ಸಾರಾಂಶ
ಬೆಳಗ್ಗೆ 11 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಗ್ಯಾರಂಟಿ ಯೋಜನೆಗಳ ಸಮಾವೇಶ ಹಾಗೂ ವಿವಿಧ ಕಾಮಗಾರಿಗಳ ಉದ್ಘಾಟನೆಯನ್ನು ನೆರವೇರಿಸಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್. ಹೆಬ್ಬಾಳಕರ್, ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್. ಮುನಿಯಪ್ಪ ಭಾಗವಹಿಸಲಿದ್ದಾರೆ.
ಕನ್ನಡಪ್ರಭ ವಾರ್ತೆ ಮಣಿಪಾಲರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳ ಸಮಾವೇಶ ಹಾಗೂ ಜಿಲ್ಲೆಯ ವಿವಿಧ ಕಾಮಗಾರಿಗಳ ಉದ್ಘಾಟನಾ ಕಾರ್ಯಕ್ರಮ ಮಾ.13ರಂದು ಬೆಳಗ್ಗೆ 11 ಗಂಟೆಗೆ ಇಲ್ಲಿನ ಕುಂಜಿಬೆಟ್ಟು ಎಂಜಿಎಂ ಕಾಲೇಜಿನ ಆರೂರು ಲಕ್ಷ್ಮೀನಾರಾಯಣ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ ವಿದ್ಯಾಕುಮಾರಿ ತಿಳಿಸಿದರು.ಅವರು ಸೋಮವಾರ ಗ್ಯಾರಂಟಿ ಯೋಜನೆಗಳ ಸಮಾವೇಶದ ಪೂರ್ವಭಾವಿ, ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಅಂದು ಬೆಳಗ್ಗೆ 11 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಗ್ಯಾರಂಟಿ ಯೋಜನೆಗಳ ಸಮಾವೇಶ ಹಾಗೂ ವಿವಿಧ ಕಾಮಗಾರಿಗಳ ಉದ್ಘಾಟನೆಯನ್ನು ನೆರವೇರಿಸಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್. ಹೆಬ್ಬಾಳಕರ್, ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್. ಮುನಿಯಪ್ಪ, ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ, ಇಂಧನ ಸಚಿವ ಕೆ.ಜೆ. ಜಾರ್ಜ್, ಕಂದಾಯ ಸಚಿವ ಕೃಷ್ಣ ಭೈರೇಗೌಡ, ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ ಖರ್ಗೆ, ಕಾರ್ಮಿಕ ಸಚಿವ ಸಂತೋಷ್ ಎಸ್. ಲಾಡ್, ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್ ಪಾಟೀಲ್, ಹಿಂದುಳಿದ ವರ್ಗಗಳ ಇಲಾಖೆ ಸಚಿವ ತಂಗಡಗಿ ಶಿವರಾಜ್ ತಂಗಪ್ಪ, ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ, ಉನ್ನತ ಶಿಕ್ಷಣ ಸಚಿವ ಎನ್.ಸಿ ಸುಧಾಕರ್ ಹಾಗೂ ಮತ್ತಿತರ ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ ಎಂದರು.ಕಾರ್ಯಕ್ರಮದಲ್ಲಿ ಯೋಜನೆಗಳ ಫಲಾನುಭವಿಗಳಿಗೆ ಸೌಲಭ್ಯಗಳ ವಿತರಣೆ ನಡೆಯಲಿದೆ. ಸಮಾವೇಶಕ್ಕೆ ಸಹಸ್ರಾರು ಸಂಖ್ಯೆಯ ಫಲಾನುಭವಿಗಳು ಪಾಲ್ಗೊಳ್ಳಲಿದ್ದು, ಅವರಿಗೆ ಕುಡಿಯುವ ನೀರು, ಊಟದ ವ್ಯವಸ್ಥೆ ಹಾಗೂ ಬಸ್ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ಆಯೋಜಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಮಾತನಾಡಿ, ಸಮಾವೇಶದ ಯಶಸ್ವಿಗೆ ತಾಲೂಕು ಹಾಗೂ ಜಿಲ್ಲಾಮಟ್ಟದ ಅಧಿಕಾರಿಗಳು ಸಮನ್ವಯದೊಂದಿಗೆ ಶಿಸ್ತುಬದ್ಧವಾಗಿ ಕಾರ್ಯ ನಿರ್ವಹಿಸಬೇಕೆಂದು ತಿಳಿಸಿದರು.ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್., ಜಿ.ಪಂ. ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ್ ರಾವ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಐ.ಪಿ. ಗಡಾಧ್, ಜಿಲ್ಲಾಮಟ್ಟದ ಅನುಷ್ಠಾನಾಧಿಕಾರಿಗಳು, ತಹಸೀಲ್ದಾರ್‌ಗಳು, ತಾ.ಪಂ. ಇ.ಓ.ಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.