ಜಿ.ಟಿ. ದೇವೇಗೌಡ ಕೇರಳದ ಚಂಡೆ ವಾದ್ಯಕ್ಕೆ ನೃತ್ಯ ಮಾಡಿದರು.
ಕನ್ನಡಪ್ರಭ ವಾರ್ತೆ ಮಡಿಕೇರಿ
ರೆಸ್ಟೋರೆಂಟ್ ಉದ್ಘಾಟನೆಗೆ ಮಡಿಕೇರಿಗೆ ಆಗಮಿಸಿದ್ದ ಜೆಡಿಎಸ್ ನಾಯಕ ಜಿ. ಟಿ. ದೇವೇಗೌಡ ಕೇರಳದ ಚಂಡೆ ವಾದ್ಯಕ್ಕೆ ನೃತ್ಯ ಮಾಡಿದರು.ಅಬ್ಬರದ ಚುನಾವಣಾ ಪ್ರಚಾರದ ನಡುವೆ ಬಿಡುವು ಮಾಡಿಕೊಂಡು ರಿಲ್ಯಾಕ್ಸ್ ಮೂಡ್‌ನಲ್ಲಿದ್ದ ಜಿ.ಟಿ.ದೇವೇಗೌಡ ಅವರು ಶುಕ್ರವಾರ ರಾತ್ರಿ ಮಡಿಕೇರಿಯ ಹಳೆಯ ಖಾಸಗಿ ಬಸ್ ನಿಲ್ದಾಣದ ಬಳಿ ನೂತನ ಖಾಸಗಿ ರೆಸ್ಟೋರೆಂಟ್ ಉದ್ಘಾಟನೆ ಮಾಡಿದರು.
ಈ ಸಂದರ್ಭ ಚಂಡೆವಾದ್ಯಕ್ಕೆ ಹೆಜ್ಜೆ ಹಾಕಿದರು. ಕಾರ್ಯಕ್ರಮದಲ್ಲಿ ಮಾಜಿ ಸ್ಪೀಕರ್ ಕೆ.ಜಿ.ಬೋಪಯ್ಯ, ಬಿಜಿಪಿ ಜಿಲ್ಲಾಧ್ಯಕ್ಷ ರವಿ ಕಾಳಪ್ಪ ಹಾಗೂ ಇತರರು ಭಾಗವಹಿಸಿದ್ದರು.-----------------------------------------
ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆಮಡಿಕೇರಿ : ಉಚಿತ ಮತ್ತು ಕಡ್ಡಾಯ ಶಿಕ್ಷಣಕ್ಕಾಗಿ ಮಕ್ಕಳ ಹಕ್ಕು ಕಾಯಿದೆ 2009ರ (ಆರ್‌ಟಿಐ) ಸೆಕ್ಷನ್ 12(1) (ಬಿ) ಮತ್ತು 12(1)(ಸಿ) ಅಡಿ, 2024-25ನೇ ಸಾಲಿಗೆ ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳಲ್ಲಿ ದಾಖಲಾತಿಗಾಗಿ ಆನ್‌ಲೈನ್‌ನಲ್ಲಿ ಪೋಷಕರು ಹೆಚ್ಚು ಅರ್ಜಿ ಸಲ್ಲಿಸಲು ಅವಕಾಶ ನೀಡುವ ಸಲುವಾಗಿ ಅರ್ಜಿ ಸಲ್ಲಿಕೆಗೆ ಮೇ 20 ರವರೆಗೆ ವಿಸ್ತರಿಸಲಾಗಿದೆ.
ಇಲಾಖಾ ವೆಬ್‌ಸೈಟ್ http://www.schooleducation.karnataka.gov.inರಲ್ಲಿ ಆಸಕ್ತ ಪೋಷಕರು ಅರ್ಜಿ ಸಲ್ಲಿಸಬಹುದು ಎಂದು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.